ಕೊಡಗು-ಮೈಸೂರು ಲೋಕಸಭೆ ಕ್ಷೇತ್ರಕ್ಕೆ ಬೇರೆ ಅಭ್ಯರ್ಥಿ ಯಾರಿದ್ದಾರೆ?: ಪ್ರತಾಪ್‌ ಸಿಂಹ

By Kannadaprabha News  |  First Published Aug 21, 2023, 6:28 PM IST

ಮುಂದಿನ ಬಾರಿಯೂ ಲೋಕಸಭೆಗೆ ನಾನೇ ಅಭ್ಯರ್ಥಿಯಾಗಲು ಸಿದ್ಧತನೆ ನಡೆಸಿದ್ದೇನೆ. ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ನಾನು ಬಿಟ್ಟರೆ ಇನ್ನು ಬೇರೆ ಯಾರಿದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. 


ಕುಶಾಲನಗರ (ಆ.21): ಮುಂದಿನ ಬಾರಿಯೂ ಲೋಕಸಭೆಗೆ ನಾನೇ ಅಭ್ಯರ್ಥಿಯಾಗಲು ಸಿದ್ಧತನೆ ನಡೆಸಿದ್ದೇನೆ. ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ನಾನು ಬಿಟ್ಟರೆ ಇನ್ನು ಬೇರೆ ಯಾರಿದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಕುಶಾಲನಗರದಲ್ಲಿ ತಾಲೂಕು ಒಕ್ಕಲಿಗರ ಸಂಘದ ಸಭೆಯಲ್ಲಿ ಪಾಲ್ಗೊಂಡು ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸತತವಾಗಿ ಮಾಡುವ ಮೂಲಕ ಮುಂದಿನ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದೇನೆ ಎಂದರು. ಮೈಸೂರು- ಬೆಂಗಳೂರು ರಸ್ತೆ ನಿರ್ಮಾಣ ಮಾಡುವಲ್ಲಿ ಎಲ್ಲ ರೀತಿಯ ಪ್ರಯತ್ನ ಮಾಡಿದ್ದೇನೆ. 

ಇದೀಗ ಮೈಸೂರಿನಿಂದ ಕುಶಾಲನಗರ ತನಕ ಹೈವೇ ಕಾಮಗಾರಿ ಸದ್ಯದಲ್ಲಿಯೇ ಪ್ರಾರಂಭಗೊಳ್ಳಲಿದೆ. ಕೊಡಗು ಜಿಲ್ಲೆಯಲ್ಲಿ 62 ಬಿಎಸ್‌ಎನ್‌ಎಲ್‌ ಮೊಬೈಲ್‌ ಟವರ್‌ಗಳನ್ನು ಅಳವಡಿಸುವ ಕಾಮಗಾರಿಗೆ ಗ್ರೀನ್‌ ಸಿಗ್ನಲ್‌ ದೊರೆತಿದೆ. ಕೋಟ್ಯಂತರ ರುಪಾಯಿಗಳ ವೆಚ್ಚದಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ ಕಾಮಗಾರಿ ನಡೆದಿದೆ. ಸಂಪಾಜೆ- ಮಡಿಕೇರಿ ತನಕ ರಸ್ತೆಯ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಮೈಸೂರು- ಕುಶಾಲನಗರ ರೈಲ್ವೆ ಯೋಜನೆಗೆ ಅಂತಿಮ ಸರ್ವೆ ಕಾರ್ಯ ನಡೆದಿದೆ. ಹೀಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸುವ ಮೂಲಕ ಮುಂದಿನ ಲೋಕಸಭಾ ಚುನಾವಣೆಗೆ ಅಭ್ಯರ್ಥಿಯಾಗಲು ಎಲ್ಲ ರೀತಿಯ ಸಿದ್ಧತೆ ನಡೆಸಿದ್ದೇನೆ ಎಂದರು.

Tap to resize

Latest Videos

undefined

ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿದವರು ಅರಸು: ಶೋಭಾ ಕರಂದ್ಲಾಜೆ

16 ತಿಂಗಳಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ಪೂರ್ಣ: ಮೈಸೂರು-ಕುಶಾಲನಗರ ಚತುಷ್ಪಥ ರಸ್ತೆ ಕಾಮಗಾರಿ ಮುಂದಿನ 16 ತಿಂಗಳೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು. ಆನಂತರ ಈ ಭಾಗದ ಭೂಮಿಗೆ ಉತ್ತಮ ಬೆಲೆ ಉಂಟಾಗುವ ಕಾರಣ ಯಾರೂ ಕೂಡ ಜಮೀನು ಮಾರಾಟ ಮಾಡದಿರಿ ಎಂದು ಸಂಸದ ಪ್ರತಾಪ್‌ ಸಿಂಹ ಸಲಹೆ ನೀಡಿದ್ದಾರೆ. ನಂಜರಾಯಪಟ್ಟಣ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದಲ್ಲಿ ಭಾನುವಾರ ನೂತನ ಮಳಿಗೆ ಹಾಗೂ ಗೋದಾಮು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಕಾಂಗ್ರೆಸ್‌ ಸರ್ಕಾರ ಸೂಕ್ತವಾಗಿ ಸ್ಪಂದಿಸಿದಲ್ಲಿ ಕುಶಾಲನಗರದವರೆಗೆ ರೈಲ್ವೇ ಸಂಪರ್ಕ ಕಾಮಗಾರಿ ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ ಎಂದರು.

ನಂಜರಾಯಪಟ್ಟಣ ಗ್ರಾಮೀಣ ಬ್ಯಾಂಕ್‌ನ ನೂತನ ಸುಸಜ್ಜಿತ ಕಟ್ಟಡ ಅತ್ಯಂತ ಆಕರ್ಷಣೀಯವಾಗಿದೆ. ಸಹಕಾರ ಸಂಘಗಳ ಆಡಳಿತ ಮಂಡಳಿ ಉತ್ತಮವಾಗಿ ಕಾರ್ಯನಿರ್ವಹಿಸಿದಲ್ಲಿ ಇಂತಹ ಉತ್ತಮ ಆಸ್ತಿಗಳನ್ನು ಗಳಿಸಬಹುದು. ನಬಾರ್ಡ್‌ನ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡಲ್ಲಿ ಉತ್ತಮ ಕಟ್ಟಡಗಳ ನಿರ್ಮಾಣ ಜೊತೆಗೆ ಸಹಕಾರ ಸಂಘದ ಅಭಿವೃದ್ಧಿ ಸಾಧ್ಯ. ನಂಜರಾಯಪಟ್ಟಣ ಭಾಗದಲ್ಲಿ ಪ್ರವಾಸೋದ್ಯಮ ಬೆಳವಣಿಗೆ ಹೊಂದಿರುವ ಹಿನ್ನೆಲೆಯಲ್ಲಿ ನೂತನ ಅಂಗಡಿ ಮಳಿಗೆಗಳು, ಸಭಾಂಗಣ ಇದಕ್ಕೆ ಪೂರಕವಾಗಿ ನಿರ್ಮಾಣಗೊಂಡಿರುವುದು ಸುತ್ತಮುತ್ತಲಿನ ಗ್ರಾಮಗಳ ಬೆಳವಣಿಗೆಗೆ, ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.

ಕಾಂಗ್ರೆಸ್‌ಗೆ ಬರುತ್ತೇನೆ ಎಂದು ಶಿವರಾಮ ಹೆಬ್ಬಾರ ಹೇಳಿಲ್ಲ: ಶಾಸಕ ಸತೀಶ್‌ ಸೈಲ್‌

ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಮನು ಮುತ್ತಪ್ಪ ಮಾತನಾಡಿ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕೊಡಗಿನ ಸಹಕಾರ ಕ್ಷೇತ್ರ ಛಾಪು ಮೂಡಿಸಿದೆ. ಕೊಡಗಿನ ಸಹಕಾರ ಸಂಘಗಳು ತನ್ನ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುತ್ತಿದೆ ಎಂದರು. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಅಧ್ಯಕ್ಷ ಬಾಂಡ್‌ ಗಣಪತಿ ಮಾತನಾಡಿ, ಕೊಡಗು ಸಹಕಾರ ಸಂಘಗಳು ಪರಸ್ಪರ ಒಂದಕ್ಕೊಂದು ಸ್ಪರ್ಧಾತ್ಮಕವಾಗಿ ಕಾರ್ಯನಿರ್ವಹಿಸುವ ಮೂಲಕ ಉತ್ತಮ ಸೇವೆಯನ್ನು ಸದಸ್ಯರಿಗೆ ಒದಗಿಸುತ್ತಿದೆ. ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದರು.

click me!