Belagavi Winter Session ಅಧಿವೇಶನಕ್ಕೆ ಹೋಗಿ ಏನ್ಮಾಡಲಿ? ಪ್ರತಿ ದಿನ ಕಲಾಪ ವ್ಯರ್ಥ ಎಂದ ಹೆಚ್‌ಡಿ ಕುಮಾರಸ್ವಾಮಿ!

Published : Dec 21, 2021, 03:25 AM IST
Belagavi Winter Session ಅಧಿವೇಶನಕ್ಕೆ ಹೋಗಿ ಏನ್ಮಾಡಲಿ? ಪ್ರತಿ ದಿನ ಕಲಾಪ ವ್ಯರ್ಥ ಎಂದ ಹೆಚ್‌ಡಿ ಕುಮಾರಸ್ವಾಮಿ!

ಸಾರಾಂಶ

ಕಲಾಪದಲ್ಲಿ ಏನ್‌ ಚರ್ಚೆ ಆಯ್ತು? ಅಧಿವೇಶನಕ್ಕೆ ಹೋಗಿ ಏನ್ಮಾಡಲಿ?  5 ದಿನದ ಕಲಾಪ ಎಷ್ಟುಮೌಲ್ಯಾಧಾರಿತವಾಗಿತ್ತು? ಟಿಎ, ಡಿಎ ಪಡೆಯಲು ಕಲಾಪಕ್ಕೆ ಹೋಗಬೇಕಷ್ಟೆ ಮಾರ್ಮಿಕವಾಗಿ ಪ್ರಶ್ನಿಸಿಧ ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು(ಡಿ.21);  ವಿಧಾನ ಮಂಡಲದ ಅಧಿವೇಶನಕ್ಕೆ(Belagavi Winter Session) ಹೋಗಿ ಏನು ಮಾಡಲಿ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ(HD Kumaraswamy) ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಐದು ದಿನ ಕಲಾಪ ನಡೆದಿದೆ. ಕಲಾಪ ಅದೆಷ್ಟುಮೌಲ್ಯಾಧಾರಿತವಾಗಿತ್ತು? ಒಂದು ದಿನ ಬೈರತಿ ಬಸವರಾಜು ಪ್ರಕರಣ ಇಟ್ಟುಕೊಂಡು ಬಾವಿಗೆ ಇಳಿದರು. ಇನ್ನೊಂದು ದಿನ ಸಂಡೂರು ತಹಸೀಲ್ದಾರ್‌ ವಿಷಯ ಇಟ್ಟುಕೊಂಡು ಇಡೀ ದಿನದ ಕಲಾಪವನ್ನು ವ್ಯರ್ಥ ಮಾಡಿದರು. ಮತ್ತೊಂದು ದಿನ ಮಾಜಿ ಸ್ಪೀಕರ್‌ ಹೇಳಿಕೆಗೆ ಕಲಾಪ ಬಲಿ ಆಯಿತು. ಕಲಾಪದಲ್ಲಿ ಏನು ಚರ್ಚೆ ಆಯಿತು? ಇದನ್ನೆಲ್ಲ ಕೇಳಲಿಕ್ಕೆ ನೋಡಲಿಕ್ಕೆ ಹೋಗಬೇಕಿತ್ತಾ ನಾನು? ಟಿಎ, ಡಿಎ ಬಿಲ್‌ ಕ್ಲೈಮ್‌ ಮಾಡಿಕೊಳ್ಳಲು ಹೋಗಬೇಕು ಅಷ್ಟೇ ಎಂದರು. ಆದರೂ ಬೆಳಗಾವಿಗೆ ಹೋಗುತ್ತೇನೆ. ಮಂಗಳವಾರ ಮತ್ತು ಬುಧವಾರ ನಾನು ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳು ಮತ್ತು ಸಮಸ್ಯೆಗಳ ಮಾತನಾಡುತ್ತೇನೆ ಎಂದರು.

ಮಂಗಳವಾರ ನಾನು ಅಧಿವೇಶನಕ್ಕೆ ಹೋಗುತ್ತೇನೆ. ಸದನಕ್ಕೆ ಬೇಕಿಲ್ಲದ ವಿಷಯಗಳಿಗೆ ಮಹತ್ವ ಕೊಡುವ ವ್ಯಕ್ತಿ ನಾನಲ್ಲ. ಕಳೆದ ಬಾರಿ ಬೆಂಗಳೂರಿನಲ್ಲಿ(Bengaluru) ನಡೆದ ಅಧಿವೇಶನದಲ್ಲಿ ಕೊರೋನಾ(Coronavirus) ಬಗ್ಗೆ ಸರ್ಕಾರಕ್ಕೆ ಗುಣಾತ್ಮಕ ಸಲಹೆ ನೀಡಿದ್ದೆ. ಅದು ಎಷ್ಟರ ಮಟ್ಟಿಗೆ ಜಾರಿ ಆಗಿದೆಯೋ ಗೊತ್ತಿಲ್ಲಗುರುವಾರ ಮತ್ತೆ ನಾನು ಬಿಡದಿಗೆ ವಾಪಸ್‌ ಬರಬೇಕಿದೆ. ಅಲ್ಲಿ ಪಟ್ಟಣ ಪಂಚಾಯತಿ ಚುನಾವಣೆ ಇದೆ ಎಂದು ತಿಳಿಸಿದರು.

Anti Conversion Law: ಸಂಪುಟ ಒಪ್ಪಿಗೆ, ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಮುಹೂರ್ತ ಫಿಕ್ಸ್

ಬೊಮ್ಮಾಯಿ ಭಾವನಾತ್ಮಕ ಹೇಳಿಕೆ ತಪ್ಪೇನಲ್ಲ. ಹೃದಯ ಇದ್ದವರಿಗೆ ಮಾತ್ರ ಅವರ ಭಾವನೆ ಅರ್ಥವಾಗುತ್ತದೆ. ಬೇರೆಯವರಿಗೆ ಅದು ಅರ್ಥ ಆಗಲ್ಲ. ಶಿಗ್ಗಾಂವಿಯಲ್ಲಿ ಅವರು ನಾಲ್ಕು ಚುನಾವಣೆಗಳನ್ನು ಸತತವಾಗಿ ಗೆದ್ದಿದ್ದಾರೆ. ಜನ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಆ ಭಾವನೆಗಳು ಸಹಜ. ಭಾವನಾತ್ಮಕ ವ್ಯಕ್ತಿಗಳಿಗೆ ಮಾತ್ರ ಅದು ಅರ್ಥವಾಗುತ್ತದೆ.ಭಾವನೆಗಳನ್ನು ಗೌರವಿಸಬೇಕು.
-ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಒಂದು ವಾರ ಅಧಿವೇಶನ ವಿಸ್ತರಿಸಲು ಸಿಎಂ, ಸ್ಪೀಕರ್‌ಗೆ ಸಿದ್ದು ಪತ್ರ
ಪ್ರಸ್ತುತ ಡಿಸೆಂಬರ್‌ 24ರವರೆಗೆ ನಿಗದಿಯಾಗಿರುವ ರಾಜ್ಯ ವಿಧಾನ ಮಂಡಲ ಅಧಿವೇಶನವನ್ನು ಕನಿಷ್ಠ ಪಕ್ಷ ಇನ್ನೂ ಒಂದು ವಾರ ವಿಸ್ತರಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(siddaramaiah) ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿರುವ ಅವರು, ಮೂರು ವರ್ಷಗಳ ಬಳಿಕ ಬೆಳಗಾವಿಯಲ್ಲಿ 10 ದಿನಗಳ ಕಾಲದ ಅಧಿವೇಶನ ನಡೆಯುತ್ತಿದೆ. ಅಧಿವೇಶನದಲ್ಲಿ ಪ್ರವಾಹ, ಅತಿವೃಷ್ಟಿ, ಉತ್ತರ ಕರ್ನಾಟಕದ ನೀರಾವರಿ ವಿಷಯ, ಕೃಷಿ ಬಿಕ್ಕಟ್ಟು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದ ಸಮಸ್ಯೆಗಳು, ನಿರುದ್ಯೋಗ, ಪ್ರಾದೇಶಿಕ ಅಸಮಾನತೆ, ಭ್ರಷ್ಟಾಚಾರ ಮತ್ತಿತರ ಚರ್ಚಿಸಬೇಕಾಗಿದೆ. ಆದರೆ, ಅಧಿವೇಶನ ನಡೆಯುವ ಸಂದರ್ಭದಲ್ಲೇ ದುರುದ್ದೇಶಪೂರ್ವಕವಾಗಿ ಕೆಲವು ದುಷ್ಟಶಕ್ತಿಗಳು ಪ್ರತಿಮೆಗೆ ಹಾನಿ ಮಾಡುವ, ನಾಡ ಧ್ವಜ ಸುಡುವ ಮೂಲಕ ಜನರ ಗಮನ ಬೇರೆಡೆ ಸೆಳೆಯುವ ಕೆಲಸ ಮಾಡುತ್ತಿವೆ ಎಂದಿದ್ದಾರೆ.

Religious Conversion: 2023ಕ್ಕೆ ಅಧಿಕಾರಕ್ಕೆ ಬರ್ತೇವೆ, ಮತಾಂತರ ನಿಷೇಧ ಕಾಯ್ದೆ ಹಿಂಪಡಿತೇವೆ: ಸಿದ್ದು

ಜೊತೆಗೆ ಸರ್ಕಾರವು ಪ್ರತಿಪಕ್ಷಗಳ ನ್ಯಾಯಯುತ ಬೇಡಿಕೆಗಳನ್ನು ಪ್ರಜಾ ತಾಂತ್ರಿಕವಾಗಿ ಬಗೆಹರಿಸದೆ ಮೊಂಡು ಹಠಕ್ಕೆ ಬಿದ್ದಿದೆ. ಇದರಿಂದಾಗಿ ಚರ್ಚೆಗೆ ಬೇಕಾದಷ್ಟುಸಮಯ ಸಿಗುತ್ತಿಲ್ಲ. ಆದ್ದರಿಂದ ಈ ಎಲ್ಲಾ ವಿಷಯಗಳ ಚರ್ಚೆಗೆ ಅಧಿವೇಶನವನ್ನು ಕನಿಷ್ಠ ಒಂದು ವಾರ ಕಾಲ ವಿಸ್ತರಿಸಲು ಕ್ರಮ ವಹಿಸಬೇಕು ಎಂದು ಸಿದ್ದರಾಮಯ್ಯ ಕೋರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ