ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಹೈಕಮಾಂಡ್ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ!

Published : Apr 28, 2026, 12:46 PM IST
KN Rajanna

ಸಾರಾಂಶ

ಮಾಜಿ ಸಚಿವ ಕೆ.ಎನ್. ರಾಜಣ್ಣ ರಾಜ್ಯ ರಾಜಕಾರಣದ ಗೊಂದಲಗಳ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದು, ಹೈಕಮಾಂಡ್ ಮಧ್ಯಪ್ರವೇಶಿಸಿ ಗೊಂದಲ ನಿವಾರಿಸಬೇಕೆಂದು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದು, ಪದತ್ಯಾಗಕ್ಕೂ ಸಿದ್ಧರಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ.

ಬೆಂಗಳೂರು(ಏ.28): ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಮತ್ತು ಗೊಂದಲಗಳ ಕುರಿತು ಚರ್ಚೆ ಜೋರಾಗಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಕಾರ್ಯವೈಖರಿ ಮತ್ತು ಪಕ್ಷದ ಭವಿಷ್ಯದ ದೃಷ್ಟಿಯಿಂದ ಹೈಕಮಾಂಡ್ ತಕ್ಷಣವೇ ಮಧ್ಯಪ್ರವೇಶಿಸಿ ಗೊಂದಲ ನಿವಾರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಹೈಕಮಾಂಡ್ ಗೊಂದಲಕ್ಕೆ ತೆರೆ ಎಳೆಯಲಿ

ರಾಜ್ಯದಲ್ಲಿ ನಮ್ಮ ಸರ್ಕಾರವಿದೆ. ಇನ್ನೂ ಕ್ರಿಯಾಶೀಲವಾಗಿ ಕೆಲಸ ಮಾಡಬೇಕಿದೆ. ಪ್ರಸ್ತುತ ನಡೆಯುತ್ತಿರುವ ಗೊಂದಲಗಳನ್ನು ನಿವಾರಿಸಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಹೈಕಮಾಂಡ್ ಈ ಗೊಂದಲ ಮುಂದುವರಿಯಲು ಅವಕಾಶ ನೀಡಬಾರದು. ಗೊಂದಲಗಳು ದೀರ್ಘಕಾಲ ಮುಂದುವರಿದಷ್ಟು ಪಕ್ಷಕ್ಕೆ ಹೆಚ್ಚಿನ ಹಾನಿಯಾಗಲಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ರಾಜಣ್ಣ ಆಗ್ರಹಿಸಿದರು.

ರಾಹುಲ್ ಗಾಂಧಿ ಹೇಳಿದಂತೆ ಕೇಳಲು ಸಿದ್ದರಾಮಯ್ಯ ಸಿದ್ಧ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಕ್ತ ಮನಸ್ಸಿನಿಂದ ಇದ್ದಾರೆ. ಹೈಕಮಾಂಡ್ ಮತ್ತು ರಾಹುಲ್ ಗಾಂಧಿ ಅವರು ನೀಡುವ ಪ್ರತಿಯೊಂದು ಸೂಚನೆಯನ್ನು ಪಾಲಿಸಲು ತಾವು ಬದ್ಧ ಎಂದು ಸಿಎಂ ತಿಳಿಸಿದ್ದಾರೆ. 'ರಾಹುಲ್ ಗಾಂಧಿ ಅವರ ತೀರ್ಮಾನದಂತೆ ನಾನು ನಡೆದುಕೊಳ್ಳುತ್ತೇನೆ, ಆ ಸಮಯದಲ್ಲಿ ನಿಮ್ಮೆಲ್ಲರ ಸಹಕಾರ ನನಗೆ ಇರಲಿ' ಎಂದು ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ರಾಜಣ್ಣ ಮಾಹಿತಿ ನೀಡಿದ್ದಾರೆ.

ಅಧಿಕಾರದಲ್ಲಿ ಮುಂದುವರಿಯಲೂ ಸಿದ್ಧ ಪದತ್ಯಾಗಕ್ಕೂ ಸಿದ್ಧ

ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯಲು ಸಿದ್ಧರಾಗಿದ್ದಾರೆ ಮತ್ತು ಹೈಕಮಾಂಡ್ ಸೂಚಿಸಿದರೆ ಪದತ್ಯಾಗಕ್ಕೂ ಸಿದ್ಧರಾಗಿದ್ದಾರೆ. ಇದು ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರವಲ್ಲ, ಏಕೆಂದರೆ ಪಕ್ಷದ ಭವಿಷ್ಯ ಇದರ ಮೇಲೆ ಅಡಗಿದೆ. ಮಾನಸಿಕ ಸ್ಥಿರತೆ ಕಾಯ್ದುಕೊಂಡು ನಿರ್ಧಾರ ತೆಗೆದುಕೊಳ್ಳಬೇಕಿದೆ. ಅಧಿಕಾರ ಎಂಬುದು ಶಾಶ್ವತವಲ್ಲ, ಅದನ್ನು ಕಳೆದುಕೊಂಡವರು ಮತ್ತೆ ಗಳಿಸಬಹುದು ಎಂಬ ವಾಸ್ತವ ಸಿಎಂಗೆ ತಿಳಿದಿದೆ ಎಂದು ಅವರು ವಿವರಿಸಿದರು.

ದಲಿತ ಸಿಎಂ ಪರ ರಾಜಣ್ಣ ಪಟ್ಟು

ದಲಿತರು ಮುಖ್ಯಮಂತ್ರಿಯಾಗಬೇಕು ಎಂಬ ನನ್ನ ನಿಲುವಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅಹಿಂದ ವರ್ಗದ ಜನರಲ್ಲಿ ಪ್ರಸ್ತುತ ಸಮಾಧಾನವಿಲ್ಲ. ನಾವು ನೀಡಿದ ಭರವಸೆಗಳು ಸರಿಯಾಗಿ ಫಲಪ್ರದವಾಗುತ್ತಿಲ್ಲ ಎಂಬ ಅಸಮಾಧಾನ ಆ ವರ್ಗದಲ್ಲಿದೆ. ಸಿದ್ದರಾಮಯ್ಯ ಅವರು ಮುಂದುವರಿಯಬೇಕು ಎಂಬ ನಮ್ಮ ಅಭಿಪ್ರಾಯವನ್ನು ನಾವು ಹೈಕಮಾಂಡ್ ಮುಂದಿಟ್ಟಿದ್ದೇವೆ, ಅಂತಿಮವಾಗಿ ಅವರೇ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು.

ಅಂದಿನ ಸಿದ್ದರಾಮಯ್ಯಗೂ ಈಗಿನ ಸಿದ್ದರಾಮಯ್ಯಗೂ ವ್ಯತ್ಯಾಸವಿದೆ

2013-18ರ ಅವಧಿಯಲ್ಲಿದ್ದ ಸಿದ್ದರಾಮಯ್ಯ ಅವರಿಗೂ ಮತ್ತು ಈಗಿನ ಸಿದ್ದರಾಮಯ್ಯ ಅವರಿಗೂ ಅಜಗಜಾಂತರ ವ್ಯತ್ಯಾಸವಿದೆ. ಪ್ರಸ್ತುತ ರಾಜಕೀಯ ಪರಿಸ್ಥಿತಿ ಬದಲಾಗಿದೆ. ಮುಂದಿನ ಚುನಾವಣೆಗಳಿಗೆ ಇನ್ನೂ ಎರಡು ವರ್ಷ ಬಾಕಿ ಇದೆ. ರಾಜಕಾರಣದಲ್ಲಿ ಬಹಳಷ್ಟು ಬದಲಾವಣೆಗಳು ಆಗಲಿವೆ.ಬಹಳಷ್ಟು ನೀರು ಹರಿಬೇಕಾದ ಸಮಯವೂ ಇದೆ. ಮುಂದಿನ ರಾಜಕೀಯ ಬೆಳವಣಿಗೆಗಳು ಹೇಗಿರಲಿವೆ ಎಂದು ಈಗಲೇ ಊಹಿಸಲು ಸಾಧ್ಯವಿಲ್ಲ ಎಂದು ರಾಜಣ್ಣ ಮಾರ್ಮಿಕವಾಗಿ ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೊನ್ನೆ ಮಂಡಿಯೂರಿ ಚರ್ಚ್‌ನಲ್ಲಿ ಸೇವೆ, ಇಂದು ಮುರುಗನ್ ಮೊರೆ; ಚುನಾವಣೆ ಫಲಿತಾಂಶಕ್ಕೂ ಮುನ್ನ ವಿಜಯ್ ಅಚ್ಚರಿ ನಡೆ!
Kejriwal: ದೆಹಲಿ ಅಬಕಾರಿ ನೀತಿ ಪ್ರಕರಣ, ಕೋರ್ಟ್ ಬಹಿಷ್ಕರಿಸಿ ರಾಜ್‌ಘಾಟ್‌ಗೆ ಹೊರಟ ಕೇಜ್ರಿವಾಲ್, ಸಿಸೋಡಿಯಾ!