
ಬೆಂಗಳೂರು, [ಜ.18]: ಸಿಎಂ ಬಿಎಸ್ ಯಡಿಯೂರಪ್ಪನವರು ಹೇಳಿದಂತೆಯೇ ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿದರು.
ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುವ ಸಂದರ್ಭದಲ್ಲಿ ವಿಮಾನದಲ್ಲಿ ಬಿಎಸ್ ಯಡಿಯೂರಪ್ಪ ಅವರು ಅಮಿತ್ ಶಾ ಜತೆಗೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿದ್ದಾರೆ.
ಸುಮಾರು 40 ನಿಮಿಷಗಳ ಪ್ರಯಾಣದುದ್ದಕ್ಕೂ ವಿಮಾನದಲ್ಲಿ ಬಿಎಸ್ ವೈ ಹಾಗೂ ಶಾ ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ಸುದಿರ್ಘವಾಗಿ ಚರ್ಚೆ ನಡೆಸಿದರು. ಈ ವೇಳೆ ಸಂಪುಟ ವಿಸ್ತರಣೆಗೆ ಶಾ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ಶಾಕ್ ಕೊಟ್ಟ ಹೈಕಮಾಂಡ್: ಸಚಿವರಾಗ್ಬೇಕೆಂದು ಬಿಜೆಪಿಗೆ ಹೋದವರಿಗೆಲ್ಲ ಇಲ್ಲ ಮಂತ್ರಿಗಿರಿ?
ಸಂಪುಟ ವಿಸ್ತರಣೆಗೆ ಅಸ್ತು ಎಂದಿರೋ ಅಮಿತ್ ಶಾ, ಉಪಚುನಾವಣೆಯಲ್ಲಿ ಗೆದ್ದವರನ್ನ ಸಂಪುಟಕ್ಕೆ ಸೇರಿಸಿಕೊಳ್ಳಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಆದ್ರೆ, ಕಥೆಯೇನೂ ಅನ್ನೋದನ್ನ ದೆಹಲಿ ಬನ್ನಿ ಚರ್ಚಿಸೋಣ ಎಂದಿದ್ದಾರಂತೆ.
ಸೋತವರನ್ನ ಏನು ಮಾಡೋಣ..? ಸೋತವರಿಗೆ ಮಂತ್ರಿಗಿರಿ ಕೊಡದಿದ್ರೆ ಅಸಮಾಧಾನ ಹೊರಹಾಕ್ತಾರೆ ಎಂದು ಬಿಎಸ್ ವೈ, ಶಾಗೆ ಮನವರಿಕೆ ಮಾಡಿಕೊಟ್ಟರು.
ಇದಕ್ಕೆ ಪ್ರತಿಕ್ರಿಯಿಸಿರುವ ಶಾ, ಸೋತವರನ್ನ ಮಂತ್ರಿ ಮಾಡುವ ಬಗ್ಗೆ ದೆಹಲಿಯಲ್ಲಿ ತೀರ್ಮಾನಿಸೋಣ. ಜೆ ಪಿ ನಡ್ಡಾ ಜೊತೆ ಚರ್ಚೆ ಮಾಡಿ. ಅವರು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಎಸ್ ವೈ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬಿಎಸ್ ವೈಗೆ ಒಂದು ಕಡೆ ಸಿಹಿಯಾದ್ರೆ ಮತ್ತೊಂದೆಡೆ ಕಹಿಯೊಂದಿಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಾಪಸ್ಸಾದರು. ನಾಳೆ [ಭಾನುವಾರ] ವಿದೇಶ ಪ್ರಯಾಣ ಕೈಗೊಳ್ಳಲಿದ್ದಾರೆ. ಇದರಿಂದ ಸಂಪುಟ ವಿಸ್ತರಣೆ ಏನಿದ್ರೂ ಅಲ್ಲಿಂದ ಬಂದ ನಂತರವೇ.
ಸಂಪುಟ ವಿಸ್ತರಣೆ ಈ ವಾರವಾಗುತ್ತೆ. ಮುಂದಿನ ವಾರವಾಗುತ್ತೆ ಎಂದು ಬಿಎಸ್ ವೈ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿದ್ದ ನೂತನ ಶಾಸಕರಿಗೆ ಕೊನೆಗೂ ಸಚಿವರಾಗಿ ಸಂಪುಟ ಸೇರುವ ಸಮಯ ಹತ್ತಿರವಾದಂತಾಗಿದೆ. ಮತ್ತೊಂದೆಡೆ ಉಪ ಚುನಾವಣೆಯಲ್ಲಿ ಸೋತವರ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.