
ಮಂಡ್ಯ [ಫೆ.27] ಮಂಡ್ಯದ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅಖಾಡಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ.
ಪಕ್ಷೇತರ ಸ್ಪರ್ಧೆಗೆ ಹಠತೊಟ್ಟಿರುವ ಸುಮಲತಾ ನಾಳೆ[ಫೆ. 28] ಮಂಡ್ಯದಲ್ಲಿ ಕ್ಷೇತ್ರ ಪರ್ಯಟನೆ ಮಾಡಲಿದ್ದಾರೆ. ದೇವಾಲಯಗಳಿಗೆ ಭೇಟಿ ನೀಡಲಿದ್ದು ರಾಜಕೀಯ ಗಣ್ಯರನ್ನು ಮಾತನಾಡಿಸಿ ಅಭಿಪ್ರಾಯ ಕಲೆ ಹಾಕಲಿದ್ದಾರೆ.
ರಾಜಕೀಯ ಪಕ್ಷಗಳಿಗೆ ಸವಾಲು ಎಸೆದ ಅಂಬಿ ಫ್ಯಾನ್ಸ್
ಬೆಳಿಗ್ಗೆ ಮುತ್ತೇಗೆರೆ ಗ್ರಾಮದ ಮನೆ ದೇವರು ಮಾಯಮ್ಮ ದೇವಾಲಯಕ್ಕೆ ಭೇಟಿ ಪೂಜೆ ಸಲ್ಲಿಸಲಿದ್ದಾರೆ. ಮಂಡ್ಯ ಜಿಲ್ಲೆಯ ಹಿರಿಯ ರಾಜಕೀಯ ನಾಯಕರಾದ ಮಾದೇಗೌಡ, ಎಂ.ಎಸ್.ಆತ್ಮಾನಂದ, ಎಚ್.ಡಿ.ಚೌಡಯ್ಯ ಮನೆಗಳಿಗೆ ಭೇಟಿ, ಮಾರ್ಗದರ್ಶನ, ಆಶೀರ್ವಾದ ಪಡೆಯಲಿರುವ ಸುಮಲತಾ ಬಳಿಕ ದೊಡ್ಡರಸಿನಕೆರೆಯಲ್ಲಿ ಅಂಬಿ ಪುತ್ತಳಿ ಅನಾವರಣ ಮಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.