
ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ‘ಸ್ಟಿಂಗ್ ಆಪರೇಷನ್’ (ಕುಟುಕು ಕಾರ್ಯಾಚರಣೆ) ಸಂಚಿನ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಲೇ ಬೇಕು ಎಂದು ಸಚಿವ ಡಾ। ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್ ಮೇಲ್ ಮಾಡಲು ಸ್ಟಿಂಗ್ ಆಪರೇಷನ್ ಮಾಡಿದ್ದು, ಇದರಲ್ಲಿ ಕಾಂಗ್ರೆಸ್ನವರ ಕೈವಾಡವಿದೆ. ಪುತ್ತೂರು ಟಿಕೆಟ್‌ಗಾಗಿ ಈ ಸ್ಟಿಂಗ್ ನಡೆದಿದ್ದು, ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕಿದೆ ಎಂದು ಶುಕ್ರವಾರವಷ್ಟೇ ಆರೋಪಿಸಿದ್ದ ಯತೀಂದ್ರ, ಶನಿವಾರ ಚಾಮರಾಜನಗರದಲ್ಲಿ ಮಾತನಾಡಿ, ಈ ಸ್ಟಿಂಗ್ ಆಪರೇಷನ್ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಲೇ ಬೇಕು ಎಂದು ಪುನರುಚ್ಚರಿಸಿದರು.
‘2023ರಲ್ಲಿ ಮಾಡಿರುವ ವಿಡಿಯೋವನ್ನು ಈಗ ಯಾಕೆ ಆಚೆ ಬಿಟ್ಟಿದ್ದಾರೋ ಗೊತ್ತಿಲ್ಲ. ಅಪ್ಪಾಜಿಯವರ ತೇಜೋವಧೆ ಮಾಡಲು ಈ ರೀತಿ ಷಡ್ಯಂತ್ರ ಮಾಡಿದ್ದಾರೆ. ಆ ವಿಡಿಯೋದಲ್ಲಿ ಇಬ್ಬರು ಕಾಣಿಸಿಕೊಂಡಿದ್ದಾರೆ. ಒಬ್ಬಳು ನಮ್ಮ ಪಕ್ಷದ ಕೃಪಾ ಆಳ್ವ ಹಾಗೂ ಮತ್ತೊಬ್ಬ ಖಾಸಗಿ ಸುದ್ದಿಸಂಸ್ಥೆಯ ಮುಖ್ಯಸ್ಥ. ಶುಕ್ರವಾರ ಈ ಬಗ್ಗೆ ಅಪ್ಪನೇ ಮಾತನಾಡಿದ್ದಾರೆ. ಸತ್ಯಾಸತ್ಯತೆ ಹೊರ ಬರಬೇಕು. ಈ ಸ್ಟಿಂಗ್ ಆಪರೇಷನ್ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಲೇ ಬೇಕು. ನಮ್ಮ ಸರ್ಕಾರ ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ಈ ಪ್ರಕರಣದ ತನಿಖೆ ನಡೆಸಲಿದೆ ಎಂಬ ವಿಶ್ವಾಸವಿದೆ’ ಎಂದು ಅವರು ತಿಳಿಸಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ನಮ್ಮ ತಂದೆಯವರನ್ನು ಭೇಟಿಯಾಗಬೇಕು ಎಂದು ಇಚ್ಛೆ ವ್ಯಕ್ತಪಡಿಸಿದ್ದಾರೆ. ಖಂಡಿತವಾಗಿಯೂ ತಂದೆಯವರು ಭೇಟಿಯಾಗಿ ಮಾತನಾಡುತ್ತಾರೆ. ಆದರೆ, ಆ ಬಗ್ಗೆ ನಾನಿನ್ನು ತಂದೆಯವರನ್ನು ಕೇಳಿಲ್ಲ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.