ಕ್ಷೇತ್ರದ ಮತದಾರರು ನಾಲ್ಕನೆಯ ಬಾರಿಯೂ ನನ್ನ ಮೇಲೆ ನಂಬಿಕೆಯಿಟ್ಟು ನನಗೆ ಅಭೂತಪೂರ್ವ ಗೆಲುವು ತಂದುಕೊಟ್ಟಿದ್ದಾರೆ. ಅವರ ಬಯಕೆಯಂತೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಚಾಮರಾಜನಗರ (ಜೂ.19): ಕ್ಷೇತ್ರದ ಮತದಾರರು ನಾಲ್ಕನೆಯ ಬಾರಿಯೂ ನನ್ನ ಮೇಲೆ ನಂಬಿಕೆಯಿಟ್ಟು ನನಗೆ ಅಭೂತಪೂರ್ವ ಗೆಲುವು ತಂದುಕೊಟ್ಟಿದ್ದಾರೆ. ಅವರ ಬಯಕೆಯಂತೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ನಗರದ ಅನ್ವರ್ ಪಾಷ ಕಲ್ಯಾಣ ಮಂಟಪದಲ್ಲಿ ಎಸ್‌ಪಿಎಸ್ ಗ್ರೂಪ್ ವತಿಯಿಂದ ಮುಸ್ಲಿಂ ಧರ್ಮದ ಗುರುಗಳಿಗೆ ಹಾಗೂ ಮುಖಂಡರಿಗೆ ಹಮ್ಮಿಕೊಂಡಿದ್ದ ಕೃತಜ್ಞತಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕಳೆದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಅನುದಾನ ನೀಡಲಿಲ್ಲ.
ಕ್ಷೇತ್ರದ ಅಭಿವೃದ್ಧಿಯಾಗಲಿಲ್ಲ. ಈಗ ರಾಜ್ಯದಲ್ಲಿ ನಮ್ಮದೆ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ನಮ್ಮ ನೆಚ್ಚಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಿಸಿ ಕ್ಷೇತ್ರದ, ಪಟ್ಟಣದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು. ನಗರಸಭಾ ಮಾಜಿ ಅಧ್ಯಕ್ಷ ಎಸ್. ನಂಜುಂಡಸ್ವಾಮಿ ಮಾತನಾಡಿ, ವಿರೋಧ ಪಕ್ಷದ ಹಣದ ಹೊಳೆಯಲ್ಲೂ ಕೂಡ ಈ ಬಾರಿ ಕ್ಷೇತ್ರದ ಮತದಾರರು ನಾಲ್ಕನೆಯ ಬಾರಿಯೂ ಶಾಸಕ ಸಿ.ಪುಟ್ಟರಂಗಶೆಟ್ಟರಿಗೆ ಅಭೂತ ಪೂರ್ವ ಗೆಲುವು ತಂದುಕೊಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಮತದಾರರ ಬಯಕೆಯಂತೆ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡುವ ಮೂಲಕ ಋುಣಿಯಾಗಬೇಕಿದೆ ಎಂದರು
undefined
Chamarajanagar: ಗ್ರಾಮದ ಅಭಿವೃದ್ಧಿ ವಿಚಾರದಲ್ಲಿ ಎಲ್ಲ ಒಂದಾಗಿರಬೇಕು: ಶಾಸಕ ಗಣೇಶ್ ಪ್ರಸಾದ್
ಕಾರ್ಯಕ್ರಮದ ಆಯೋಜಕ ಗಣಿ ಉದ್ಯಮಿ ಫೈಸಲ್ ಷರೀಫ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ಎಸ್.ಸೋಮನಾಯಕ, ಕನಿಷ್ಠ ವೇತನಾ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಉಮೇಶ್, ಮರಿಸ್ವಾಮಿಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷರಾದ ಇರ್ಷಾದುಲ್ಲಾ, ಅಯ್ಯೂಬ್ ಖಾನ್, ಸುಹೇಲ್ ಅಲಿಖಾನ್, ನಗರಸಭಾ ಮಾಜಿ ಸದಸ್ಯ ಸೈಯದ್ ಅತೀಕ್, ಕೆಪಿಸಿಸಿ ಸದಸ್ಯ ಸೈಯದ್ ರಫೀ,ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಮುಖಂಡ ನಾಗರಾಜಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್, ಅರಕಲವಾಡಿ ಗುರುಸ್ವಾಮಿ, ಮುಸ್ಲಿಂ ಧರ್ಮಗುರುಗಳಾದ ಡಾ.ಜಹೀರ್ ಅಹಮದ್, ಕಾಮಿಲ್ ನಹೀಂಮುಲ್ಲಾ ಹಕ್, ಲತೀಫ್ ಪುರ್ ರೆಹಮಾನ್, ಮುಫ್ತಿಜಾಫರ್ ಹುಸೇನ್ ಇದ್ದರು.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳ್ಳಬೇಟೆ ಶಂಕೆ: ಜೋಸೆಫ್ ಹೂವರ್ ಆರೋಪ
ಡೆಪ್ಯುಟಿ ಸ್ಪೀಕರ್ ಆಗ್ತೀನಿ, ವರ್ಷದ ಬಳಿಕ ಸಚಿವನಾಗುವೆ: ಒಂದು ವರ್ಷದ ಬಳಿಕ ಕಾಂಗ್ರೆಸ್ ವರಿಷ್ಠರು ಸಚಿವ ಸ್ಥಾನ ಕೊಡುವ ಬಗ್ಗೆ ಮಾತು ಕೊಟ್ಟಿದ್ದಾರೆ. ಹಾಗಾಗಿ ಉಪಸಭಾಪತಿ ಸ್ಥಾನ ಒಪ್ಪಿಕೊಂಡಿದ್ದೇನೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗುರುವಾರ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರೊಂದಿಗೆ ಒಡನಾಟ ಕಡಿಮೆಯಾಗುತ್ತದೆ ಎಂಬ ಉದ್ದೇಶದಿಂದ ನಾನು ಉಪ ಸಭಾಧ್ಯಕ್ಷ ಸ್ಥಾನ ಬೇಡ ಎಂದು ಹೇಳಿದ್ದೆ. ಒಂದು ವರ್ಷ ಕೆಲಸ ಮಾಡು, ನಂತರ ಸಚಿವ ಸ್ಥಾನ ನೀಡುತ್ತೇನೆಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕೂಡ ತಿಳಿಸಿದ್ದಾರೆ ಎಂದು ಹೇಳಿದರು. ನಾನು ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದು, ವರಿಷ್ಠರು ಹೇಳಿದ್ದನ್ನು ಒಪ್ಪಿಕೊಳ್ಳಲೇಬೇಕು. ಕೊನೆಯ ತನಕ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಸಚಿವ ಸ್ಥಾನ ತಪ್ಪಿದ್ದರಿಂದ ಬೇಸರವಾದರೂ ಹೇಳಿಕೊಳ್ಳಲಾದು. ಸದ್ಯ ಹೈಕಮಾಂಡ್ ಕೊಟ್ಟಜವಾಬ್ದಾರಿ ನಿಭಾಯಿಸ್ತೇನೆ ಎಂದರು.