ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಸ್ಪರ್ಧಿಸ್ತಾರಾ?

By Gowthami K  |  First Published Jul 12, 2023, 8:54 PM IST

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ರಾಷ್ಟ್ರೀಯ ಮುಖಂಡೆ ಪ್ರಿಯಾಂಕ ಗಾಂಧಿ ಸ್ಪರ್ಧಿಸುತ್ತಾರೆ ಎನ್ನುವ ಚರ್ಚೆಗಳು ರಾಜ್ಯ ಕಾಂಗ್ರೆಸ್ ನಲ್ಲಿ ನಡೆದಿವೆ ಎನ್ನಲಾಗಿದೆ.


ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್

ಕೊಡಗು (ಜು.12): ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ರಾಷ್ಟ್ರೀಯ ಮುಖಂಡೆ ಪ್ರಿಯಾಂಕ ಗಾಂಧಿ ಸ್ಪರ್ಧಿಸುತ್ತಾರೆ ಎನ್ನುವ ಚರ್ಚೆಗಳು ರಾಜ್ಯ ಕಾಂಗ್ರೆಸ್ ನಲ್ಲಿ ನಡೆದಿವೆ ಎನ್ನಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇರುವುದು ಒಂದೆಡೆಯಾದರೆ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 6 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಪಡೆದಿದೆ. ಆ ಮೂಲಕ ಈ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಂಡಿದೆ. ಇದೇ ಕಾರಣದಿಂದ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕ ಗಾಂಧಿ ಅವರು ಈ ಕ್ಷೇತ್ರದಿಂದ ಸ್ಪರ್ಧೆಸುತ್ತಾರೆ ಎನ್ನುವ ಚರ್ಚೆಗಳು ರಾಜ್ಯ ಕಾಂಗ್ರೆಸ್ ವಲಯದಲ್ಲಿ ನಡೆದಿವೆ ಎನ್ನಲಾಗಿದೆ.

Tap to resize

Latest Videos

undefined

ಈ ಕ್ಷೇತದಲ್ಲಿ ಪ್ರಿಯಾಂಕ ಗಾಂಧಿ ಅವರು ಸ್ಪರ್ಧಿಸಿದರೆ ಗೆಲುವು ಸಾಧಿಸುವುದು ಸುಲಭವಾಗಲಿದೆ ಎನ್ನುವುದು ಕಾಂಗ್ರೆಸ್‌ನ ಲೆಕ್ಕಾಚಾರ ಎನ್ನಲಾಗಿದೆ. ಜೊತೆಗೆ ಹೆಚ್ಚಿನ ಕಾರ್ಮಿಕ ವರ್ಗ ಇರುವ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಅವರು ಸ್ಪರ್ಧಿಸಿದರೆ ಅವರಿಗೆ ಗೆಲುವು ಸುಲಭವಾಗಲಿದೆ ಎನ್ನುವುದು ಕಾಂಗ್ರೆಸ್ ಮುಖಂಡರ ಲೆಕ್ಕಾಚಾರ ಎನ್ನಲಾಗಿದೆ.

ಕೊಡಗು ಮಳೆಗೆ ರಸ್ತೆ ಬಂದ್, ಹಸುಗೂಸುನ್ನು ಉಳಿಸಲು 1 ಕಿಮೀ ನಡೆದು ಆಸ್ಪತ್ರೆಗೆ ತಂದ

ಇದಲ್ಲದೆ ಕಾಂಗ್ರೆಸ್ ಸರ್ಕಾರ ಈಗ ಜಾರಿ ಮಾಡಿರುವ ಗ್ಯಾರೆಂಟಿ ಯೋಜನೆಗಳು ಅನುಕೂಲವಾಗಲಿವೆ. ಒಂದು ವೇಳೆ ಮೈಸೂರು ಕೊಡಗು ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಅವರು ಸ್ಪರ್ಧಿಸಲು ಒಪ್ಪಿಕೊಳ್ಳದಿದ್ದರೆ ತಮ್ಮ ಅಜ್ಜಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನಲಾಗಿದೆ. ಆಗ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪರ್ಧಿಸುವುದು ಖಚಿತ ಎನ್ನಲಾಗಿದೆ.

ಈ ಎಲ್ಲಾ ಸಾಧ್ಯಾಸಾಧ್ಯತೆಗಳ ಕುರಿತು ರಾಜ್ಯ ಕಾಂಗ್ರೆಸ್ ಮುಖಂಡರ ನಡುವೆ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಕೊಡಗು ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಈ ಕುರಿತು ಚರ್ಚೆಯಾಗಿರುವ ಬಗ್ಗೆ ಮಾಹಿತಿ ಇದೆ, ಆದರೆ ಅಧಿಕೃತ ಯಾವುದೇ ಮಾಹಿತಿಗಳು ಬಂದಿಲ್ಲ. ಒಂದು ವೇಳೆ ಪ್ರಿಯಾಂಕ ಗಾಂಧಿಯವರೇ ಅಭ್ಯರ್ಥಿಯಾದರೆ ಜಿಲ್ಲೆಯ ಕಾಂಗ್ರೆಸ್ ಬೆಳವಣಿಗೆಗೆ ಇನ್ನಷ್ಟು ಸಹಕಾರಿಯಾಗಲಿದೆ. 

ನಾವು ಈಗಾಗಲೇ ಈ ಕ್ಷೇತ್ರದ 6 ಸ್ಥಾನಗಳಲ್ಲಿ ನಮ್ಮ ಶಾಸಕರೇ ಇರುವುದರಿಂದ ಸುಲಭವಾಗಿ ಗೆಲುವು ಸಾಧಿಸಲಿದ್ದೇವೆ. ಎರಡು ಅವಧಿಯಲ್ಲಿ ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಏನೂ ಕೆಲಸದ ಮಾಡದೇ ಇರುವುದರಿಂದ ಸೋಲುತ್ತಾರೆ ಎಂದಿದ್ದಾರೆ. ಇದಕ್ಕೂ ಮೊದಲು ಮಡಿಕೇರಿ ಗಾಂಧಿ ಮೈದಾನದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ನಾಯಕ ರಾಹುಲ್  ಗಾಂಧಿಯವರನ್ನು ಉದ್ದೇಶ ಪೂರ್ವಕವಾಗಿ ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯವ್ಯಾಪಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಭಾಗವಾಗಿ ಮಡಿಕೇರಿಯಲ್ಲೂ ಮೌನ ಪ್ರತಿಭಟನೆ ನಡೆಯಿತು.

ಇನ್ಮುಂದೆ ಗ್ರಾಹಕರಿದ್ದಲ್ಲಿಗೆ ತೆರಳಿ ಗೃಹಜ್ಯೋತಿಗೆ ನೋಂದಣಿ ಮಾಡಲಿವೆ ಎಸ್ಕಾಂಗಳು

ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಕೇಂದ್ರ ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ ಎರಡು ಗಂಟೆಯವರೆಗೆ ಪ್ರತಿಭಟನಾ ಧರಣಿ ನಡೆಯಿತು. ಗಾಂಧಿ ಮೈದಾನದಲ್ಲಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಧರ್ಮಜ ಉತ್ತಪ್ಪ ರಾಹುಲ್ ಗಾಂಧಿ ಅವರು ಈ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಹೊಂದಿರುವ ಪಕ್ಷದ ನಾಯಕರು. ಅದನ್ನಾದರೂ ಸಂಸತ್ ಸ್ಪೀಕರ್ ಅವರು ಯೋಚಿಸಬೇಕಾಗಿತ್ತು.  ಆದರೆ ಅವರನ್ನು ರಾಜಕೀಯವಾಗಿ ಮುಗಿಸಬೇಕೆಂಬ ದುರುದ್ದೇಶದಿಂದ ಸ್ಪೀಕರ್ ಅವರ ಮೇಲೆ ಒತ್ತಡ ತಂದು ಈ ರೀತಿ ಅವರ ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸುವ ಕೆಲಸ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ಬೆಳವಣಿಗೆ ಅಲ್ಲ. ಸದ್ಯ ಪ್ರಕರಣ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದು, ಅಲ್ಲಿ ನ್ಯಾಯ ಸಿಗುವ ನಿರೀಕ್ಷೆ ಇದೆ. ಹೀಗಾಗಿಯೇ ಮೌನ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

click me!