ಕೊಪ್ಪಳ ಜಿಲ್ಲೆಗೂ ಸಿದ್ದರಾಮಯ್ಯ ಗೂ ಅವಿನಾಭಾವ ಸಂಬಂಧ ಇದೆ. ಈ ಹಿಂದೆ 1991 ರಲ್ಲಿ ಸಿದ್ದರಾಮಯ್ಯ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದಿಂದ ಸ್ಪರ್ಧೆ ಮಾಡಿದ್ದರು.
ವರದಿ: ದೊಡ್ಡೇಶ್ ಯಲಿಗಾರ್ ಏಷ್ಯಾನೆಟ್ ಸುವರ್ಣ ನ್ಯೂಸ್
ಕೊಪ್ಪಳ (ಏ.22): ಇನ್ನೇನು ವಿಧಾನಸಭೆ ಚುನಾವಣೆಯ (Assembly election) ಕಾಲ ಸಮೀಪಿಸುತ್ತಿದೆ. ಮುಂದಿನ ಎಪ್ರಿಲ್ ವೇಳೆ ರಾಜ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ನಾಯಕರು ತಮಗೆ ಸೇಫಾದ ಕ್ಷೇತ್ರಗಳತ್ತ ಮುಖ ಮಾಡುತ್ತಿದ್ದಾರೆ. ಇದರ ಮದ್ಯೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಸೇಫಾದ ಕ್ಷೇತದತ್ತ ಮುಖ ಮಾಡುತ್ತಿದ್ದಾರೆ. ಅಷ್ಟಕ್ಕೂ ಸಿದ್ದರಾಮಯ್ಯ ಮುಖ ಮಾಡುತ್ತಿರುವ ಕ್ಷೇತ್ರವಾದರೂ ಯಾವುದು ನೋಡೋಣ.
undefined
ಕೊಪ್ಪಳ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಬಹುದಾದ ಕ್ಷೇತ್ರಗಳು ಯಾವುವು: ಕೊಪ್ಪಳ ಜಿಲ್ಲೆಗೂ ಸಿದ್ದರಾಮಯ್ಯಗೂ ಅವಿನಾಭಾವ ಸಂಬಂಧ ಇದೆ. ಈ ಹಿಂದೆ 1991 ರಲ್ಲಿ ಸಿದ್ದರಾಮಯ್ಯ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದಿಂದ ಸ್ಪರ್ಧೆ ಮಾಡಿದ್ದರು. ಆದರೆ ಆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲುಂಡರು. ಆದರೂ ಸಹ ಸಿದ್ದರಾಮಯ್ಯ ಕೊಪ್ಪಳ ಜಿಲ್ಲೆಯ ಜೊತೆಗೆ ಎಂದಿಗೂ ಸಹ ಸಂಬಂಧ ಹಾಗೂ ಸಂಪರ್ಕ ಕಳೆದುಕೊಳ್ಳದಾಗ ನಿರಂತರವಾಗಿ ಕೊಪ್ಪಳ ಜಿಲ್ಲೆಯಲ್ಲಿ ಅದರಲ್ಲಿಯೂ ವಿಶೇಷವಾಗಿ ಕೊಪ್ಪಳ,ಕುಷ್ಟಗಿ ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಪ್ರಭಾವ ಮತ್ತು ವರ್ಚಸ್ಸನ್ನು ಉಳಿಸಿಕೊಂಡು ಬಂದಿದ್ದಾರೆ. ಇಂತಹ ಕೊಪ್ಪಳ ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
CHIKKAMAGALURU ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳಿಗೆ ಶಿಕ್ಷಣ ಸಚಿವರ ಭೇಟಿ
ಸಿದ್ದರಾಮಯ್ಯ ಸ್ಪರ್ಧೆ ಕುರಿತು ಮಾತನಾಡಿದ್ದು ಯಾರು: ಕೊಪ್ಪಳ ವಿಧಾಸನಾ ಕ್ಷೇತ್ರದ ಹಾಲಿ ಶಾಸಕ ರಾಘವೇಂದ್ರ ಹಿಟ್ನಾಳ್. ಈತ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಾನಸ ಪುತ್ರನೆಂದೇ ಪ್ರಸಿದ್ಧಿ ಪಡೆದಿದ್ದಾರೆ. ಇಂತಹ ಶಾಸಕ ಹಿಟ್ನಾಳ್ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಿ ಎಂ
ಸಿದ್ದರಾಮಯ್ಯ ಬಾದಾಮಿ ಬದಲು ಕೊಪ್ಪಳದಲ್ಲಿ ಸ್ಪರ್ಧೆ ಮಾಡಿದರೆ ನಾವು ಸ್ಚಾಗತಿಸುತ್ತೇವೆ ಜೊತೆಗೆ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಹೇಳಿದರು. ಜೊತೆಗೆ ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿಯೂ ಸಹ ಸ್ಪರ್ಧೆ ಮಾಡಿದರೆ ಕ್ಷೇತ್ರ ಬಿಟ್ಟುಕೊಡುವುದಾಗಿ ಹಾಲಿ ಶಾಸಕ ಅಮರೇಗೌಡ ಭಯ್ಯಾಪೂರ ಹೇಳಿದರು.
ಕೊಪ್ಪಳ ಜಿಲ್ಲೆಯಲ್ಲಿ ಸ್ಪರ್ಧೆ ಮಾಡಲು ಕಾರಣ: ವಿಪಕ್ಷ ನಾಯಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕೊಪ್ಪಳ ಜಿಲ್ಲೆಯಲ್ಲಿ ಸ್ಪರ್ಧೆ ಮಾಡಲು ಪ್ರಮುಖವಾದ ಕಾರಣ, ಕೊಪ್ಪಳ ಜಿಲ್ಲೆಯ ಹಾಗೂ ಜಿಲ್ಲೆಯ ಜನರೊಂದಿಗೆ ಇರುವ ಅವಿನಾಭಾವ ಸಂಬಂಧ. ಜೊತೆಗೆ ಕೊಪ್ಪಳ ಜಿಲ್ಲೆಯಲ್ಲಿ ಕುರುಬ ಸಮುದಾಯದ ಮತಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಕೊಪ್ಪಳ ಹಾಗೂ ಕುಷ್ಟಗಿ ಕ್ಷೇತ್ರಗಳ ಪೈಕಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅನಾಯಾಸವಾಗಿ ಗೆಲ್ಲಬಹುದು ಎನ್ನುವ ಲೆಕ್ಕಚಾರದಲ್ಲಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಇದ್ದಾರೆ.
2022-23ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ
ಬದಾಮಿ ಬಿಡ್ತಾರಾ ಸಿದ್ದರಾಮಯ್ಯ: ಇನ್ನು ಕಳೆದ 2018 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಹಾಗೂ ಬದಾಮಿ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರು. ಈ ವೇಳೆಯಲ್ಲಿ ಚಾಮುಂಡೇಶ್ವರಿ ಸೋತ ಸಿದ್ದರಾಮಯ್ಯ ಸೋತ ಸಿದ್ದರಾಮಯ್ಯ, ಬದಾಮಿಯಲ್ಲಿ ಕಡಿಮೆ ಅಂತರದಿಂದ ಗೆಲುವು ಸಾಧಿಸಿದರು. ಇನ್ನು ಕಳೆದ ಬಾರಿ ಬದಾಮಿಯಲ್ಲಿ ಸಿದ್ದರಾಮಯ್ಯ ಗೆಲುವಿನಲ್ಲಿ ಮಾಜಿ ಸಚವ ಎಸ್ ಆರ್ ಪಾಟೀಲ್ ಅವರ ಶ್ರಮ ಬಹಳಷ್ಟು ಇದೆ.ಆದರೆ ಇತ್ತೀಚಿಗೆ ಎಂ ಎಲ್ ಸಿ ಚುನಾವಣೆಯಲ್ಲಿ ಟಿಕೆಟ್ ನೀಡ್ ಹಿನ್ನಲೆಯಲ್ಲಿ ಎಸ್ ಆರ್ ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಬದಾಮಿಯಿಂದ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಕೊಪ್ಪಳ ಜಿಲ್ಲೆಯ ಇಬ್ಬರು ಶಾಸಕರು ಸಿದ್ದರಾಮಯ್ಯ ಅವರಿಗೆ ಕೊಪ್ಪಳ ಜಿಲ್ಲೆಯಲ್ಲಿ ಸ್ಪರ್ಧಿಸಲು ಸ್ವಾಗತ ಕೊರಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆಯಿಂದ ಸ್ಪರ್ಧೆ ಮಾಡ್ತಾರಾ ಅಥವಾ ಬೇರೆ ಜಿಲ್ಲೆಯಿಂದ ಸ್ಪರ್ಧೆ ಮಾಡ್ತಾರಾ ಕಾದುನೋಡಬೇಕಿದೆ.