ಲಿಂಗಾಯತ ಡಿಸಿಎಂ ಯಾರಿಗೆ ಬೇಕು, ಮಾಡೋದಿದ್ರೆ ಸಿಎಂ ಮಾಡಿ: ಶಾಮನೂರು ಶಿವಶಂಕರಪ್ಪ ಸ್ಪೋಟಕ ಹೇಳಿಕೆ

By Govindaraj SFirst Published Sep 29, 2023, 9:15 PM IST
Highlights

ವೀರಶೈವ ಲಿಂಗಾಯತ ಅಧಿಕಾರಿಗಳನ್ನು ಮೂಲೆ‌ಗುಂಪು ಮಾಡುತ್ತಾರೆ ಎಂದು ಹೇಳಿದ್ದು ನಿಜ. ನಿನ್ನೇ ಬೆಂಗಳೂರಿ‌ನಲ್ಲಿ ವೀರಶೈವ ಮಹಾಸಭಾದ ಕಾರ್ಯಕ್ರಮ ಇತ್ತು. ಆಗ ಅಲ್ಲಿ ಕುಮಾರಸ್ವಾಮಿಗಳ ಪ್ರಶಸ್ತಿ ಪ್ರದಾನ ಮಾಡಿದರು. 

ದಾವಣಗೆರೆ (ಸೆ.29): ವೀರಶೈವ ಲಿಂಗಾಯತ ಅಧಿಕಾರಿಗಳನ್ನು ಮೂಲೆ‌ಗುಂಪು ಮಾಡುತ್ತಾರೆ ಎಂದು ಹೇಳಿದ್ದು ನಿಜ. ನಿನ್ನೇ ಬೆಂಗಳೂರಿ‌ನಲ್ಲಿ ವೀರಶೈವ ಮಹಾಸಭಾದ ಕಾರ್ಯಕ್ರಮ ಇತ್ತು. ಆಗ ಅಲ್ಲಿ ಕುಮಾರಸ್ವಾಮಿಗಳ ಪ್ರಶಸ್ತಿ ಪ್ರದಾನ ಮಾಡಿದರು. ಆ ಸಂದರ್ಭದಲ್ಲಿ ವೇದಿಕೆಯ ಮೇಲೆ ಭಾಷಣ ಮಾಡುವಾಗ ಸತ್ಯವನ್ನು ಹೇಳಿದ್ದೇ‌ನೆ ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮುಖ್ಯವಾದ ಹುದ್ದೆಗಳನ್ನು ಬಹಳಷ್ಟು ಜನರಿಗೆ ಕೊಟ್ಟಿಲ್ಲ. ನಮ್ಮ ಸಮಾಜದ ಅಧಿಕಾರಿಗಳಿಗೆ ತೊಂದರೆಯಾಗಿದೆ. 

ಸ್ವಪಕ್ಷದ ವಿರುದ್ದ ಶಾಮನೂರು ಶಿವಶಂಕರಪ್ಪ ಕಿಡಿಕಾರಿದರು. ಇದರ ಬಗ್ಗೆ ನಾನು ಯಾವುದೇ ಮಂತ್ರಿಗಳ ಬಳಿ ಹೇಳಲು ಹೋಗಿಲ್ಲ. ಲಿಂಗಾಯತ ಸಿಎಂ ವಿಚಾರವಾಗಿ ಶಾಮನೂರು, ಲಿಂಗಾಯತ ಸಿಎಂ ಹಿಂದೆ ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಇದ್ರು. ಆಗ ಎಲ್ರು ಚನ್ನಾಗಿ ಇದ್ರು, ಈಗ ನಮ್ಮವರೆಲ್ಲ ಕಂಗಾಲಾಗಿದ್ದಾರೆ. ವೀರಶೈವ ಲಿಂಗಾಯತ ಶಾಸಕರಿಗೆ ಸ್ಥಾನ ಮಾನ ಸಿಗೋದಿಲ್ಲದೆ ಇರೋದು ಬೇರೇ ವಿಚಾರ ಎಂದರು. ಲಿಂಗಾಯತರಿಗೆ ಡಿಸಿಎಂ ನೀಡುವ ವಿಚಾರವಾಗಿ ಡಿಸಿಎಂ ತಗೊಂಡು ಏನ್ ಮಾಡಬೇಕು ಆದ್ರೆ ಸಿಎಂ ಆಗಬೇಕು ಯಾವಾಗಲೂ ಸಿಎಂ ಹುದ್ದೆಗೆ ಪ್ರಪೋಜಲ್ ಇದ್ದೇ ಇರುತ್ತೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದರು.

ನಟ Jaggesh ದಿಢೀರ್ ಆಸ್ಪತ್ರೆಗೆ ದಾಖಲು: ಆತಂಕ ಹುಟ್ಟಿಸಿದ ನವರಸ ನಾಯಕನ ಪೋಟೋಸ್!

ಲಿಂಗಾಯತ ಅಧಿಕಾರಿಗಳದು ನಾಯಿಪಾಡು: ವೀರಶೈವ ಲಿಂಗಾಯತ ಸಮುದಾಯದ ಹಲವು ಜಾತಿಗಳ ನಡುವೆ ಒಗ್ಗಟ್ಟು ಇಲ್ಲದ ಕಾರಣ ಸಮುದಾಯದ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗುತ್ತಿದೆ. ಹೀಗಾಗಿ, ಸಮುದಾಯದ ಎಲ್ಲರೂ ಒಗ್ಗಟ್ಟಾಗಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ನಗರದ ಜಗದ್ಗುರು ರೇಣುಕಾಚಾರ್ಯ ಮಹಾವಿದ್ಯಾಲಯದ ಷರಾಫ್ ಬಸಪ್ಪ ಸಭಾಂಗಣದಲ್ಲಿ ನಡೆದ ವೀರಶೈವ ಲಿಂಗಾಯತ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ''ಪ್ರತಿಭಾ ಪುರಸ್ಕಾರ ಮತ್ತು ಪೂಜ್ಯ ಹಾನಗಲ್ ಕುಮಾರೇಶ್ವರ ಪ್ರಶಸ್ತಿ ಪ್ರದಾನ'' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ಜಾತಿ ಸಮುದಾಯಗಳು ಅವರವರ ಸಮುದಾಯದ ಅಧಿಕಾರಿಗಳಿಗೆ ಉತ್ತಮ ಹುದ್ದೆ ನೀಡುತ್ತಾರೆ. ಆದರೆ, ನಮ್ಮ ಸಮುದಾಯದಲ್ಲಿ ಒಗ್ಗಟ್ಟಿಲ್ಲದ ಕಾರಣ ಮೂಲೆಗುಂಪು ಮಾಡಲಾಗಿದ್ದು, ಅನ್ಯಾಯವಾಗುತ್ತಿದೆ. ನಮ್ಮವರ ಪಾಡು ನಾಯಿ ಪಾಡು ಆಗಿದೆ. ಮಾಜಿ ಸಿಎಂಗಳಾದ ನಿಜಲಿಂಗಪ್ಪ, ಎಸ್.ಆರ್. ಬೊಮ್ಮಾಯಿ ಹಾಗೂ ವೀರೇಂದ್ರ ಪಾಟೀಲ್ ಅವರ ಅವಧಿಯಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ನೀಡಲಾಗಿತ್ತು. ಆದರೀಗ ಪರಿಸ್ಥಿತಿ ಬದಲಾಗಿ ಮೂಲೆ ಗುಂಪು ಮಾಡಲಾಗಿದೆ. ಹೀಗಾಗಿ, ಸಮುದಾಯ ಒಗ್ಗಟ್ಬಾಗಬೇಕು. ಬೇರೆ ಬೇರೆ ಜಾತಿಗಳೆಂದು ಕಿತ್ತಾಡಬಾರದು ಎಂದು ಸಲಹೆ ನೀಡಿದರು.

ದೇವೇಗೌಡರೇಕೆ ಕಾವೇರಿ ಸಮಸ್ಯೆ ಬಗೆಹರಿಸಲಿಲ್ಲ: ಶಾಸಕ ಬಾಲಕೃಷ್ಣ ಪ್ರಶ್ನೆ?

ಐಪಿಎಸ್ ಅಧಿಕಾರಿ ಜಿ.ಎಚ್. ಸತೀಶ್ ಚಂದ್ರ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಪಡೆಯುವ ಅಂಕಗಳು ಅಷ್ಟೊಂದು ಮುಖ್ಯವಲ್ಲ ಎನ್ನುವುದನ್ನು ನಾವು ಕೇಳುತ್ತಿರುತ್ತೇವೆ. ಆದರೆ, ಈ ಪ್ರತಿಭಾ ಪುರಸ್ಕಾರಕ್ಕೆ ಹೆಚ್ಚು ಅಂಕ ಪಡೆದವರನ್ನೇ ಪರಿಗಣಿಸಲಾಗಿದೆ. ಕಾಲೇಜುಗಳಿಗೆ ಪ್ರವೇಶ, ಕೆಲಸ, ಸಂದರ್ಶನ, ಹುದ್ದೆಗಳಲ್ಲಿ ಅಂಕಗಳನ್ನೇ ಪರಿಗಣಿಸುತ್ತಾರೆ ಎಂಬುದನ್ನು ನಾವು ಮರೆಯಬಾರದು. ಸಂವಹನ, ವೃತ್ತಿ ಕೌಶಲ್ಯ, ಕ್ಷೇತ್ರದ ಪರಿಣತಿ ಜೊತೆಗೆ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುವುದು ಅತಿ ಮುಖ್ಯ. ಪ್ರತಿಯೊಂದು ಕೆಲಸ, ಹುದ್ದೆಗೆ ಭಾರಿ ಪೈಪೋಟಿ ಇದೆ. ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆ ತೀವ್ರವಾಗಿದೆ. ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಮತ್ತೆ ಮತ್ತೆ ಡಿಸಿಎಂ ಹುದ್ದೆ ಬಗ್ಗೆ ಮಾತಾಡದಂತೆ ಕೈನಾಯಕರಿಗೆ ಎಚ್ಚರಿಕೆ!

click me!