ರಾಷ್ಟ್ರಮಟ್ಟದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿಕೊಂಡು ಮುಂದೆ ಹೆಜ್ಜೆ ಇಡಬೇಕಿದೆ. ಕಾರ್ಯಕರ್ತರೇ ಪಕ್ಷದ ಶಕ್ತಿಯಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಕರೆ ಕೊಟ್ಟಿದ್ದಾರೆ.
ಬೆಂಗಳೂರು (ಡಿ.12): ರಾಷ್ಟ್ರಮಟ್ಟದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿಕೊಂಡು ಮುಂದೆ ಹೆಜ್ಜೆ ಇಡಬೇಕಿದೆ. ಕಾರ್ಯಕರ್ತರೇ ಪಕ್ಷದ ಶಕ್ತಿಯಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಕರೆ ಕೊಟ್ಟಿದ್ದಾರೆ. ಭಾನುವಾರ ಚಾಮರಾಜಪೇಟೆ ಸೇರಿದಂತೆ ಹಲವು ಬ್ಲಾಕ್‌ಗಳ ಕಾಂಗ್ರೆಸ್ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಅನೇಕ ಘಟನೆಗಳು ನಡೆಯುತ್ತಿವೆ. ಮುಂದೆ ಒಂದು ಹೆಜ್ಜೆ ಇಡುವಾಗಲೂ ಬೇರೆ ಬೇರೆ ರಾಜ್ಯಗಳಲ್ಲಿ ಏನಾಗುತ್ತಿದೆ ಎಂಬುದನ್ನು ಗಮನದಲ್ಲಿ ಇಟ್ಟುಕೊಂಡು ಬದಲಾವಣೆಗೆ ಮುಂದಾಗಬೇಕು.
ನಮ್ಮನ್ನು ಬಿಟ್ಟು ಹೋದವರು ಅವರ ಭಾವನೆ ವ್ಯಕ್ತಪಡಿಸುತ್ತಿದ್ದಾರೆ ಎಂದರು. ನಮ್ಮ ಪಕ್ಷದ ಕಾರ್ಯಕರ್ತರು ನಮಗೆ ಹೋರಾಟ ಹಾಗೂ ಪಕ್ಷ ಸಂಘಟನೆಯ ಶಕ್ತಿ ಕೊಟ್ಟಿದ್ದಾರೆ. ಆ ಶಕ್ತಿಯ ಮೇಲೆಯೇ ಮುಂದಿನ ಚುನಾವಣೆಯಲ್ಲಿ ಹೋರಾಟ ಮಾಡಲಾಗುತ್ತದೆ. ಜೆಡಿಎಸ್‌ನಿಂದಲೇ ನಮಗೆ ಶಕ್ತಿ ಸಿಕ್ಕಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆ ಮೂಲಕ ಹಲವು ಜಿಲ್ಲೆಗಳಲ್ಲಿ ಸಂಚರಿಸಿದ್ದಾರೆ. ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಭರವಸೆ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ತಿಳಿಸಿದರು.
ಪ್ರಾಣಕೊಟ್ಟು ಹೋರಾಡಿ ಪಕ್ಷ ಗೆಲ್ಲಿಸುತ್ತೇವೆ: ಎಚ್.ಡಿ.ದೇವೇಗೌಡ
ಸಂಸತ್ತಲ್ಲಿ ಮೇಕೆದಾಟು ಯೋಜನೆ ವಿಚಾರ ಪ್ರಸ್ತಾಪಿಸಿದ ದೇವೇಗೌಡ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಂಸತ್ತಿನಲ್ಲಿ ಕರ್ನಾಟಕದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಯಾದ ಮೇಕೆದಾಟು ಕುರಿತು ಗಟ್ಟಿಧ್ವನಿಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಈ ಯೋಜನೆಗೆ ಅಡ್ಡಿ ಪಡಿಸಲಾಗುತ್ತಿದೆ ಎಂದು ತಮಿಳುನಾಡಿನ ಹೆಸರೆತ್ತದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಗೌಡರು, ರಾಜ್ಯವು ಕುಡಿಯುವ ನೀರಿನ ಕೊರತೆ ಅನುಭವಿಸುತ್ತಿದೆ. ನಮ್ಮ ನೆಲದಲ್ಲಿ ನಾವು ಮೇಕೆದಾಟು ಡ್ಯಾಮ್ ನಿರ್ಮಾಣಕ್ಕೆ ಅಡ್ಡಿಯಾಗುತ್ತಿದೆ. ಬೇರೆ ರಾಜ್ಯದ ಭೂಮಿಯನ್ನು ನಾವು ಒತ್ತುವರಿ ಮಾಡುತ್ತಿಲ್ಲ. ಆದರೂ ಅಡ್ಡಿಪಡಿಸಲಾಗುತ್ತಿದೆ ಎಂದು ತಮಿಳುನಾಡು ವಿರುದ್ಧ ಹರಿಹಾಯ್ದರು.
ಜೆಡಿಎಸ್ ಹಣದಿಂದ ರಾಜಕೀಯ ಮಾಡ್ತಿಲ್ಲ: ಎಚ್.ಡಿ.ದೇವೇಗೌಡ
ಹಳೇ ಮೈಸೂರು ಭಾಗದ 9 ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಅಭಾವ ಇದೆ. ಈ ಜಿಲ್ಲೆಗಳಲ್ಲಿ ಕುಡಿಯುವ ನೀರಿಗಾಗಿ ಭಿಕ್ಷೆ ಬೇಡಬೇಕಾದ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರಕ್ಕೆ ನಾವು ಹಲವು ಮನವಿಗಳನ್ನು ಮಾಡಿದ್ದೇವೆ. ಕರ್ನಾಟಕದ ನೀರಿನ ಸಮಸ್ಯೆ ಪರಿಹಾರ ಮಾಡಬೇಕಿದೆ ಎಂದರು. ಇದೇ ವೇಳೆ ದೇವೇಗೌಡರ ಮಾತಿಗೆ ತಮಿಳುನಾಡು ಸಂಸದರು ಅಡ್ಡಿಪಡಿಸಲು ಯತ್ನಿಸಿದಾಗ ಜೋರು ಧ್ವನಿಯಲ್ಲೇ, ಈ ಕುರಿತು ಯಾರ ಪ್ರಶ್ನೆಗಳಿಗೆ ಬೇಕಾದರೂ ನಾನು ಉತ್ತರಿಸಲು ಸಿದ್ಧ ಎಂದರು. ಕಾವೇರಿ, ತುಂಗಭದ್ರಾ, ಮಹದಾಯಿ ಸೇರಿ ರಾಜ್ಯದ ಹಲವು ಯೋಜನೆಗಳ ಕುರಿತ ಸಮಸ್ಯೆಗಳು ಕೇಂದ್ರ ಸರ್ಕಾರದ ಮುಂದೆ ಬಾಕಿ ಇವೆ. ಅವುಗಳನ್ನು ಶೀಘ್ರ ಪರಿಹರಿಸಬೇಕಿದೆ ಎಂದರು.