
ದಾವಣಗೆರೆ(ಏ.07): ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರಕ್ಕೆ ತಮ್ಮ ಸಹೋದರ ಎಂ.ಪಿ.ದಾರುಕೇಶ್ವರಯ್ಯ ಸಲ್ಲಿಸಿರುವ ನಾಮಪತ್ರವನ್ನು ವಾಪಸ್ ತೆಗೆಸುತ್ತೇನೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ನಗರದ ಖಾಸಗಿ ಹೊಟೆಲ್‌ನಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ ಅಗರವಾಲ್ ಜೊತೆಗಿನ ಸಂಧಾನ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಶಿಷ್ಟ ಜಾತಿಗೆ ಮೀಸಲಾದ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಸಹೋದರ ನಾಮಪತ್ರ ಸಲ್ಲಿಸಿದ್ದು, ಆ ನಾಮಪತ್ರವನ್ನು ವಾಪಸ್ ತೆಗೆಸುವೆ ಎಂದರು.
ಆ ಪುಣ್ಯಾತ್ಮನಿಗೆ ನಾಚಿಕೆ ಮಾನ ಮರ್ಯಾದೇ ಏನೂ ಇಲ್ಲ: ಅಮಿತ್ ಶಾ ವಿರುದ್ಧ ಸಿಎಂ ಕಿಡಿ
ನಮ್ಮ ಕುಟುಂಬಕ್ಕೆ ಪರಿಶಿಷ್ಟ ಜಾತಿಯ ಪ್ರಮಾಣಪತ್ರದ ಅವಶ್ಯಕತೆ ಇಲ್ಲ. ಈಗಾಗಲೇ ನಾನು ಚಿತ್ರದುರ್ಗ ಕ್ಷೇತ್ರದ ನಮ್ಮ ಪಕ್ಷದ ಅಭ್ಯರ್ಥಿ ಗೋವಿಂದ ಕಾರಜೋಳ ಜೊತೆಗೂ ಮಾತನಾಡಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.