ಬೆಂಗಳೂರಿನ 9 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ : ಎಚ್‌ಡಿಡಿ ಮಹತ್ವದ ಘೋಷಣೆ

Kannadaprabha News   | Asianet News
Published : Sep 03, 2021, 11:31 AM IST
ಬೆಂಗಳೂರಿನ 9 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ : ಎಚ್‌ಡಿಡಿ ಮಹತ್ವದ ಘೋಷಣೆ

ಸಾರಾಂಶ

 9 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರನ್ನು ಕಣಕ್ಕಿಳಿಸಲಾಗುವುದು    ಜೆಡಿಎಸ್‌ ವರಿಷ್ಠ ದೇವೇಗೌಡರಿಂದ ಮಹತ್ವದ ಘೋಷಣೆ 

ಬೆಂಗಳೂರು (ಸೆ.03):  ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆ ವೇಳೆ ಬೆಂಗಳೂರು ನಗರದ 9 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್‌ ವರಿಷ್ಠ ದೇವೇಗೌಡ ಘೋಷಿಸಿದ್ದಾರೆ. 

 ಗುರುವಾರ ಪಕ್ಷದ ಕಚೇರಿಯಲ್ಲಿ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು

ಪಕ್ಷ ಬಲಪಡಿಸದವರಿಗೆ ಟಿಕೆಟ್‌ ಇಲ್ಲ: ದೇವೇಗೌಡ

2023ರ ವಿಧಾನಸಭೆ ಚುನಾವಣೆಗೆ ಬೆಂಗಳೂರು ನಗರದ ಎಲ್ಲಾ 28 ವಿಧಾನಸಭಾ ಕ್ಷೇತ್ರದಲ್ಲಿಯೂ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸಲಾಗುವುದು. ಈ ಪೈಕಿ ಒಂಭತ್ತು ಕ್ಷೇತ್ರದಲ್ಲಿ ಮಹಿಳೆಯರಿಗೆ ಟಿಕೆಟ್‌ ನೀಡಲಾಗುವುದು ಎಂದರು. 

ಅವರು ಸೋಲಿ, ಗೆಲ್ಲಲಿ ಯಾವುದೇ ಸಮಸ್ಯೆ ಇಲ್ಲ. ಆದರೆ, ಪಕ್ಷದ ಸಂಘಟನೆಗೆ ಶ್ರಮಿಸಲಿ, ಒಂದು ವೇಳೆ ಸೋತರೆ ಅವರು ಮುಂದೆ ಬೆಳೆಯುತ್ತಾರೆ. ಹೀಗಾಗಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌