ಯತೀಂದ್ರ ಮೊಬೈಲ್ ಸಂಭಾಷಣೆ ವಿಚಾರ ತನಿಖೆಯಾಗಲಿ: ಆರಗ ಜ್ಞಾನೇಂದ್ರ

By Kannadaprabha NewsFirst Published Nov 17, 2023, 10:59 AM IST
Highlights

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ಸಂಭಾಷಣೆಯಲ್ಲಿ ಏನು ಮಾತನಾಡುತ್ತಿದ್ದಾರೆ? ಯಾರ ಜೊತೆ ಮಾತನಾಡುತ್ತಿದ್ದಾರೆ? ಏನು ನಿರ್ದೇಶನ ಕೊಡುತ್ತಿದ್ದಾರೆ? ಈ ಎಲ್ಲವೂ ಗೊತ್ತಾಗಬೇಕು. ತಂದೆಯ ಅಧಿಕಾರಿದಲ್ಲಿ ಮಗ ಮೂಗು ತೂರಿಸಿದ್ದಾರೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಶಿವಮೊಗ್ಗ (ನ.17): ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ಸಂಭಾಷಣೆಯಲ್ಲಿ ಏನು ಮಾತನಾಡುತ್ತಿದ್ದಾರೆ? ಯಾರ ಜೊತೆ ಮಾತನಾಡುತ್ತಿದ್ದಾರೆ? ಏನು ನಿರ್ದೇಶನ ಕೊಡುತ್ತಿದ್ದಾರೆ? ಈ ಎಲ್ಲವೂ ಗೊತ್ತಾಗಬೇಕು. ತಂದೆಯ ಅಧಿಕಾರಿದಲ್ಲಿ ಮಗ ಮೂಗು ತೂರಿಸಿದ್ದಾರೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ತೀರ್ಥಹಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 136 ಸ್ಥಾನಗಳು ಸಿಕ್ಕಿದೆ ಎಂಬ ಕಾರಣಕ್ಕೆ ಏನು ಮಾಡಿದರೂ ನಡೆಯುತ್ತದೆ ಎಂದು ಹೇಗೆ ಬೇಕೆಂದರೆ ಹಾಗೆ ಅಧಿಕಾರ ನಡೆಸಿದರೆ ಆಗುವುದಿಲ್ಲ. ತಂದೆ ಸಿದ್ದರಾಮಯ್ಯ ಅವರಿಗೆ ಅಧಿಕಾರದ ಹಕ್ಕು ಇದೆ. ಆದರೆ, ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅದರಲ್ಲಿ ಮೂಗು ತೂರಿಸಿದ್ದಾರೆ. ಇದು ರಾಜ್ಯದ ಜನರ ಅರಿವಿಗೆ ಬರಬೇಕು. ಈ ಬಗ್ಗೆ ತನಿಖೆ ನಡೆಸಬೇಕು. ಏನಾಗಿದೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ಸಿದ್ದು ಸರ್ಕಾರದ ರಿಮೋಟ್‌ ಯತೀಂದ್ರ ಕೈಲಿ: ರಾಜೀವ್‌ ಚಂದ್ರಶೇಖರ್ ವ್ಯಂಗ್ಯ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ 6 ಪೈಸೆ ಕೂಡ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ. ಆದರೆ, 6 ತಿಂಗಳಲ್ಲಿ ಇಷ್ಟು ಕೆಟ್ಟ ಹೆಸರು ಪಡೆದಂತಹ ಸರ್ಕಾರ ಇನ್ನೊಂದಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ 40 ಪರ್ಸೆಂಟ್‌ ಸರ್ಕಾರ ಎಂದು ಬೊಬ್ಬೆ ಹೊಡೆದು, ಅಧಿಕಾರಕ್ಕೆ ಬಂದ ತಾವು ಮಾಡುತ್ತಿರುವುದೇನು? ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲದರಲ್ಲೂ, ಎಲ್ಲರೂ ಮೂಗು ತೂರಿಸುತ್ತಿದ್ದಾರೆ. ಇದು ರಾಜ್ಯ ಸರ್ಕಾರ ತಲೆತಗ್ಗಿಸುವಂತಹ ವಿಚಾರ ಎಂದು ಛೇಡಿಸಿದರು.

ಯತೀಂದ್ರ ವಿಡಿಯೋ ಬಗ್ಗೆ ತನಿಖೆಗೆ ಬಿಜೆಪಿ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿಡಿಯೋ ಸಂಬಂಧ ತನಿಖೆ ನಡೆಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಶುಕ್ರವಾರ ನಗರದಲ್ಲಿ ಮಾಜಿ ಸಚಿವರಾದ ಆರ್‌.ಅಶೋಕ್‌, ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮತ್ತು ಕೋಟ ಶ್ರೀನಿವಾಸ ಪೂಜಾರಿ ಪ್ರತ್ಯೇಕವಾಗಿ ಮಾತನಾಡಿ ಯತೀಂದ್ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಶೋಕ್‌ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಬಂದಾಗಿಲಿನಿಂದಲೂ ಮುಖ್ಯಮಂತ್ರಿ ಅಧಿಕಾರವನ್ನು ಚಲಾಯಿಸುತ್ತಿರುವುದು ಜಗಜ್ಜಾಹೀರಾಗಿದೆ. 

5 ವರ್ಷದಲ್ಲಿ 3000 ಕರ್ನಾಟಕ ಪಬ್ಲಿಕ್‌ ಶಾಲೆ ಶುರು: ಸಚಿವ ಮಧು ಬಂಗಾರಪ್ಪ

ಕಾಂಗ್ರೆಸ್‌ ಎಂದರೆ ಈ ರೀತಿಯ ದಂಧೆಯ ಮಾಡುವುದಲ್ಲಿ ಪರಿಣಿತಿ ಪಡೆದುಕೊಂಡಿದೆ. ವಿಡಿಯೋ ಬಗ್ಗೆ ತನಿಖೆಯಾಗಬೇಕು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದರು. ಆಶ್ವತ್ಥನಾರಾಯಣ ಮಾತನಾಡಿ, ಯತೀಂದ್ರ ಸಿದ್ದರಾಮಯ್ಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿರುವುದಕ್ಕೆ ವೈರಲ್ ಆಗಿರುವ ವಿಡಿಯೋ ನಿದರ್ಶನವಾಗಿದ್ದು, ಕೂಡಲೇ ಯತೀಂದ್ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಚುನಾಯಿತ ಪ್ರತಿನಿಧಿ ಅಲ್ಲದವರ ಎಟಿಎಂ ಸರ್ಕಾರ ಆಗಿದೆ. ತಂದೆಯ ಹೆಸರಲ್ಲಿ ಅಧಿಕಾರ ದುರ್ಬಳಕೆಯಾಗುತ್ತಿದೆ. ಕಾನೂನಿನ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಈಗ ಏನು ಹೇಳುತ್ತಾರೆ. ಈ ಸಂಬಂಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

click me!