ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ ಪರವಾಗಿ ಕೆಲಸ ಮಾಡಬೇಕೆಂದರೆ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅವರ ಕೈ ಬಲಪಡಿಸಬೇಕು ಎಂದು ಮಾಜಿ ಸಚಿವ ಎಚ್. ಆಂಜನೇಯ ತಿಳಿಸಿದರು.
ಬೆಂಗಳೂರು (ಏ.06): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ ಪರವಾಗಿ ಕೆಲಸ ಮಾಡಬೇಕೆಂದರೆ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅವರ ಕೈ ಬಲಪಡಿಸಬೇಕು ಎಂದು ಮಾಜಿ ಸಚಿವ ಎಚ್. ಆಂಜನೇಯ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಜತೆಗೂಡಿ ಡಾ.ಬಾಬುಜಗಜೀವನ್ ರಾಮ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಮತ ಹಾಕಿದರೆ ಸಿದ್ದರಾಮಯ್ಯ ಅವರ ಕೈ ಬಲಗೊಳ್ಳುತ್ತದೆ. ಆಮೂಲಕ ರಾಜ್ಯದಲ್ಲಿ ಮತ್ತಷ್ಟು ಉತ್ತಮ ಕೆಲಸ ಮಾಡಲು ಅವಕಾಶ ಸಿಗಲಿದೆ.
ದೇಶದ ಬೇರ್‍ಯಾವ ರಾಜ್ಯದಲ್ಲೂ ಬಡವರಿಗೆ ಸಿಗದ ಯೋಜನೆಗಳು ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲಾಗಿದೆ. ಜನರು ನಮಗೆ ಮತ್ತಷ್ಟು ಶಕ್ತಿ ನೀಡಿದರೆ ಇನ್ನೂ ಹೆಚ್ಚಿನ ಸವಲತ್ತನ್ನು ಕೊಡುತ್ತೇವೆ ಎಂದರು. ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಲಿದೆ ಎಂದು ಬಿಜೆಪಿಯವರು ಹೇಳಿದರು. ಆದರೆ, ಯಾವುದೇ ಸಮಸ್ಯೆ ಎದುರಾಗದಂತೆ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಹೀಗಾಗಿ ರಾಜ್ಯದ ಜನರು ಕಾಂಗ್ರೆಸ್ ಬಲಪಡಿಸುವುದರ ಜತೆಗೆ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಉತ್ತಮ ಕೆಲಸ ಮುಂದುವರಿಸಲು ಅವರ ಕೈಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಕೋರಿದರು.
ಕೋರ್ಟ್ ಕಲಾಪ ಅಕ್ರಮ ವಿಡಿಯೋ ಪ್ರಸಾರ: ಕೇಜ್ರಿವಾಲ್ ಪತ್ನಿ ವಿರುದ್ಧ ದೂರು ದಾಖಲು!
ವೇದಿಕೆಯಲ್ಲಿ ಕುಳಿತೇ ಸಿಎಂ ರಣತಂತ್ರ: ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಸಮಾವೇಶದ ವೇದಿಕೆಯಲ್ಲಿಯೇ ಸಿಎಂ ಸಿದ್ದರಾಮಯ್ಯ ಗೆಲುವಿಗೆ ಸಾಧ್ಯತೆ ಇರುವ ತಂತ್ರಗಳ ಬಗ್ಗೆ ಶಾಸಕರ ಜೊತೆ ಮಾತನಾಡಿದರು. ಕಾಂಗ್ರೆಸ್‌ನ ಇತರ ನಾಯಕರು ಮಾತನಾಡುವಾಗ ಒಬ್ಬೊಬ್ಬ ಶಾಸಕರ ಕರೆದು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಿದ್ದ ಸಿಎಂ ಗೆಲುವಿಗಾಗಿ ಕ್ಷೇತ್ರವಾರು ಕೈಗೊಂಡಿರುವ ತಂತ್ರಗಳ ಬಗ್ಗೆ ಮಾಹಿತಿ ಪಡೆದರು. ಆಯಾ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಲೀಡ್ ನೀಡಲು ಸೂಚನೆ ನೀಡಿದರು. ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹೊಸದುರ್ಗ ಶಾಸಕ ಬಿ ಜಿ ಗೋವಿಂದಪ್ಪ, ಪಾವಗಡ ಶಾಸಕ ವೆಂಕಟೇಶ್, ಚಿತ್ರದುರ್ಗ ಶಾಸಕ ಕೆ ಸಿ ವಿರೇಂದ್ರ ಪಪ್ಪಿ, ಸಚಿವ ಡಿ.ಸುಧಾಕರ್, ಮಾಜಿ ಸಚಿವ ಹೆಚ್ ಆಂಜನೇಯ ಸೇರಿ ಹಲವರ ಜೊತೆ ಸಿಎಂ ಚರ್ಚಿಸಿದರು.