
ಬೆಂಗಳೂರು (ಮೇ.31) : ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ವಿಸ್ತರಣೆ ನಡೆಯುವುದು ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ನಂತರವೇ ಎಂದು ಕಾಂಗ್ರೆಸ್(Congress)ನ ಉನ್ನತ ಮೂಲಗಳು ತಿಳಿಸಿವೆ.
ಬುಧವಾರ ಮೊದಲ ಹಂತದ ಸಂಪುಟ ರಚನೆ ನಡೆಯಲಿದೆ. ಈ ವೇಳೆ ಸಿಎಂ ಸೇರಿ 9 ಮಂದಿ ಮಾತ್ರ ಪ್ರಮಾಣ ವಚನ ಸ್ವೀಕಾರ ಮಾಡುವಂತೆ ಮಾಡುವ ಬಗ್ಗೆ ಹೈಕಮಾಂಡ್(Congress high command) ಚಿಂತನೆ ಹೊಂದಿದೆ. ಇದಾದ ನಂತರ ಉಳಿದ ಸ್ಥಾನಗಳ ಭರ್ತಿ ಪ್ರಕ್ರಿಯೆ ನಡೆಯುವುದೇನಿದ್ದರೂ ರಾಜ್ಯಸಭಾ ಹಾಗೂ ವಿಧಾನ ಪರಿಷತ್ ಚುನಾವಣೆ (ಜೂ.18)ನಂತರವೇ ಎಂದು ಖಚಿತ ಮಾಹಿತಿಯಿದೆ.
ಹೀಗೆ ಎರಡನೇ ಹಂತದ ಸಂಪುಟ ವಿಸ್ತರಣೆ ವಿಳಂಬವಾಗಲಿರುವ ಕಾರಣ ಬುಧವಾರದ ಮೊದಲ ಹಂತದಲ್ಲೇ ತಮ್ಮ ಹೆಸರು ಸೇರ್ಪಡೆಯಾಗುವಂತೆ ಮಾಡಲು ಹಿರಿಯ ಸಚಿವರೇ ಪ್ರಬಲ ಲಾಬಿ ಆರಂಭಿಸಿದ್ದಾರೆ. ಹೀಗಾಗಿ ಮೊದಲ ಹಂತದಲ್ಲಿ ಸಿಎಂ ಹೊರತುಪಡಿಸಿ 8 ಮಂದಿಯನ್ನು ಸೇರಿಸಿಕೊಳ್ಳಬೇಕು ಎಂಬ ಹೈಕಮಾಂಡ್ ಲೆಕ್ಕಾಚಾರ ಉಲ್ಟಾ ಆಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.