ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ವಿರೋಧ ಮಾಡುವುದಾಗಲೀ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ದಾವಣಗೆರೆ (ಜ.01): ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರನ್ನು ಆಯ್ಕೆ ಮಾಡಿದ್ದು ರಾಷ್ಟ್ರೀಯ ನಾಯಕರು. ಆಯ್ಕೆ ಬಗ್ಗೆ ವಿರೋಧಿಸುವುದು ತಪ್ಪು ಎಂದರು. ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ವಿರೋಧ ಮಾಡುವುದಾಗಲೀ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಯಾರೇ ಆಗಿದ್ದರೂ ಟೀಕೆ ಮಾಡುವುದು ಸರಿಯಲ್ಲ. ಪಕ್ಷದ ವಿರುದ್ಧವಾಗಿ ಬಹಿರಂಗವಾಗಿ ಮಾತನಾಡುವುದೂ ಸರಿಯಲ್ಲ. ಯಾರೇ ಆಗಿದ್ದರೂ ನಿಮ್ಮ ದೂರು, ಸಮಸ್ಯೆಗಳು ಇದ್ದರೆ ಬಹಿರಂಗ ಹೇಳಿಕೆ ನೀಡುವುದು ನಿಲ್ಲಿಸಿ. ಕೇಂದ್ರ ನಾಯಕರ ಜೊತೆಗೆ ಮಾತನಾಡಬೇಕು. ಪಕ್ಷದ ವರಿಷ್ಠರಾದ ಅಮಿತ್ ಶಾ, ರಾಜನಾಥ್ ಸಿಂಗ್, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಳಿ ಮಾತನಾಡಲಿ. ಏನೇ ಸಮಸ್ಯೆಗಳಿದ್ದರೆ, ತಪ್ಪಾಗಿದ್ದರೆ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
3ರಿಂದ 4 ಲೋಕಸಭಾ ಕ್ಷೇತ್ರ ಜೆಡಿಎಸ್‌ಗೆ?: ಎಚ್.ಡಿ.ಕುಮಾರಸ್ವಾಮಿ
ಆರೋಪ ಬೇಡ, ತನಿಖೆ ಆಗಲಿ: ಈ ವೇಳೆ ಯಡಿಯೂರಪ್ಪ ಅವಧಿಯಲ್ಲಿ 40 ಸಾವಿರ ಕೋಟಿ ಭ್ರಷ್ಟಾಚಾರ ಕುರಿತು ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ ಅವರು, ಈಗ ಅಧಿಕಾರ ಕಾಂಗ್ರೆಸ್ ಕೈಯಲ್ಲಿದೆ, ಆರೋಪ ಪ್ರತ್ಯಾರೋಪ ಮಾಡುವುದಕ್ಕಿಂತ ತನಿಖೆ ನಡೆಸಲಿ. ನಾಗಮೋಹನ್ ದಾಸ್ ನೇತೃತ್ವದ ಸಮಿತಿಯಿಂದ ತನಿಖೆಯಾಗುತ್ತಿದೆ, ಅದರಲ್ಲಿ ದಾಖಲೆಗಳಿದ್ದರೆ ಬಹಿರಂಗ ಪಡಿಸಲಿ. ರಾಜಕೀಯದ ಕಾರಣ ಆರೋಪ ಪ್ರತ್ಯಾರೋಪ ಬಗ್ಗೆ ಮಾತನಾಡುವುದಿಲ್ಲ ಎಂದರು.
ಕನ್ನಡಿಗರ ಬಂಧನ ವಿರುದ್ಧ ಭಾರಿ ಹೋರಾಟ: ಕನ್ನಡ ನಾಮಫಲಕಗಳ ಅಳವಡಿಕೆ ಕಡ್ಡಾಯಕ್ಕೆ ಅಗ್ರಹಿಸಿ ಹೋರಾಟ ನಡೆಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ 53ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕನ್ನಡ ನೂರಕ್ಕೂ ಹೆಚ್ಚು ಸಂಘಟನೆಗಳು ಒಗ್ಗೂಡಿ ವಿರೋಧಿಸಿದ್ದು, ಪ್ರತಿಭಟನೆಯ ಎಚ್ಚರಿಕೆ ನೀಡಿವೆ. ಕನ್ನಡ ಸಂಘಟನೆಗಳ ಈ ನಿರ್ಧಾರಕ್ಕೆ ಹಿರಿಯ ಸಾಹಿತಿಗಳು ಬೆಂಬಲ ಸೂಚಿಸಿದ್ದಾರೆ.
ಶುಕ್ರವಾರ ಕನ್ನಡ ಹೋರಾಟಗಾರರ ಬಂಧನ ವಿರೋಧಿಸಿ ವಸಂತ ನಗರದ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಸಭಾಂಗಣದಲ್ಲಿ ನಡೆದ ಕನ್ನಡ ಸಂಘಟನೆಗಳ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದು, ಪ್ರಮುಖ ಎರಡು ನಿರ್ಣಯಗಳನ್ನು ಕೈಗೊಂಡರು.
ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಬಣಜಿಗರು ಸುಮ್ಮನಿರುವುದಿಲ್ಲ: ಜಗದೀಶ್ ಶೆಟ್ಟರ್
ಕನ್ನಡೇತರ ನಾಮಫಲಕ ತೆರವಿಗೆ ಒತ್ತಾಯಿಸಿ ನಡೆದ ಹೋರಾಟದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿದಂತೆ ಬಂಧನಕ್ಕೊಳಗಾಗಿರುವ 53ಕ್ಕೂ ಹೆಚ್ಚು ಕಾರ್ಯಕರ್ತರನ್ನು ಕೂಡಲೇ ಬಿಡುಗಡೆಗೊಳಿಸಬೇಕು. ರಾಜ್ಯ ಸರ್ಕಾರ ಎಲ್ಲ ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕೆಂಬ ಸರ್ಕಾರವನ್ನು ಒತ್ತಾಯಿಸುವ ಕುರಿತು ಒಮ್ಮತದ ನಿರ್ಣಯವನ್ನು ಕೈಗೊಳ್ಳಲಾಯಿತು.