ಮಹೇಶ್ ಕುಮಟಳ್ಳಿ ಕೊನೆಗೂ ಸಮಾಧಾನ: BSY ಕೊಟ್ರು ಬಂಪರ್ ಬಹುಮಾನ

Published : Feb 08, 2020, 10:34 AM ISTUpdated : Feb 08, 2020, 10:44 AM IST
ಮಹೇಶ್ ಕುಮಟಳ್ಳಿ ಕೊನೆಗೂ ಸಮಾಧಾನ: BSY ಕೊಟ್ರು ಬಂಪರ್ ಬಹುಮಾನ

ಸಾರಾಂಶ

ಉಪಚುನಾವಣೆಯಲ್ಲಿ ಗೆದ್ದರೂ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಅಥಣಿ ಶಾಸಕ ಮಹೇಶ್ ಕುಟಮಟಳ್ಳಿ ಕೊನೆಗೂ ಕೂಲ್ ಆಗಿದ್ದಾರೆ. ಜಾರಕಿಹೊಳಿ ಬ್ರದರ್ಸ್ ಸಮ್ಮುಖದಲ್ಲಿ ಕಮಟಳ್ಳಿಯನ್ನು ಸಿಎಂ ಸಮಾಧಾನಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು, (ಫೆ.08):  ರಮೇಶ್ ಜಾರಕಿಹೊಳಿ ಹಾಗೂ ಸಿಎಂ ಯಡಿಯೂರಪ್ಪ ಕೊನೆಗೂ ಮಹೇಶ್ ಕುಮಟಳ್ಳಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಮಹೇಶ್ ಕುಮಟಳ್ಳಿ ತೀವ್ರ ಅಸಮಾಧಾನಗೊಂಡಿದ್ದರು. ಇದರಿಂದ ಯಡಿಯೂರಪ್ಪ ಅವರು ಜಾರಕಿಹೊಳಿ ಬ್ರದರ್ಸ್ ಸಮ್ಮುಖದಲ್ಲಿ  ಮಹೇಶ್ ಕುಮಟಳ್ಳಿಯನ್ನ ಸಮಾಧಾನ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

'ಕುಮಟಳ್ಳಿಗೆ ಸಚಿವ ಸ್ಥಾನ ಕೊಟ್ಟಿದ್ರೆ ಗೌರವ ಹೆಚ್ಚಾಗ್ತಾ ಇತ್ತು' 

ನಿನ್ನೆ (ಶುಕ್ರವಾರ) ರಮೇಶ್ ಜಾರಕಿಹೊಳಿ ಅವರು ಮಹೇಶ್ ಕುಮಟಳ್ಳಿ ಅವರನ್ನು ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಪ್ರಮುಖ ನಿಗಮ ಮಂಡಳಿ ನೀಡುವಂತೆ ರಮೇಶ್, ಸಿಎಂಗೆ ಮನವಿ ಮಾಡಿದ್ದಾರೆ.

ಕೊನೆಗೂ ಬಿಎಸ್‌ವೈ ರಮೇಶ್ ಜಾರಕಿಹೊಳಿ ಮನವಿಗೆ ಸ್ಪಂದಿಸಿದ್ದು, ಮಹೇಶ್ ಕುಮಟಳ್ಳಿಗೆ ಪ್ರಬಲ ನಿಗಮ ಮಂಡಳಿ ಹುದ್ದೆ ನೀಡುವುದಾಗಿ ಹೇಳಿದ್ದಾರೆ. ಇದರಿಂದ ಕುಮಟಳ್ಳಿ ಸಮಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಅವರು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬಿಎಸ್‌ವೈ ಸಂಪುಟಕ್ಕೆ ಸೇರ್ಪಡೆಯಾದ 10 ನೂತನ ಸಚಿವರ ಒಂದಿಷ್ಟು ಮಾಹಿತಿ ನಿಮಗಾಗಿ

ಬೈ ಎಲೆಕ್ಷನ್‌ನಲ್ಲಿ ಗೆದ್ದ 11 ಪಕ್ಷಾಂತರಿಗಳ ಪೈಕಿ 10 ಶಾಸಕರನ್ನು ಮಾತ್ರ ಮಂತ್ರಿ ಮಾಡಲಾಗಿದೆ. ಮಹೇಶ್ ಕುಮಟಳ್ಳಿ ಅವರನ್ನು ಕೈಬಿಟ್ಟಿದ್ದಾರೆ. ಇದರಿಂದ ಅವರು ಮುನಸಿಕೊಂಡಿದ್ದರು. ಇದೀ ಜಾರಕಿಹೊಳಿ ಬ್ರದರ್ಸ್ ಸೇರಿಕೊಂಡು ರಾಜಿ ಸಂಧಾನ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ: ಸಿ.ಟಿ.ರವಿ ಆಗ್ರಹ
ಕರಾವಳಿಯಲ್ಲಿ ಶಿವಗಿರಿ ಮಠ ಶಾಖೆಗೆ 5 ಎಕರೆ: ಸಿಎಂ ಸಿದ್ದರಾಮಯ್ಯ ಭರವಸೆ