ನನಗೆ ಟಿಕೆಟ್‌ ಸಿಗದಿದ್ದರೆ ಮಗನಿಗೆ ಕೊಡಿಸುವೆ: ಸಚಿವ ಎಂಟಿಬಿ ನಾಗರಾಜ್‌

Published : Oct 13, 2022, 01:00 AM IST
ನನಗೆ ಟಿಕೆಟ್‌ ಸಿಗದಿದ್ದರೆ ಮಗನಿಗೆ ಕೊಡಿಸುವೆ: ಸಚಿವ ಎಂಟಿಬಿ ನಾಗರಾಜ್‌

ಸಾರಾಂಶ

70 ವರ್ಷ ದಾಟಿದವರಿಗೆ ಪಕ್ಷ ವಿಧಾನಸಭೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡದಿದ್ದರೆ ನಾನು ವಿಧಾನ ಪರಿಷತ್ತು ಸದಸ್ಯನಾಗಿ ಇರುತ್ತೇನೆ. ನನ್ನ ಮಗನಿಗೆ ಟಿಕೆಟ್ ಕೊಡಿಸುತ್ತೇನೆಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹೇಳಿದರು.

ಚಿಕ್ಕಬಳ್ಳಾಪುರ (ಅ.13): 70 ವರ್ಷ ದಾಟಿದವರಿಗೆ ಪಕ್ಷ ವಿಧಾನಸಭೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡದಿದ್ದರೆ ನಾನು ವಿಧಾನ ಪರಿಷತ್ತು ಸದಸ್ಯನಾಗಿ ಇರುತ್ತೇನೆ. ನನ್ನ ಮಗನಿಗೆ ಟಿಕೆಟ್ ಕೊಡಿಸುತ್ತೇನೆಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹೇಳಿದರು. ಚಿಕ್ಕಬಳ್ಳಾಪುರ ಜಿಪಂ ಸಭಾಂಗಣದಲ್ಲಿ ಬುಧವಾರ ತ್ರೈಮಾಸಿಕ ಕೆಡಿಪಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 70 ವರ್ಷ ದಾಟಿದವರಿಗೆ ಟಿಕೆಟ್ ನೀಡದಿರಲು ಪಕ್ಷದ ವಲಯದಲ್ಲಿ ಚರ್ಚೆ ಆಗುತ್ತಿರುವ ಬಗ್ಗೆ ಕೇಳಿ ಬರುತ್ತಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ತೀಕ್ಷಣ ಪ್ರತಿಕ್ರಿಯೆ ನೀಡಿದ ಎಂಟಿಬಿ, ಆ ರೀತಿ ಪಕ್ಷದ ವರಿಷ್ಠರು ನಿರ್ಧರಿಸಿದರೆ ನನ್ನ ಮಗನಿಗೆ ಟಿಕೆಟ್ ಕೊಡಿಸುತ್ತೇನೆಂದರು.

ನಾನು 35, 40 ವರ್ಷ ಸಾರ್ವಜನಿಕ ಜೀವನದಲ್ಲಿ ಸೇವೆ ಮಾಡಿದ್ದೇನೆ. ನನಗೆ ತೃಪ್ತಿ ಇದೆ. ಈಗಲೂ ವಿಧಾನ ಪರಿಷತ್ತು ಸದಸ್ಯನಾಗಿ ಇನ್ನೂ 3 ವರ್ಷ ಚುನಾವಣೆ ಮುಗಿದರೂ ಕೂಡ ಇರುತ್ತೇನೆಂದರು. ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಿಂದ ಬಿಜೆಪಿಗೆ ಯಾವುದೇ ರೀತಿ ನಡುಕ ಇಲ್ಲ. ಇನ್ನೂ ನಮಗೆ ಧೈರ್ಯ ಬಂದಿದೆ. ರಾಜ್ಯದ ಜನರ ನಾಡಮಿಡಿತ ನಮಗೆ ಈಗಾಗಲೇ ಗೊತ್ತಾಗಿದೆ. ಮುಂದಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಜನ ಬಿಜೆಪಿಗೆ ಅರ್ಶೀವಾದ ಮಾಡಿ ಕೇಂದ್ರ ಹಾಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರ್ಕಾರ ಸ್ಥಾಪನೆ ಆಗಲಿದೆ ಎಂದರು.

ಸಿದ್ದರಾಮಯ್ಯ ನನಗೆ ಫೋನ್ ಮಾಡ್ತಾರೆ : ಎಂಟಿಬಿ ನಾಗರಾಜ್

ಕೈ ಸೇರಲ್ಲ. ಬಿಜೆಪಿ ಬಿಡಲ್ಲ: ಕಾಂಗ್ರೆಸ್ ಸೇರುವ ವದಂತಿ ಕುರಿತು ಪ್ರತಿಕ್ರಿಯಿಸಿ, ನಾನು ಕಾಂಗ್ರೆಸ್ ಸೇರುತ್ತೇನೆಂದು ಹೇಳಿಯು ಹೇಳಿಲ್ಲ. ನಾನು 38 ವರ್ಷ ರಾಜಕೀಯ ಜೀವನದಲ್ಲಿ ಇದ್ದೇನೆ. ನಗರಸಭಾ ಸದಸ್ಯನಾಗಿ, 3 ಬಾರಿ ಶಾಸಕನಾಗಿ  ಈಗ ಎಂಎಲ್ಸಿ ಆಗಿದ್ದೇನೆ.  ಎರಡು ಬಾರಿ ಸಚಿವನಾಗಿದ್ದೇನೆ. ನಾನು ಯಾವುದೇ ಆಸೆ, ಅಮಿಷಗಳಿಗೆ ಬಲಿಯಾಗಿ ಪಕ್ಷ ಬಿಟ್ಟವನಲ್ಲ. ನನ್ನದು ತೆರೆದು ಪುಸ್ತಕ. ಕೆಲವು ಕಾರಣಾಂತರಗಳಿಂದ ಸಮ್ಮಿಶ್ರ ಸರ್ಕಾರ ಬಿಟ್ಟು ಬಿಜೆಪಿಗೆ ಬಂದಿದ್ದು ನಿಜ. ಜನರ ಅರ್ಶೀವಾದದಿಂದ ಅಧಿಕಾರಕ್ಕೆ ಬಂದರೆ ಪ್ರಾಮಾಣಿಕವಾಗಿ ಜನ ಸೇವೆ ಮಾಡಬೇಕೆಂದು ರಾಜಕಾರಣಕ್ಕೆ ಬಂದವನು, ಯಾವುದೇ ರಾಜಕಾರಣದಿಂದ ಆಸ್ತಿ, ಹಣ ಮಾಡುವ ಉದ್ದೇಶ ನನಗಿಲ್ಲ. ಮುಂದೆಯು ಬಿಜೆಪಿ ಪಕ್ಷದಲ್ಲಿಯೆ ಇರುತ್ತೇನೆ. ಇದೇ ಪಕ್ಷದಲ್ಲಿ ಚುನಾವಣೆಗೆ ನಿಲ್ಲುತ್ತೇನೆ. ಮತ್ತೆ 2023ಕ್ಕೆ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು ಬಿಜೆಪಿಯೆ ಅಧಿಕಾರಕ್ಕೆ ಬರಲಿದೆಯೆಂದು ಸಚಿವ ಎಂಟಿಬಿ ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಗತಿ ತೋರಿಸದ ಇಲಾಖೆಗಳಿಗೆ 4 ತಿಂಗಳ ಗಡುವು: ಜಿಲ್ಲೆಯಲ್ಲಿ ಸಮರ್ಪಕವಾಗಿ ಪ್ರಗತಿ ತೋರಿಸದ ಇಲಾಖೆಗಳು ಫೆಬ್ರವರಿ ತಿಂಗಳ ಆಯವ್ಯಯ ಮಂಡನೆ ಒಳಗೆ ಸಂಪೂರ್ಣ ಶೇ.100 ರಷ್ಟುಪ್ರಗತಿ ಸಾಧಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್‌ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಗಡುವು ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಣ, ಆರೋಗ್ಯ, ವಸತಿ ಹಾಗೂ ಪೌರಾಡಳಿತ, ಲೋಕೋಪಯೋಗಿ ಇಲಾಖೆಗಳಲ್ಲಿ ಸಮರ್ಪಕ ಪ್ರಗತಿ ಕಾಣದ ಬಗ್ಗೆ ಸಚಿವ ಎಂಟಿಬಿ ನಾಗರಾಜ್‌ ಸಭೆಯಲ್ಲಿ ಬೇಸರ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅನುದಾನ ಬಳಸಲು ಸೂಚನೆ: ಮುಂದಿನ ವರ್ಷ ಬಜೆಟ್‌ ಮಂಡನೆ ಒಳಗೆ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣವಾಗಿ ಜಿಲ್ಲೆಯ ಅಭಿವೃದ್ದಿಗೆ ಬಳಕೆ ಆಗಬೇಕೆಂದ ಅವರು, ಸರ್ಕಾರದ ಯೋಜನೆಗಳ ಲಾಭವನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ಪಕ್ಷತೀತವಾಗಿ ತಲುಪಿಸಬೇಕು. ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆ ವೇಳೆ ಅರ್ಹರನ್ನು ಗುರುತಿಸಬೇಕೆಂದು ಸೂಚಿಸಿದರು. ಜಿಲ್ಲೆಯಲ್ಲಿ ನರೇಗಾ ಯೋಜನೆಯಲ್ಲಿ ಉತ್ತಮ ಪ್ರಗತಿ ಸಾಧಿಸಲಾಗಿದೆ. ಆದರೆ ವಸತಿ, ಶಿಕ್ಷಣ, ಆರೋಗ್ಯ ಇಲಾಖೆಗಳಲ್ಲಿ ಸಾಕಷ್ಟುಸಮಸ್ಯೆಗಳು ಇವೆ. ಅವುನ್ನು ಬಗೆಹರಿಸುವ ಕೆಲಸ ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಮಾಡಬೇಕೆಂದರು.

ಸರ್ಕಾರದ ಹಣದಿಂದ ಜನಸ್ಪಂದನ ಮಾಡುತ್ತಿಲ್ಲ: ಸಚಿವ ಎಂಟಿಬಿ ನಾಗರಾಜ್‌

ಜಿಲ್ಲೆಯಲ್ಲಿ ವಸತಿ ಯೋಜನೆಗಳ ಪ್ರಗತಿ ಕಾಣದಿದ್ದಕ್ಕೆ ಜಿಲ್ಲಾಡಳಿತವನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಜಿಲ್ಲೆಯಲ್ಲಿ ನಿವೇಶನಗಳ ಕೊರತೆಯಿಂದ ವಸತಿ ಯೋಜನೆಗಳು ಪ್ರಗತಿ ಕಾಣುತ್ತಿಲ್ಲ. ಆದ್ದರಿಂದ ಕೂಡಲೇ ಪ್ರತಿ ತಾಲೂಕಿನಲ್ಲಿ ಅರ್ಹ ಬಡವರಿಗೆ ನಿವೇಶನ ವಿತರಿಸುವ ಕೆಲಸ ಅಧಿಕಾರಿಗಳು ಮಾಡಬೇಕು. ನಿವೇಶನ ಹಂಚಿಕೆಗೆ ಬೇಕಾದ ಜಮೀನು ಗುರುತಿಸಿ ಅಭಿವೃದ್ಧಿಗೊಳಿಸಬೇಕು. ಗೋಮಾಳ ಜಮೀನು ಪತ್ತೆ ಮಾಡಿ ನಿವೇಶನ ಹಂಚಿಕೆಗೆ ಕ್ರಮ ವಹಿಸಬೇಕು, ಶೀಘ್ರವಾಗಿ ಅರ್ಹರಿಗೆ ನಿವೇಶನ ಹಕ್ಕು ಪತ್ರಗಳನ್ನು ವಿತರಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!