
ಹುಬ್ಬಳ್ಳಿ : ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ತಾವು ರಾಜ್ಯ ರಾಜಕಾರಣ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ತೆರಳುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲವೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಜ್ಯ ರಾಜಕಾರಣದಲ್ಲಿ ಇರುತ್ತೇನೆ. ನನಗೆ ಈ ಬಗ್ಗೆ ಹೈ ಕಮಾಂಡ್ ಏನೂ ಹೇಳುವುದಿಲ್ಲ ಎಂದು ಹೇಳಿದರು.
ಇದೇ ವೇಳೆ ಯಡಿಯೂರಪ್ಪ ಆಡಿಯೋ ಪ್ರಕರಣದ ಬಗ್ಗೆಯೂ ಪ್ರಸ್ತಾಪಿಸಿದ ಸಿದ್ದರಾಮಯ್ಯ, SIT ರಚನೆ ಮಾಡುವುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ ಎಂದರು.
ಇನ್ನು ಮಂಡ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧೆ ಬಗ್ಗೆ ತಮ್ಮನ್ನು ಭೇಟಿ ಮಾಡಿದ್ದು, ಸಮನ್ವಯ ಸಮಿತಿಯಲ್ಲಿ ಸೀಟು ಹಂಚಿಕೆ ನಿರ್ಧಾರ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ನಲ್ಲಿ ಅನ್ಯಾಯವಾಗುತ್ತಿದೆ ಎಂದ ಪರಮೇಶ್ವರ್ ವಿಚಾರವಾಗಿಯೂ ಪ್ರತಿಕ್ರಿಯಿಸಿ ಅವರು ಯಾವ ಮನಸ್ಥಿತಿಯಲ್ಲಿ ಈ ಹೇಳಿಕೆ ನೀಡಿದ್ದಾರೆ ಎನ್ನುವುದು ತಮಗೆ ತಿಳಿದಿಲ್ಲ ಎಂದರು.
ಒಂದೇ ವಿಮಾನದಲ್ಲಿ ನಾಯಕರ ಪ್ರಯಾಣ : ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಒಂದೇ ವಿಮಾನದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದಾರೆ.
ಇಲ್ಲಿಂದ ಒಂದೇ ವಿಮಾನದ ಮೂಲಕ ತೆರಳಿದ ನಾಯಕರು ಅಲ್ಲಿಂದ ಬೇರೆ ಬೇರೆ ಕಾರ್ಯಕ್ರಮಗಳಿಗೆ ತೆರಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.