ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ಅಭಿವೃದ್ಧಿ ಕಾರ್ಯಗಳನ್ನು ಯಶವಂತಪುರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹಾಡಿ ಹೊಗಳಿದ್ದಾರೆ. ಇದರಿಂದಾಗಿ ಕ್ರಮೇಣ ಬಿಜೆಪಿಯಿಂದ ದೂರ ಸರಿಯುತ್ತಿರುವ ಸೋಮಶೇಖರ್ ಅವರ ನಡೆಯು ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುವಂತೆ ಮಾಡಿದೆ.
ಬೆಂಗಳೂರು (ಫೆ.19) : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ಅಭಿವೃದ್ಧಿ ಕಾರ್ಯಗಳನ್ನು ಯಶವಂತಪುರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹಾಡಿ ಹೊಗಳಿದ್ದಾರೆ. ಇದರಿಂದಾಗಿ ಕ್ರಮೇಣ ಬಿಜೆಪಿಯಿಂದ ದೂರ ಸರಿಯುತ್ತಿರುವ ಸೋಮಶೇಖರ್ ಅವರ ನಡೆಯು ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುವಂತೆ ಮಾಡಿದೆ.
ಇತ್ತೀಚೆಗೆ ಸಿದ್ದರಾಮಯ್ಯ ಬಜೆಟ್ ಅನ್ನು ಎಸ್‌ಟಿಎಸ್ ಶ್ಲಾಘಿಸಿದ್ದರು. ಅಲ್ಲದೆ, ಅನೇಕ ಬಿಜೆಪಿ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು.
ಬಿಜೆಪಿಯಲ್ಲೇ ಇದ್ದರೂ ನನ್ನನ್ನು ರಾಜ್ಯ ಕಾರಕಾರಿಣಿಗೆ ಕರೆದಿಲ್ಲ: ಎಸ್.ಟಿ.ಸೋಮಶೇಖರ್
ಭಾನುವಾರ ಬೆಂಗಳೂರು ವಿಶ್ವ ವಿದ್ಯಾಲಯ ಮೈದಾನದಲ್ಲಿ ಆಯೋಜಿಸಿದ್ದ ಜನರ ಹಲವಾಲು ಸ್ವೀಕರಿಸುವ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಶಿವಕುಮಾರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಬಳಿಕ ಕಳೆದ ಎಂಟು ತಿಂಗಳಿನಲ್ಲಿ ನಗರದ ಅಭಿವೃದ್ಧಿ ಸಂಬಂಧಿಸಿದಂತೆ ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತಿದ್ದಾರೆ. ನಗರದ ಜನರ ಸಮಸ್ಯೆಗಳ ಕುರಿತು ಅಹವಾಲು ಸ್ವೀಕರಿಸುವ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಬಹುತೇಕ ಯಶಸ್ವಿಯಾಗಿದ್ದು, ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತಿದೆ ಎಂದರು.
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿರುವ ಐದು ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಬೇರೆ ಸ್ಥಳಗಳಿಗೆ ಸ್ಥಳಾಂತರಕ್ಕೆ ಮನವಿ ಮಾಡಲಾಗಿತ್ತು. ಅದಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಸ್ಪಂದಿಸಿ ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ ಎಂದರು.
ನನ್ನ ತಮ್ಮ ದೆಹಲಿಯಲ್ಲಿ ಕೂರುವ ಸಂಸದ ಅಲ್ಲ, ಅವನು ಹಳ್ಳಿಯ ಸಂಸದ: ಡಿಕೆ ಶಿವಕುಮಾರ
110 ಹಳ್ಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಆ ಸಮಸ್ಯೆ ಪರಿಹಾರಕ್ಕೆ ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯು ನಾಲ್ಕು ತಿಂಗಳು ಮೊದಲೇ ಮುಕ್ತಾಯಗೊಳ್ಳಬೇಕಾಗಿತ್ತು. ಆದರೆ, ಅರಣ್ಯ ಭಾಗದಲ್ಲಿ ಕಾಮಗಾರಿಗೆ ಅಡ್ಡಿ ಉಂಟಾಗಿತ್ತು. ಆ ಸಮಸ್ಯೆಯನ್ನು ಸಂಸದ ಡಿ.ಕೆ.ಸುರೇಶ್ ಪರಿಹಾರ ಮಾಡಿದ ಫಲದಿಂದ ಮೇ ವೇಳೆಗೆ 110 ಹಳ್ಳಿಗಳಿಗೆ ಕಾವೇರಿ ನೀರು ಲಭ್ಯವಾಗುತ್ತಿದೆ. ಇನ್ನು ಕನಕಪುರದ ನೈಸ್ ಜಂಕ್ಷನ್ ನಲ್ಲಿ ನಾಲ್ಕು ರಸ್ತೆಗಳನ್ನು ಮಾಡುವ ಕೆಲಸವನ್ನು ಡಿ.ಕೆ ಸುರೇಶ್ ಅವರು ಮಾಡಿದ್ದಾರೆ. ಹೀಗಾಗಿ ಅವರಿಗೆ ಧನ್ಯವಾದಗಳು ಎಂದರು.
ಕೆಂಪೇಗೌಡ ಬಡಾವಣೆಯಲ್ಲಿ ಕುಡಿಯುವ ನೀರು, ಯುಜಿಟಿ ಮಾಡಿಸಬೇಕಿದೆ. ರೈತರಿಗೆ ಶೇ40 ರಷ್ಟು ನಿವೇಶನ ವಿತರಣೆ ಆಗಬೇಕು. ಹೇರೋಹಳ್ಳಿಯಲ್ಲಿ ಅಕ್ರಮವಾಗಿ ಬಡಾವಣೆ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು. ಶುದ್ಧಕುಡಿಯುವ ನೀರಿನ ಘಟಕಗಳಿಗೆ ಟೆಂಡರ್ ಮಾಡಿದ ಬಳಿಕ ಘಟಕಗಳು ಕೆಲಸ ಮಾಡುತ್ತಿಲ್ಲ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ. ಜನಪ್ರತಿನಿಧಿಗಳ ಅಭಿಪ್ರಾಯ ಪಡೆಯದೇ ಅಧಿಕಾರಿಗಳು ಈ ರೀತಿ ಮಾಡಿದ್ದಾರೆ. ಇದರಿಂದ ಉಪ ಮುಖ್ಯಮಂತ್ರಿಗಳಿಗೆ ಕೆಟ್ಟ ಹೆಸರು ಬರಲಿದೆ ಎಂದರು.