
ಬೆಂಗಳೂರು, (ಜು.17): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ದೆಹಲಿ ಪ್ರವಾಸ ರಾಜ್ಯ ರಾಜಕಾರಣದಲ್ಲಿ ಹಲವು ಚರ್ಚೆಗೆ ಗ್ರಾಸವಾಗಿದೆ.
ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ ಬಿಎಸ್‌ವೈ ದಿಲ್ಲಿ ಭೇಟಿ ಭಾರೀ ಕುತೂಹಲ ಮೂಡಿಸಿದೆ. ಇದರ ಮಧ್ಯೆ ಸಿಎಂ ರಾಜಧಾನಿ ಭೇಟಿಯ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮೋದಿ ಭೇಟಿಯಾದ ಯಡಿಯೂರಪ್ಪ: 10 ನಿಮಿಷ ಚರ್ಚೆ
ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ವಿಶೇಷ ವಿಮಾನದಲ್ಲಿ ಪುತ್ರರೊಂದಿಗೆ ದೆಹಲಿಗೆ ತೆರಳಿದ ಯಡಿಯೂರಪ್ಪ 6 ದೊಡ್ಡ-ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.
ರಾಜ್ಯದ ವಿಷಯಗಳನ್ನು 6 ಬ್ಯಾಗ್ ನಲ್ಲಿ ಹಾಕಿದ್ದರೋ, ಅಥವಾ ಅದರಲ್ಲಿ ಬೇರೆ ಏನಿತ್ತು ಎನ್ನುವುದು ಗೊತ್ತಿಲ್ಲ. ನಿನ್ನೆ ಪ್ರಧಾನಿಯವರನ್ನು ಭೇಟಿ ಮಾಡಲು ಹೋದಾಗ 6 ಬ್ಯಾಗ್ ಗಳೂ ಹೋದವೋ ಅಥವಾ ಅವರು ಒಬ್ಬರೇ ಮಾತ್ರ ಹೋಗಿದ್ದಾರೆಯೇ ಎನ್ನುವುದು ಗೊತ್ತಿಲ್ಲ. ಅದರ ಬಗ್ಗೆ ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.