ಮತ್ತೆ ಬಿಜೆಪಿ ನೇತೃತ್ವದ ಸರ್ಕಾರನ್ನೇ ಗೆಲ್ಲಿಸಿ: ಕೇಂದ್ರ ಸಚಿವ ಪಿಯೂಷ್‌ ಗೋಯಲ್‌

Published : Apr 08, 2023, 08:43 AM IST
ಮತ್ತೆ ಬಿಜೆಪಿ ನೇತೃತ್ವದ ಸರ್ಕಾರನ್ನೇ ಗೆಲ್ಲಿಸಿ: ಕೇಂದ್ರ ಸಚಿವ ಪಿಯೂಷ್‌ ಗೋಯಲ್‌

ಸಾರಾಂಶ

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಡಬಲ್‌ ಇಂಜಿನ್‌ ಸರ್ಕಾರ ಜನರ ಆಶೋತ್ತರ ಈಡೇರಿಸಲಿವೆ. ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಪಕ್ಷವನ್ನು ಬೆಂಬಲಿಸಬೇಕು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌ ಗೋಯಲ್‌ ಮನವಿ ಮಾಡಿದರು. 

ಬೆಂಗಳೂರು (ಏ.08): ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಡಬಲ್‌ ಇಂಜಿನ್‌ ಸರ್ಕಾರ ಜನರ ಆಶೋತ್ತರ ಈಡೇರಿಸಲಿವೆ. ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಪಕ್ಷವನ್ನು ಬೆಂಬಲಿಸಬೇಕು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌ ಗೋಯಲ್‌ ಮನವಿ ಮಾಡಿದರು. ಕೆಂಪೇಗೌಡ ರಸ್ತೆಯ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(ಎಫ್‌ಕೆಸಿಸಿಐ)ಯಲ್ಲಿ ಆಯೋಜಿಸಿದ್ದ ಉದ್ಯಮಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಜನರ ಆಶೋತ್ತರಗಳನ್ನು ಈಡೇರಿಸಲಿವೆ. ಆದ್ದರಿಂದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಬೇಕು ಎಂದು ಕೋರಿದರು. ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ನರೇಂದ್ರ ಮೋದೊಯವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲೇ ದೇಶಕ್ಕೆ ಜಿ-20 ಶೃಂಗಸಭೆಯ ಅಧ್ಯಕ್ಷ ಸ್ಥಾನ ಸಿಕ್ಕಿದೆ. 

ಮತದಾರರಿಗೆ ಉಡುಗೊರೆ: ಕುಸುಮಾ, ಡಿಕೆಸು ಸೇರಿ ಮೂವರ ವಿರುದ್ಧ ಕೇಸ್‌

ಇದರಿಂದ ಪ್ರಮುಖ ನೀತಿಗಳನ್ನು ರೂಪಿಸುವಲ್ಲಿ ಭಾರತದ ಪಾತ್ರ ಮಹತ್ವದ್ದಾಗಿದೆ. ಜಗತ್ತನ್ನೇ ಬಾಧಿಸಿದ ಕೋರೋನಾವನ್ನು ಭಾರತದಲ್ಲಿ ಸಮರ್ಥವಾಗಿ ನಿಭಾಯಿಸಲಾಯಿತು ಎಂದು ವಿವರಿಸಿದರು. ರಾಜ್ಯದಲ್ಲೂ ಬಿಜೆಪಿ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಮತದಾರರು ಮತ್ತೊಮ್ಮೆ ಆಶೀರ್ವಾದ ಮಾಡಬೇಕು. ಮತದಾರರ ಬೇಡಿಕೆಗಳೇನು ಎಂಬುದನ್ನು ತಿಳಿಯಲು ಇಂತಹ ಸಂವಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. 

ಸಲಹೆಗಳನ್ನು ಸಮಗ್ರವಾಗಿ ಪರಿಶೀಲಿಸಿ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಲಾಗುವುದು ಎಂದು ತಿಳಿಸಿದರು. ಉದ್ದಿಮೆಗೆ ಪೂರಕ ವಾತಾವರಣ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮಾತನಾಡಿ, ರಾಜ್ಯದಲ್ಲಿ ಉದ್ದಿಮೆಗೆ ಪೂರಕ ವಾತಾವರಣವಿದೆ. ಭಾರತವೇ ಕರ್ನಾಟಕದತ್ತ ನೋಡುವಂತಹ ಉತ್ತಮ ಸ್ಥಿತಿಯಿದೆ. ಆರೋಗ್ಯ, ತಂತ್ರಜ್ಞಾನ, ಶಿಕ್ಷಣ, ಸ್ಟಾರ್ಟಪ್‌, ಕೃತಕ ಬುದ್ಧಿಮತ್ಥೆ ಮತ್ತಿತರ ಉದ್ಯಮಗಳಿಗೆ ಸಾಕಷ್ಟುಪ್ರೋತ್ಸಾಹ ನೀಡಲಾಗುತ್ತಿದೆ. ಆದ್ದರಿಂದ ಬಂಡವಾಳ ಹೂಡಿಕೆಗೂ ರಾಜ್ಯ ಪ್ರಶಸ್ತವಾಗಿದೆ ಎಂದು ಬಣ್ಣಿಸಿದರು. 

ಕಾಂಗ್ರೆಸ್‌ ತೊರೆದು ಏ.14ಕ್ಕೆ ರಘು ಆಚಾರ್‌ ಜೆಡಿಎಸ್‌ಗೆ ಸೇರ್ಪಡೆ: 17ರಂದು ನಾಮಪತ್ರ ಸಲ್ಲಿಕೆ

ಸಂಸದ ಪಿ.ಸಿ.ಮೋಹನ್‌, ಎಫ್‌ಕೆಸಿಸಿಐ ಅಧ್ಯಕ್ಷ ಬಿ.ವಿ.ಗೋಪಾಲ್‌ರೆಡ್ಡಿ, ಉಪಾಧ್ಯಕ್ಷರಾದ ರಮೇಶ್‌ಚಂದ್ರ ಲಹೋಟಿ, ಎಂ.ಜಿ.ಬಾಲಕೃಷ್ಣ, ಕಾರ್ಯಕ್ರಮ ಸಂಯೋಜಕ ತ್ರಿವಿಕ್ರಂ ಜೋಶಿ ಮತ್ತಿತರರು ಹಾಜರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌