
ಬೆಂಗಳೂರು(ಆ.07): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಮಂತ್ರಿವರೆಗೆ ಹೋಗಿದ್ದಾರೆ. ಹೀಗಾಗಿ ಅವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು. ಅದಕ್ಕೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನೈಸ್ ಅಕ್ರಮದ ಕುರಿತು ಪ್ರಧಾನಿಗಳಿಗೆ ದೂರು ನೀಡುವುದಾಗಿ ಕುಮಾರಸ್ವಾಮಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದರು.
ಕುಮಾರಸ್ವಾಮಿ ಅವರ ಆರೋಪಕ್ಕೆ ಸಮಯ ಬಂದಾಗ ನಾನು ಉತ್ತರ ನೀಡುತ್ತೇನೆ. ನನಗೂ ಅವರ ಬಗ್ಗೆ ಗೊತ್ತಿದೆ. ಅವರ ವಿರುದ್ಧ, ಅವರ ತಂದೆ ವಿರುದ್ಧ ನಾನು ಸ್ಪರ್ಧಿಸಿದ್ದೇನೆ. ಅವರ ಪತ್ನಿ ವಿರುದ್ಧ ನನ್ನ ತಮ್ಮ ಸ್ಪರ್ಧಿಸಿದ್ದಾರೆ. ಕಾದು ನೋಡಿ, ಈಗ ನಾನು ಹೆಚ್ಚಾಗಿ ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು.
ಐದು ಗ್ಯಾರಂಟಿಗಳ ಕಾರಣದಿಂದ ಈ ವರ್ಷ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಅವರು ಪ್ರಧಾನಮಂತ್ರಿವರೆಗೆ ಹೋಗಿದ್ದಾರೆ. ಹೀಗಾಗಿ ಅವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು. ಅದಕ್ಕೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡುತ್ತೇನೆ. ಕಾಯುತ್ತಿರಿ ಎಂದು ಸೂಚ್ಯವಾಗಿ ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮಾತನಾಡಿ, ಪಾಪ ಎಚ್.ಡಿ. ಕುಮಾರಸ್ವಾಮಿ ಅವರು ಸದನದಲ್ಲಿ ಪೆನ್‌ಡ್ರೈವ್ ತೋರಿಸುತ್ತೇನೆ ಎಂದಿದ್ದರು. ಅವರಿಗೆ ಸದನಕ್ಕಿಂತ ದೊಡ್ಡ ವೇದಿಕೆ ಬೇರೊಂದಿರಲಿಲ್ಲ. ಅಲ್ಲಿಯೇ ಅವರು ಬಹಿರಂಗಪಡಿಸಲಿಲ್ಲ. ಇದರಿಂದ ಕುಮಾರಸ್ವಾಮಿ ಅವರ ಹೇಳಿಕೆಗಳೆಲ್ಲಾ ಗಾಳಿಯಲ್ಲಿ ಗುಂಡು ಎಂಬುದು ಸಾಬೀತಾಗಿದೆ. ಅವರು ನೈಸ್ ವಿಚಾರದಲ್ಲಿ ಚರ್ಚಿಸಿದರೂ ನಾವು ಚರ್ಚೆಗೆ ಸಿದ್ಧವಾಗಿದ್ದೇವೆ ಎಂದು ಹೇಳಿದರು.
ಕುಮಾರಸ್ವಾಮಿ ನೆಮ್ಮದಿ ಹಾಳಾಗಿದೆ: ಕಾಂಗ್ರೆಸ್
ಈ ಬಗ್ಗೆ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್.ಡಿ. ಕುಮಾರಸ್ವಾಮಿ ನಿದ್ರೆ-ನೆಮ್ಮದಿ ಹಾರಿ ಹೋಗಿದೆ. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಅವರು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ? ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿಹಾಕಿಲ್ಲ ಎಂದು ಸವಾಲು ಹಾಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.