ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಫಿಕ್ಸ್, ಪುತ್ರ ಬಿಟ್ಟು ಕೊಟ್ಟ ಸುಳಿವು

By Gowthami KFirst Published Oct 17, 2022, 2:26 PM IST
Highlights

ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಚುನಾವಣೆಗೆ ನಿಲ್ಲುವುದು ಸ್ಪಷ್ಟವಾಗಿದೆ. ವರುಣ ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಅಪ್ಪ ತೀರ್ಮಾನ ಮಾಡಿದ್ರೆ, ನಾನು ಪಕ್ಷದ ಶಾಸಕ ಹಾಗೂ ಆ ಕ್ಷೇತ್ರದ ಹಿಂದಿನ ಶಾಸಕನಾಗಿ ಅವರ ಪರ ಕೆಲಸ ಮಾಡಬೇಕಾಗುತ್ತದೆ. ಅಪ್ಪ ನಿಂತರೆ ನಾನು ಎಲ್ಲೂ ಸ್ಪರ್ಧೆ ಮಾಡಲ್ಲ ಎಂದು ಪುತ್ರ ಯತೀಂದ್ರ ಹೇಳಿದ್ದಾರೆ.

ಬೆಂಗಳೂರು (ಅ.17):  ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಚುನಾವಣೆಗೆ ನಿಲ್ಲುವುದು ಸ್ಪಷ್ಟವಾಗಿದೆ. ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ವರುಣದಿಂದ ತಂದೆ ಸ್ಪರ್ಧಿಸುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರು ವರುಣದಿಂದ ಸ್ಪರ್ಧೆ ಮಾಡ್ತಾರೆ ಎಂದು ಸಾಕಷ್ಟು ಜನ ಕೇಳಿದ್ದಾರೆ. ನಾನು ಸಾಕಷ್ಟು ಬಾರಿ ಉತ್ತರ ನೀಡಿದ್ದೇನೆ. ತಂದೆಯವರು ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿಲ್ಲ. ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿದ್ರೆ ನಾವು ಬದ್ದವಾಗಿದ್ದೇವೆ. ವರುಣದಲ್ಲಿದ್ದಾರೂ ನಿಲ್ಲಬಹುದು, ಬೇರೆ ಕಡೆಯಾದರು ನಿಲ್ಲಬಹುದು. ಬೇರೆ ಕಡೆಯಲ್ಲೂ ಅವರನ್ನ ಕರೆಯುತ್ತಿದ್ದಾರೆ.  ವರುಣ ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಅಪ್ಪ ತೀರ್ಮಾನ ಮಾಡಿದ್ರೆ, ನಾನು ಪಕ್ಷದ ಶಾಸಕ ಹಾಗೂ ಆ ಕ್ಷೇತ್ರದ ಹಿಂದಿನ ಶಾಸಕನಾಗಿ ಅವರ ಪರ ಕೆಲಸ ಮಾಡಬೇಕಾಗುತ್ತದೆ. ಅಪ್ಪ ನಿಂತರೆ ನಾನು ಎಲ್ಲೂ ಸ್ಪರ್ಧೆ ಮಾಡಲ್ಲ. ಕ್ಷೇತ್ರದಲ್ಲಿ ಕೆಲಸ ಮಾಡಬೇಕಾಗುತ್ತದೆ. ಅಪ್ಪನಿಗಾಗಿ ಪ್ರಚಾರ ಮಾಡ್ತೇನೆ. ತ್ಯಾಗ ಏನು ಅಲ್ಲ, ತಂದೆ ನಿಲ್ಲುತಾರೆ ಎಂದ್ರೆ ಬೇರೆಯವರು ಬಿಟ್ಟು ಕೊಡ್ತಾರೆ. ನಾನು ಕೂಡ ಪಕ್ಷದ ಕಾರ್ಯಕರ್ತನಾಗಿ ಬಿಟ್ಟು ಕೊಡ್ತೇನೆ ಎಂದಿದ್ದಾರೆ.

ಸಿದ್ದರಾಮಯ್ಯ ಪ್ರತಿಕ್ರಿಯೆ: ಸಿದ್ದರಾಮಯ್ಯ ವರುಣದಿಂದ ಸ್ಪರ್ಧೆ ಮಾಡಿದ್ರೆ ನಾನು ಎಲ್ಲೂ ಸ್ಪರ್ಧೆ ಮಾಡಲ್ಲ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಉತ್ತರಿಸಿದ್ದು, ಅದು ಅವರ ಅಭಿಪ್ರಾಯ. ನನ್ನ ಅಭಿಪ್ರಾಯ ಬೇರೆ, ಅವರ ಅಭಿಪ್ರಾಯ ಬೇರೆ ಎಂದು ನಗುತ್ತಲೇ ಹೊರ ನಡೆದಿದ್ದಾರೆ. 

ತಮ್ಮ ಮುಂದಿನ ಚುನಾವಣಾ ಕ್ಷೇತ್ರದ ಬಗ್ಗೆ ತಿಳಿಸಿದ ಸಿದ್ದರಾಮಯ್ಯ

ಎಐಸಿಸಿ ಅಧ್ಯಕ್ಷ  ಚುನಾವಣೆ ಬಗ್ಗೆ: ಎಐಸಿಸಿ (AICC) ಅಧ್ಯಕ್ಷ ಸ್ಥಾನ ಚುನಾವಣೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ 503 ಮತಗಳು ಕರ್ನಾಟಕದಲ್ಲಿವೆ. ಈ ಪೈಕಿ 423 ಮತಗಳು ಚಲಾವಣೆ ಅಗಿವೆ‌. ಮಲ್ಲಿಕಾರ್ಜುನ ಖರ್ಗೆ (mallikarjun kharge) ಹಿರಿಯ ನಾಯಕರು. 50 ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ವಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದಾರೆ.  ಈ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆಲ್ಲುವ ವಿಶ್ವಾಸ ಇದೆ.  ಕರ್ನಾಟಕದ ಎಲ್ಲಾ ಮತಗಳು ಅವರಿಗೆ ಬೀಳುತ್ತವೆ ಎಂಬ ವಿಶ್ವಾಸ ಇದೆ. ಈ ಚುನಾವಣೆಯಲ್ಲಿ ಖರ್ಗೆ ಗೆಲ್ಲುವುದು ನೂರಕ್ಕೆ ನೂರು ನಿಶ್ಚಿತ ಎಂದಿದ್ದಾರೆ.

ಸಿದ್ದರಾಮೋತ್ಸವದ ಬಳಿಕ ಮಠಗಳಿಗೆ ಭೇಟಿ ನೀಡಿ ಸಿದ್ದರಾಮಯ್ಯ ಚುನಾವಣೆಗೆ ಸಜ್ಜಾದರಾ?

ಖರ್ಗೆ ರಬ್ಬರ್ ಸ್ಟಾಂಪ್  ಎಂಬ ಬಿಜೆಪಿ ಆರೋಪ:  ಖರ್ಗೆ ರಬ್ಬರ್ ಸ್ಟಾಂಪ್ ಅಧ್ಯಕ್ಷ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ (Siddaramaiah ) ಬಿಜೆಪಿಯವರು ಚುನಾವಣೆ (Election) ಮಾಡೋದೆ ಇಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಅವರಿಗೆ. ಕಾಂಗ್ರೆಸ್ (congress) ಪಕ್ಷಕ್ಕೆ ‌ಆಂತರಿಕ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದೆ. ಬೊಮ್ಮಾಯಿ ಆರ್ ಎಸ್ ಎಸ್ ಕೃಪಾಕಟಾಕ್ಷದಿಂದ ಸಿಎಂ ಆಗಿದ್ದಾರೆ. ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಮಾಡಿದ್ರಾ? ಎಂದು ಪ್ರಶ್ನಿಸಿದ್ರು.

click me!