ಸಾಮಾಜಿಕ ನ್ಯಾಯ ಪರಿಕಲ್ಪನೆಯ ಅಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯಕ್ಕೆ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ಯಾಕೆ ಇಷ್ಟೊಂದು ಗಾಬರಿಯಾಗುತ್ತಿದ್ದಾರೆ? ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಪ್ರಶ್ನಿಸಿದರು.
ಹುಬ್ಬಳ್ಳಿ (ಡಿ.06): ಸಾಮಾಜಿಕ ನ್ಯಾಯ ಪರಿಕಲ್ಪನೆಯ ಅಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯಕ್ಕೆ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ಯಾಕೆ ಇಷ್ಟೊಂದು ಗಾಬರಿಯಾಗುತ್ತಿದ್ದಾರೆ? ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಮುಖ್ಯಮಂತ್ರಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಸರ್ವರಿಗೂ ಸಮಬಾಳು, ಸಮಪಾಲು ಎಂಬ ಮನೋಭಾವನೆಯ ರೀತಿಯಲ್ಲಿ ಹೇಳಿದ್ದಾರೆ. ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದರು.
ಮುಖ್ಯಮತ್ರಿ ಸಿದ್ದರಾಮಯ್ಯ ಅವರು ಯಾವ ಸಮಾವೇಶದಲ್ಲಿ ಹೇಳಿದ್ದಾರೆ ಎನ್ನುವುದು ಮುಖ್ಯ. ಮುಸ್ಲಿಂ ಸಮಾವೇಶದಲ್ಲಿ ಮುಸ್ಲಿಮರಿಗೆ ಏನು ಮಾಡುತ್ತೇವೆ ಎನ್ನುವುದನ್ನು ಹೇಳಬೇಕಾಗುತ್ತದೆ. ಬೇರೆ ಸಮಾವೇಶದಲ್ಲಿ ಬೇರೆಯವರಿಗೆ ಏನು ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ಇದರಲ್ಲಿ ತಪ್ಪು ಹುಡುಕುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದರು. ಚೀನಾದಲ್ಲಿ ಹೊಸ ವೈರಸ್ ಪತ್ತೆ ವಿಚಾರವಾಗಿ ಮಾತನಾಡಿದ ಅವರು, ಇದರ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಾಗಲಿ ಯಾವುದೇ ಸಂಸ್ಥೆಯಾಗಲಿ ಎಚ್ಚರಿಕೆಗಳನ್ನು ನೀಡಿಲ್ಲ. ಜಿಲ್ಲಾ ಆಸ್ಪತ್ರೆಗಳಲ್ಲಿ ಮೆಡಿಸಿನ್ ಕೊರತೆ ವಿಚಾರವಾಗಿ ಮಾತನಾಡಿದ ಗುಂಡೂರಾವ್, ಬೇರೆ ಬೇರೆ ಕಾರಣಗಳಿಂದ ಔಷಧ ಕೊರತೆಯಾಗುತ್ತಿದೆ. ಈ ಸಮಸ್ಯೆ ಸರಿಪಡಿಸಲು ಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಬಿಜೆಪಿ ಗೆಲುವಿಗೆ ಮೋದಿ ಕೊಟ್ಟ ಹಣವೇ ಕಾರಣ: ಶಾಸಕ ಕೆ.ಎಂ.ಉದಯ್ ಆರೋಪ
ಮಾನಸಿಕ ಅಸ್ವಸ್ಥರಿಗೆ ಜಿಲ್ಲಾಸ್ಪತ್ರೆಗಳಲ್ಲಿ 5 ಹಾಸಿಗೆ ಮೀಸಲು: ರಾಜ್ಯದಲ್ಲಿನ ನಿರಾಶ್ರಿತರು ಮತ್ತು ಮಾನಸಿಕ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ತಲಾ 5 ಹಾಸಿಗೆಗಳನ್ನು ಕಾಯ್ದಿರಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಕಾಂಗ್ರೆಸ್‌ನ ಅಬ್ದುಲ್ ಜಬ್ಬಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್, ರಾಜ್ಯದಲ್ಲಿನ ಸರ್ಕಾರಿ ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಕಳೆದ ವರ್ಷ 9.40 ಲಕ್ಷ ಜನರಿಗೆ ಚಿಕಿತ್ಸೆ ಮತ್ತು ಸಮಾಲೋಚನೆ ಮಾಡಲಾಗಿದೆ. ಆದರೂ, ರಾಜ್ಯದಲ್ಲಿನ ನಿರಾಶ್ರಿತರು ಮತ್ತು ಮಾನಸಿಕ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ತಲಾ 5 ಹಾಸಿಗೆಗಳನ್ನು ಕಾಯ್ದಿರಸಲು ನಿರ್ಧರಿಸಲಾಗಿದೆ.
ಅಕ್ಕಿ ಹಗರಣದ ತನಿಖೆ ಮುಗಿಯುವವರೆಗೆ ಚುನಾವಣೆ ಬೇಡ: ಎಸ್.ಗಂಗಾಧರ್
ಜತೆಗೆ ನಿರಾಶ್ರಿತರು ಮತ್ತು ಮಾನಸಿಕ ಅಸ್ವಸ್ಥರನ್ನು ಪತ್ತೆ ಮಾಡಲು ಸರ್ಕಾರೇತರ ಸಂಸ್ಥೆಗಳ ನೆರವು ಪಡೆಯಲಾಗುತ್ತಿದೆ ಎಂದರು. ನಿರಾಶ್ರಿತರು ಮತ್ತು ಮಾನಸಿಕ ಅಸ್ವಸ್ಥರನ್ನು ಪೊಲೀಸರು ಸುಲಭವಾಗಿ ಪತ್ತೆ ಮಾಡಬಹುದಾಗಿದೆ. ಅದಕ್ಕಾಗಿ ಪೊಲೀಸರು ಹೊಸದಾಗಿ ನೇಮಕವಾಗುವ ನೀಡಲಾಗುವ ತರಬೇತಿ ಸಂದರ್ಭದಲ್ಲಿಯೇ ಈ ಕುರಿತು ಜಾಗೃತಿ ಮೂಡಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ನಿರಾಶ್ರಿತರು ಮತ್ತು ಮಾನಸಿಕ ಅಸ್ವಸ್ಥರು ಕಂಡ ಕೂಡಲೆ ಅವರನ್ನು ಆಸ್ಪತ್ರೆಗಳಿಗೆ ದಾಖಲಿಸುವಂತೆ ತರಬೇತಿ ನೀಡುವ ಚಿಂತನೆಯಿದೆ. ನ್ಯಾ. ಕುಮಾರ್ ನೇತೃತ್ವದ ಸಮಿತಿಯೂ ಶಿಫಾರಸು ಮಾಡಿದ್ದು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.