ಜಮೀರ್ ನಮಗ್ಯಾಕೆ ಫಂಡಿಂಗ್ ಮಾಡ್ತಾನೆ?: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್ ಪ್ರಶ್ನೆ

Kannadaprabha News   | Kannada Prabha
Published : Apr 15, 2026, 08:46 AM IST
SDPI State President Abdul Majeed

ಸಾರಾಂಶ

ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಪಕ್ಷಕ್ಕೆ ಫಂಡಿಂಗ್ ಮಾಡಿದ್ದಾರೆ ಎಂಬ ಆರೋಪವನ್ನು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್ ತಳ್ಳಿಹಾಕಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಕಾರಣ ಜನರು ಎಸ್‌ಡಿಪಿಐಗೆ ಮತ ಹಾಕಿದ್ದಾರೆ ಎಂದರು.

ಮಂಗಳೂರು (ಏ.15): ಸಚಿವ ಜಮೀರ್‌ ಅಹ್ಮದ್‌ ಖಾನ್‌ ಒಂದು ರಾಜಕೀಯ ಪಕ್ಷದ ಮಂತ್ರಿ ಆಗಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಯಾಕೆ ಫಂಡಿಂಗ್‌ ಮಾಡುತ್ತಾರೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಪ್ರಶ್ನಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಜೀದ್‌ಗೆ ಪತ್ರಕರ್ತರು ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಎಸ್‌ಡಿಪಿಐಗೆ ಸಚಿವ ಜಮೀರ್ ಫಂಡಿಂಗ್ ಮಾಡಿದ ಆರೋಪ‌ದ ಕುರಿತ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಕ್ರೌಡ್ ಫಂಡಿಂಗ್ ಮೂಲಕ ಚುನಾವಣೆ ಎದುರಿಸೋದು. ಜನ ನಮಗೆ ನೋಟು ಕೊಟ್ಟಿದ್ದಾರೆ, ಓಟು ಕೊಟ್ಟಿದ್ದಾರೆ. ವ್ಯಕ್ತಿಯೊಬ್ಬರಿಂದ ಫಂಡಿಂಗ್ ತೆಗೆದುಕೊಳ್ಳುವ ವ್ಯವಸ್ಥೆ ನಮ್ಮಲ್ಲಿಲ್ಲ‌ ಎಂದರು.

ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇ.38ರಷ್ಟು ಮುಸ್ಲಿಮ್‌ ಜನಸಂಖ್ಯೆ ಇದ್ದು, ಮುಸ್ಲಿಮರಿಗೆ ಟಿಕೆಟ್‌ ನೀಡುವ ಒತ್ತಾಯ ಕೇಳಿ ಬಂದಿದ್ದರೂ ಇತರ ಪಕ್ಷಗಳು ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಿಲ್ಲ. ಆ ಕಾರಣಕ್ಕೆ ಕಾಂಗ್ರೆಸ್‌ ವಿರುದ್ಧ, ಎಸ್‌ಡಿಪಿಐ ಪರವಾಗಿ ಜನರು ಮತ ಹಾಕಿದ್ದಾರೆ. ಕಾಂಗ್ರೆಸ್‌ಗೆ ಸೋಲಿನ ಭೀತಿ ಆವರಿಸಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ತಕ್ಷಣ ತಾಪಂ, ಜಿಪಂ ಚುನಾವಣೆ ನಡೆಸಬೇಕು. ಕೇಂದ್ರ ಸರ್ಕಾರ ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. ಅನುದಾನ ತರಲು ಸಾಧ್ಯವಾಗದ 28 ಸಂಸದರು ರಾಜ್ಯದ ಜನರ ಕ್ಷಮೆ ಯಾಚನೆ ಮಾಡಬೇಕು ಎಂದು ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Karnataka cabinet reshuffle : 'ಸಿಎಂ ಆರ್ಥಿಕ ಸಲಹೆಗಾರ' ಎಂದು ಸುಮ್ನೆ ಹುದ್ದೆ ಕೊಟ್ಟಿದ್ದಾರೆ: ರಾಯರಡ್ಡಿ
ಕಾಂಗ್ರೆಸ್ ಏನೇ ಪುಂಗಿ ಬಾರಿಸಿದರೂ 2 ಕ್ಷೇತ್ರದಲ್ಲಿ ಬಿಜೆಪಿಯೇ ಗೆಲ್ಲುವುದು; ವಿಜಯೇಂದ್ರ ವಾಗ್ದಾಳಿ