ಮುಂದೂಡಿಕೆಯಾದ ಡಿಕೆಶಿ ಪ್ರಮಾಣ: ಲೇಟ್ ಆದ್ರೂ ಲೆಟೆಸ್ಟ್ ಆಗಿ ನಡೆಯಲಿದೆ ಪದಗ್ರಹಣ

Published : May 19, 2020, 03:24 PM IST
ಮುಂದೂಡಿಕೆಯಾದ ಡಿಕೆಶಿ ಪ್ರಮಾಣ: ಲೇಟ್ ಆದ್ರೂ ಲೆಟೆಸ್ಟ್ ಆಗಿ ನಡೆಯಲಿದೆ ಪದಗ್ರಹಣ

ಸಾರಾಂಶ

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಸಮಾರಂಭ  ಮುಂದೂಡಲಾಗಿದ್ದು, ಲೇಟ್ ಆದ್ರೂ ಲೆಟೆಸ್ಟ್ ಆಗಿ ಪದಗ್ರಹಣ ಮಾಡಲು ಡಿಕೆಶಿ ಪ್ಲಾನ್ ಮಾಡಿದ್ದಾರೆ.  

ಬೆಂಗಳೂರು, (ಮೇ.19): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ಮುಂದೂಡಿಕೆಯಾಗಿದೆ. 

ಕೆಪಿಸಿಸಿ ಹುದ್ದೆಗೆ ನೇಮಕವಾದ 2 ತಿಂಗಳ ಬಳಿಕ ಮೇ 31ರಂದು ಪ್ರಮಾಣವಚನ ಸಮಾರಂಭ ಫಿಕ್ಸ್ ಆಗಿತ್ತು.  ಆದ್ರೆ, ಮೇ.31ರ ವರೆಗೆ ಲಾಕ್‌ಡೌನ್ ವಿಸ್ತರಣೆಯಾಗಿರುವುದರಿಂದ ದಿನಾಂಕವನ್ನು ಮುಂದೂಡಲಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಮೇ 31ಕ್ಕೆ ಡಿಕೆಶಿ ಪ್ರಮಾಣ

ಈ ಬಗ್ಗೆ ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮೇ 31ರಂದು ಕೆಪಿಸಿಸಿ ಅಧ್ಯಕ್ಷ ಅಧಿಕಾರ ಸ್ವೀಕಾರ ನಿಗದಿಯಾಗಿತ್ತು.ಆದರೆ ಆಂದು‌ ಭಾನುವಾರ ಅಗಿದೆ. ಯಾವುದೇ ಕಾರ್ಯಕ್ರಮ ಮಾಡಬಾರದು ಅಂತ ಯಡಿಯೂರಪ್ಪ ಆದೇಶ ಮಾಡಿದ್ದಾರೆ. ಸರ್ಕಾರದ ಕಾನೂನು ಗೌರವಿಸುತ್ತೇನೆ. ಆದ್ದರಿಂದ ಮುಂದೆ ಇನ್ನೊಂದು ದಿನಾಂಕ ನಿಗದಿಗೊಳಿಸಿ ಕೆಪಿಸಿಸಿ ಅಧ್ಯಕ್ಷರಾಗಿ ಆಧಿಕಾರ ಸ್ವೀಕಾರ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಉದ್ದಗಲಕ್ಕೂ 7200 ಕಡೆ ಈ ಕಾರ್ಯಕ್ರಮ ಮಾಡಲು ಯೋಜನೆ ರೂಪಿಸಿದ್ದೇವೆ. ಗ್ರಾಮ ಪಂಚಾಯತಿಯಿಂದ ನಗರದ ಎಲ್ಲಾ ಕಡೆ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಎಲ್ಲಾ ಕಡೆ ಎರಡು ಟಿವಿ ವ್ಯವಸ್ಥೆ ಇರುತ್ತೆ ಎಂದರು.

ಸಂವಿಧಾನ ಪೀಠಿಕೆ ಓದಿ ಅಧಿಕಾರ ಸ್ವೀಕರಿಸುತ್ತೇನೆ. ಹೀಗಾಗಿ ವಿನೂತನ ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದು ಡಿಕೆಶಿ ಅಧಿಕಾರ ಪದಗ್ರಹಣ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾಹಿತಿ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್‌ ಹಿರಿಯ ನಾಯಕರ ಸಭೆಯಲ್ಲಿ ಮೇ  27 ರಂದು ಸರಳ ಸಮಾರಂಭದ ಮೂಲಕ ಪ್ರಮಾಣವಚನ ಸ್ವೀಕಾರ ಮಾಡಬೇಕು ಎಂದು ನಿರ್ಧರಿಸಲಾಗಿತ್ತು.ಆದ್ರೆ ಲಾಕ್‌ಡೌನ್ ಇರುವುದರಿಂದ ಪದಗ್ರಹಣ ಸಮಾರಂಭವನ್ನು ಮುಂದೂಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ