ಈ ಬಾರಿ ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಉತ್ತಮ ಅಭ್ಯರ್ಥಿ ನಿಲ್ಲಿಸಲಿದ್ದೇವೆ. ಈ ಬಾರಿ ಗೆಲುವು ಕಾಂಗ್ರೆಸ್‌ನದ್ದಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ಶಿರಸಿ (ಡಿ.31): ಈ ಬಾರಿ ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಉತ್ತಮ ಅಭ್ಯರ್ಥಿ ನಿಲ್ಲಿಸಲಿದ್ದೇವೆ. ಈ ಬಾರಿ ಗೆಲುವು ಕಾಂಗ್ರೆಸ್‌ನದ್ದಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷದಿಂದ ಜಿಲ್ಲೆಯಲ್ಲಿ ಸಂಸದರ ಆಡಳಿತವನ್ನು ಜನರು ನೋಡಿದ್ದಾರೆ. ಲೋಕಸಭೆ ಚುನಾವಣೆಗೆ ಸೂಕ್ತ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ರಾಜ್ಯದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿ ಜಿಲ್ಲೆಗೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಒಳ್ಳೆಯ ಅಭ್ಯರ್ಥಿಯನ್ನೇ ನೀಡಲಿದ್ದು, ನಮ್ಮ ಅಭ್ಯರ್ಥಿಯೇ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಮರಳುಗಾರಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಯುತ್ತಿಲ್ಲ. ಜನರಿಗೆ ಅನೂಕೂಲವಾಗಬೇಕೆ ವಿನಃ ತೊಂದರೆಯಾಗಬಾರದು. ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಆಗುತ್ತಿದೆ ಎಂದರೆ ತಪ್ಪಾಗಬಹುದು. ಮರಳು ದರ ಕಡಿಮೆಯಾಗಬೇಕು. ಆ ದೃಷ್ಟಿಯಲ್ಲಿ ಕ್ರಮ ಕೈಗೊಳ್ಳಬಹುದು ಎಂದರು.
undefined
ಶ್ರೀ ಮಾರಿಂಬಾ ದೇವಿ ಜಾತ್ರೆಯಲ್ಲಿ ಭಕ್ತರಿಗೆ ಯಾವುದೇ ಕುಂದು ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಪ್ರತಿ ವರ್ಷವೂ ಜಾತ್ರೆಯ ಖರ್ಚು ವೆಚ್ಚವನ್ನು ಸರ್ಕಾರವೇ ಭರಿಸುತ್ತಿದೆ. ಈ ಭಾರಿ ಕೂಡ ಸರ್ಕಾರ ಅನುದಾನ ನೀಡಲಿದ್ದು, ₹ 2ರಿಂದ ₹ 5 ಕೋಟಿ ಅನುದಾನ ನೀಡಲಾಗುವುದು. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಇನ್ನುಳಿದ ಸಮಸ್ಯೆ ಬಗ್ಗೆ ಕ್ರಮಕೈಗೊಳ್ಳಲಾವುದು. ಈ ಕುರಿತು ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ರಾಮಮಂದಿರ ಉದ್ಘಾಟನೆಗೆ ಇನ್ನೂ ಆಹ್ವಾನ ಬಂದಿಲ್ಲ: ಸಿಎಂ ಸಿದ್ದರಾಮಯ್ಯ
ಕೇಂದ್ರ ಸರ್ಕಾರ ಬೇಕಾಬಿಟ್ಟಿ ಹಣ ನೀಡಲು ಸಿದ್ದರಾಮಯ್ಯನ ಅಪ್ಪನ ಆಸ್ತಿಯಲ್ಲ ಎಂಬ ಸಂಸದ ಅನಂತಕುಮಾರ ಹೆಗಡೆ ಹೇಳಿಕೆಗೆ ಪ್ರತಿಕ್ರಿಯೆ ನೀಡದ ಅವರು, ಅನಂತಕುಮಾರ ಹೆಗಡೆ ರಾಜಕೀಯ ಕ್ಷೇತ್ರದಲ್ಲಿ ಅನುಭವ ಇದ್ದವರು. ಅವರು ಜೀವನದಲ್ಲಿ ಸಮಾಧಾನವಾಗಿ ಮಾತನಾಡಿದ್ದು ನೋಡಿಲ್ಲ. ಜೀವನದಲ್ಲಿ ಒಳ್ಳೆಯ ಮಾತನಾಡಿದ್ದನ್ನೂ ನಾನು ಕೇಳಿಲ್ಲ. ಮುಖ್ಯಮಂತ್ರಿ ಅವರಿಗೆ ಅವರದ್ದೇ ಆದ ಗೌರವ ಸ್ಥಾನಮಾನವಿದೆ. ಮುಖ್ಯಮಂತ್ರಿಗಳು ಬಡವರ ಪರ ಹಲವು ಯೋಜನೆಗಳನ್ನ ನೀಡಿದ್ದು, ಪ್ರತಿಯೊಬ್ಬ ಜನಸಾಮಾನ್ಯರಿಗು ತಿಳಿದಿದೆ. ಆದರೆ ಅದನ್ನೆಲ್ಲ ಮರೆತ ಸಂಸದರು ಈ ರೀತಿಯ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದರು.