ಯತೀಂದ್ರ, ಸಿ.ಟಿ.ರವಿ ಸೇರಿ 11 ಜನ ವಿಧಾನಪರಿಷತ್​ಗೆ ಅವಿರೋಧ ಆಯ್ಕೆ!

By Kannadaprabha News  |  First Published Jun 7, 2024, 6:26 AM IST

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್​ಗೆ ಚುನಾವಣಾ ಕಣದಲ್ಲಿದ್ದ ಕಾಂಗ್ರೆಸ್​ನ ಏಳು ಅಭ್ಯರ್ಥಿಗಳಾದ ಸಚಿವ ಬೋಸರಾಜು, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಕೆ.ಗೋವಿಂದ ರಾಜು, ವಸಂತ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಬೆಂಗಳೂರು (ಜೂ.07): ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್​ಗೆ ಚುನಾವಣಾ ಕಣದಲ್ಲಿದ್ದ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್​ನ ಏಳು ಅಭ್ಯರ್ಥಿಗಳಾದ ಸಚಿವ ಬೋಸರಾಜು, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಕೆ.ಗೋವಿಂದ ರಾಜು, ವಸಂತ ಕುಮಾರ್, ಐವಾನ್ ಡಿಸೋಜಾ, ಬಲ್ಕೀಸ್ ಬಾನು, ಜಗದೇವ್ ಗುತ್ತೇದಾರ್, ಬಿಜೆಪಿಯ ಮೂವರು ಅಭ್ಯರ್ಥಿಗಳಾದ ಮಾಜಿ ಸಚಿವ ಸಿ.ಟಿ.ರವಿ, ಎನ್.ರವಿಕುಮಾರ್, ಎಂ.ಜಿ.ಮುಳೆ ಹಾಗೂ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಅವಿರೋಧವಾಗಿ ಆಯ್ಕೆಯಾದವರಾಗಿದ್ದಾರೆ.

ಮರಿತಿಬ್ಬೇಗೌಡರಿಗೆ ಮುಳುವಾದ ಮೈತ್ರಿಕೂಟ: ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಸತತ ಐದನೇ ಬಾರಿ ಆಯ್ಕೆ ಬಯಸಿ ಈ ಬಾರಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಹಳೇ ಹುಲಿ ಮರಿತಿಬ್ಬೇಗೌಡರ ಆಸೆಗೆ ಜೆಡಿಎಸ್- ಬಿಜೆಪಿ ಮೈತ್ರಿಕೂಟ ತಣ್ಣೀರೆರಚಿದೆ. ಎನ್‌ಡಿಎ ಮೈತ್ರಿಕೂಟ ಅವರ ಸೋಲಿಗೆ ಮುನ್ನುಡಿ ಬರೆದಿದೆ. ಆ ಮೂಲಕ ಕಳೆದ 24 ವರ್ಷಗಳಿಂದ ಇದ್ದ ಅವರ ಏಕಚಕ್ರಾಧಿಪತ್ಯ ಅಂತ್ಯವಾಗಿದೆ. ಜೆಡಿಎಸ್‌ನ ಕೆ. ವಿವೇಕಾನಂದ ಗೆಲುವಿನ ನಗೆ ಬೀರಿದ್ದಾರೆ.

Tap to resize

Latest Videos

ಚನ್ನಪಟ್ಟಣಕ್ಕೆ ಡಿಕೆಸು ನಿಲ್ಲಿಸುವ ಚಿಂತನೆಯಿಲ್ಲ: ಡಿ.ಕೆ.ಶಿವಕುಮಾರ್‌

ಹಳೆ ಮೈಸೂರು ಪ್ರಾಂತ್ಯಕ್ಕೆ ಸೇರಿದ ಈ ನಾಲ್ಕು ಜಿಲ್ಲೆಗಳಲ್ಲಿ ಸಹಜವಾಗಿಯೇ ಜೆಡಿಎಸ್ ಬಲಿಷ್ಠವಾಗಿದೆ. ಹೀಗಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದ ಮರಿತಿಬ್ಬೇಗೌಡರು ಕಾಂಗ್ರೆಸ್ ಸೇರಿ ಸ್ಪರ್ಧಿಸಿದ್ದರೂ ಕೂಡ ಹೊಸಬರಾದ ಕೆ. ವಿವೇಕಾನಂದರನ್ನು ನಿಲ್ಲಿಸಿ, ಗೆಲ್ಲಿಸಿಕೊಳ್ಳುವ ಮೂಲಕ ಜೆಡಿಎಸ್ ಈ ಕ್ಷೇತ್ರವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ. ಕಳೆದ ನಾಲ್ಕು ಅವಧಿಯಲ್ಲಿ ತ್ರಿಕೋನ ಹೋರಾಟದ ಲಾಭ ಪಡೆದು ಗೆಲ್ಲುತ್ತಿದ್ದ ಮರಿತಿಬ್ಬೇಗೌಡರು ಈ ಬಾರಿ ಜೆಡಿಎಸ್- ಬಿಜೆಪಿ ಮೈತ್ರಿಯಿಂದಾಗಿ ನೇರ ಹೋರಾಟದಲ್ಲಿ ಸೋತಿದ್ದಾರೆ. ಹಳೆಯ ಮೈಸೂರು ಭಾಗದಲ್ಲಿ ಲೋಕಸಭಾ ಚುನಾವಣೆಯಲ್ಲಿ ಆದಂತೆಯೇ ಸುಶಿಕ್ಷತರ ಕ್ಷೇತ್ರದಿಂದ ನಡೆದ ಈ ಚುನಾವಣೆಯಲ್ಲಿಯೂ ಕೂಡ ಜೆಡಿಎಸ್- ಬಿಜೆಪಿ ಮೈತ್ರಿ ಗೆಲುವಿಗೆ ಪೂರಕವಾಗಿ ಕೆಲಸ ಮಾಡಿದೆ.

ಮರಿತಿಬ್ಬೇಗೌಡರು ಸತತವಾಗಿ ಶಿಕ್ಷಕರು ಹಾಗೂ ಪದವೀಧರ ಪರವಾಗಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಿಕೊಂಡು ಬಂದಿದ್ದರು. ಹೀಗಾಗಿ 2000 ರಲ್ಲಿ ಕಾಂಗ್ರೆಸ್, 2006 ರಲ್ಲಿ ಪಕ್ಷೇತರ, 2012, 2018 ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಗೆದ್ದಿದ್ದರು. 2000 ರಲ್ಲಿ ಈ ಕ್ಷೇತ್ರದ ಚುನಾವಣೆ ಎದುರಾದಾಗ ಕಾಂಗ್ರೆಸ್ ಟಿಕೆಟ್ ಯಾರಿಗೂ ಬೇಡವಾಗಿತ್ತು. ಏಕೆಂದರೆ ಸುಶಿಕ್ಷಿತರ ಕ್ಷೇತ್ರದಲ್ಲಿ ಜನತಾ ಪರಿವಾರ ಹಾಗೂ ಬಿಜೆಪಿಯದ್ದೇ ಆಟ. ಕಾಂಗ್ರೆಸ್ ಗೆಲ್ಲುವುದಿಲ್ಲ ಎಂಬುದು ನಂಬಿಕೆ ಇತ್ತು. ಆದರೆ ಇದನ್ನು ಸುಳ್ಳು ಮಾಡುವಂತೆ ಅಚ್ಚರಿಯ ಫಲಿತಾಂಶಕ್ಕೆ ಕಾರಣರಾದವರು ಮರಿತಿಬ್ಬೇಗೌಡ. ಈ ಭಾಗದ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಮೊದಲ ಗೆಲವು ತಂದುಕೊಟ್ಟರು. ನಂತರ ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಜೆಡಿಎಸ್ ಜೊತೆ ಗುರುತಿಸಿಕೊಂಡರು. 

ಬಿಜೆಪಿ ಮೊದಲು ಕಾನೂನು ಸುವ್ಯವಸ್ಥೆಯ ಡೆಫಿನೆಷನ್ ಹೇಳಲಿ: ಗೃಹಸಚಿವ ಪರಮೇಶ್ವರ್

ಆದರೆ 2006 ರಲ್ಲಿ ಅವರ ಬದಲು ಶಿಕ್ಷಣ ಇಲಾಖೆ ನಿವೃತ್ತ ನಿರ್ದೇಶಕಿ ಪಿ. ಶಾರದಮ್ಮ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೂ ಎದೆಗುಂದದ ಮರಿತಿಬ್ಬೇಗೌಡರು ಶಿಕ್ಷಕರ ವೇದಿಕೆಯ ಹೆಸರಿನಲ್ಲಿ ಪಕ್ಷೇತರರಾಗಿ ಕಣಕ್ಕಿಳಿದು ಮೂರು ಪಕ್ಷಗಳ ಅಭ್ಯರ್ಥಿಗಳನ್ನು ಸೋಲಿಸಿದ ಮರಿತಿಬ್ಬೇಗೌಡ ಎರಡನೇ ಜಯ ದಾಖಲಿಸಿದರು. ಮತ್ತೆ ಜೆಡಿಎಸ್ ಜೊತೆ ಗುರುತಿಸಿಕೊಂಡ ಅವರು 2012 ರಲ್ಲಿ ಅದೇ ಪಕ್ಷದ ಅಭ್ಯರ್ಥಿಯಾಗಿ ಸತತ ಮೂರನೇ ಬಾರಿ ಗೆದ್ದು, ಹ್ಯಾಟ್ರಿಕ್ ವೀರ ಎನಿಸಿಕೊಂಡರು. ಉಪ ಸಭಾಪತಿಯೂ ಆದರು. 2018 ರಲ್ಲಿ ಮತ್ತೆ ಜೆಡಿಎಸ್ ಅಭ್ಯರ್ಥಿಯಾಗಿ ಸತತ ನಾಲ್ಕನೇ ಗೆಲವು ದಾಖಲಿಸಿದ್ದರು.

click me!