ಜಾತಿ ಗಣತಿ ವರದಿ ಬಿಡುಗಡೆ ಮಾಡ್ತೀರಾ ಇಲ್ವಾ?: ಕೆ.ಎಸ್‌.ಈಶ್ವರಪ್ಪ

By Kannadaprabha News  |  First Published Nov 5, 2023, 7:23 AM IST

ಜಾತಿ ಜನಗಣತಿ ಕುರಿತ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ವರದಿ ಬಿಡುಗಡೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಒತ್ತಾಯಿಸಿದ್ದಾರೆ. 


ಬೆಂಗಳೂರು (ನ.05): ಜಾತಿ ಜನಗಣತಿ ಕುರಿತ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ವರದಿ ಬಿಡುಗಡೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಾತಿ ಗಣತಿ ಬಿಡುಗಡೆ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರದಲ್ಲಿಯೇ ಭಿನ್ನ ನಿಲುವು ವ್ಯಕ್ತವಾಗುತ್ತಿದೆ. 

ಕಾಂತರಾಜು ವರದಿಯನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಇವರು ಜನತೆಗೆ ಸುಳ್ಳು ಹೇಳುವ ಅಭ್ಯಾಸ ಮಾಡಿಕೊಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಜಾತಿ ಗಣತಿ ಬಗ್ಗೆ ಸ್ಪಷ್ಟನೆ ನೀಡಬೇಕು ಮತ್ತು ಸುಳ್ಳು ಹೇಳುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Tap to resize

Latest Videos

ಸಿದ್ದರಾಮಯ್ಯ ಅವರು ಕಳೆದ 7-8 ವರ್ಷದಿಂದ ಸುಳ್ಳು ಹೇಳುತ್ತಿದ್ದಾರೆ. ವರದಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಆದರೆ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಕಾಂತರಾಜು ಆಯೋಗದ ವರದಿ ಸರಿ ಇಲ್ಲ ಎಂದಿದ್ದಾರೆ. ವರದಿಯನ್ನು ಪರಿಶೀಲನೆ ಮಾಡದೆ ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಲೋಕಸಭಾ ಚುನಾವಣೆ ಬರುತ್ತಿದೆ ಎಂಬ ಕಾರಣಕ್ಕಾಗಿ ಬಿಡುಗಡೆಗೆ ಸಿದ್ದರಾಮಯ್ಯ ಮುಂದಾಗಿದ್ದಾರಾ? ನ್ಯಾಯಾಲಯಕ್ಕೆ ಹೋದರೆ ಕಾಂತರಾಜು ಆಯೋಗದ ವರದಿ ಬಿದ್ದುಹೋಗಲಿದೆ ಎಂದು ಹೇಳಿದರು.

ಕಾಂಗ್ರೆಸ್‌ ಸೇರುತ್ತೇನೆಂದು ಹೇಳೂ ಇಲ್ಲ, ಅರ್ಜಿ ಹಾಕಿಲ್ಲ: ಎಂ.ಪಿ.ರೇಣುಕಾಚಾರ್ಯ

ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ವಿಧಾನಪರಿಷತ್‌ನಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಮಾಡುವಂತೆ ನಾನೇ ಒತ್ತಾಯ ಮಾಡಿದ್ದೆ. ಆಗ ಅವರು ಮಾಡುತ್ತೇವೆ ಎಂದಿದ್ದರಾದರೂ ಮಾಡಲಿಲ್ಲ. ನಂತರ ಸಮ್ಮಿಶ್ರ ಸರ್ಕಾರದಲ್ಲಿಯೂ ಚರ್ಚೆಯಾಯಿತು. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಅವಕಾಶ ಕೊಡಲಿಲ್ಲ. ಸಮ್ಮಿಶ್ರ ಸರ್ಕಾರದ ಅಧ್ಯಕ್ಷರಾಗಿದ್ದು ಇದೇ ಸಿದ್ದರಾಮಯ್ಯ. ಅವರೇ ಅವಕಾಶ ಮಾಡಿಕೊಡಲಿಲ್ಲ. ಒಂದು ವೇಳೆ ಕುಮಾರಸ್ವಾಮಿ ಒಪ್ಪಲಿಲ್ಲ ಎಂದಿದ್ದರೆ ರಾಜೀನಾಮೆ ನೀಡಬೇಕಾಗಿತ್ತು. ರಾಜ್ಯದ ಜನರಿಗೆ ಸಿದ್ದರಾಮಯ್ಯ ಸುಳ್ಳು ಹೇಳಿ ಮೋಸಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಹರಿಹಾಯ್ದರು.

click me!