
ಮೈಸೂರು(ಸೆ.27): ವಾಸ್ತವಾಗಿ ವರುಣ ಕ್ಷೇತ್ರಕ್ಕೆ ಡಾ. ಯತೀಂದ್ರ ಎಂಎಲ್ಎ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿ ಮೂಡಿಸಿದರು.
ಮೈಸೂರು ತಾಲೂಕು ಸರ್ಕಾರಿ ಉತ್ತನಹಳ್ಳಿಯಲ್ಲಿ ಮಂಗಳವಾರ ನಡೆದ ಪಶುಸಖಿಯರಿಗೆ ಎ- ಹೆಲ್ಪ್ ರಾಜ್ಯ ಮಟ್ಟದ ತರಬೇತಿ ಕಾರ್ಯಕ್ರಮಕ್ಕೆ ತಡವಾಗಿ ಬಂದ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ತಮ್ಮ ಭಾಷಣ ನಡುವೆ ಸ್ವಾಗತಿಸಿದ ಸಿದ್ದರಾಮಯ್ಯ ಅವರು, ವಾಸ್ತವವಾಗಿ ಇಲ್ಲಿಗೆ ಅವನೇ ಎಂಎಲ್ಎ. ವಿಧಾನಸಭಾ ಚುನಾವಣೆಯಲ್ಲಿ ಅವನೇ ಹೆಚ್ಚು ಕೆಲಸ ಮಾಡಿದ್ದು. ನಾನು ಹೆಚ್ಚು ಬರಲೇ ಇಲ್ಲ. ಹಾಗಾಗಿ ಅವನೇ ಹೆಚ್ಚಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದಾನೆ ಎಂದು ಹೇಳಿದರು.
ಮಡಿವಾಳ ಸಮುದಾಯಕ್ಕೆ ನನ್ನ ತಂದೆ ಸ್ವತಃ ಕೈಯಿಂದ ಕುಕ್ಕರ್ ಕೊಟ್ಟಿಲ್ಲ; ಉಲ್ಟಾ ಹೊಡೆದ ಸಿಎಂ ಪುತ್ರ !
ಉತ್ತನಹಳ್ಳಿ ಭಾಗದಲ್ಲಿ ನಾನು ಪ್ರಚಾರಕ್ಕೆ ಬರದಿದ್ದರೂ ಊರಿನವರು ಸಹ ಮತ ಕೊಟ್ಟಿದ್ದೀರಿ. ನಿಮಗೆಲ್ಲರಿಗೂ ನನ್ನ ಧನ್ಯವಾದಗಳು ಎಂದು ಅವರು ಕೃತಜ್ಞತೆ ಸಲ್ಲಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.