
ಬೆಂಗಳೂರು(ಜೂ.07): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಎಕ್ಸ್‌ನಲ್ಲಿ ಬರೆದುಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿಯಿಂದಲೂ ನಿಗಮ ಹಣ ಅಕ್ರಮ ವರ್ಗ: ದಾಖಲೆಗಳು ಸಿಕ್ಕಿವೆ ಎಂದ ಡಿ.ಕೆ.ಶಿವಕುಮಾರ್
ಪರಾಭವಗೊಂಡ ಅಭ್ಯರ್ಥಿಗಳಿಗೂ ಧೈರ್ಯ ತುಂಬಿದ ರಾಹುಲ್ ಗಾಂಧಿ ಅವರು, ನೀವು ಸೋತರೂ ಜನರ ಮಧ್ಯೆ ಇರಬೇಕು ಹಾಗೂ ನಮಗೆ ಮತ ನೀಡದವರ ಹೃದಯ ಗೆಲ್ಲಬೇಕು ಎಂದು ಮಾರ್ಗದರ್ಶನ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.