ಮತ್ತೆ ಸಚಿವರ ಖಾತೆ ಅದಲು-ಬದಲು ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ..!

Published : Jan 21, 2021, 05:17 PM ISTUpdated : Jan 21, 2021, 05:23 PM IST
ಮತ್ತೆ ಸಚಿವರ ಖಾತೆ ಅದಲು-ಬದಲು ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ..!

ಸಾರಾಂಶ

ಸಂಪುಟ ವಿಸ್ತರಣೆಯಾಗಿ 10ದಿನದ ಬಳಿಕ ಮುಖ್ಯಮಂತ್ರ ಬಿಎಸ್ ಯಡಿಯೂರಪ್ಪ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಜೊತೆಗೆ ಕೆಲ ಸಚಿವರ ಖಾತೆ ಅದಲು-ಬದಲು ಮಾಡಿದ್ದ ಅಸಮಾಧಾನಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದ ಹೀಗೆ... 

ಬೆಂಗಳೂರು, (ಜ.21): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಸಚಿವರ ಖಾತೆಗಳ ಅದಲು-ಬದಲು ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.

ಹೌದು...ನೂತನ ಸಚಿವರುಗಳಿಗೆ ಸಿಎಂ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಜೊತೆ ಮಾ ಹಳೆ ಸಚಿವರ ಖಾತೆಯನ್ನೂ ಸಹ ಬದಲಾವಣೆ ಮಾಡಿದ್ದು, ಇದು ಅಸಮಾಧಾನಕ್ಕೆ ಕಾರಣವಾಗಿದೆ.

ಈ ಖಾತೆ ನಾನೇನು ಮಾಡಲಿ? ಬೇಡವೇ ಬೇಡ ಎಂದ ಸಚಿವ

ಎಂಟಿಬಿ ನಾಗರಾಜ್, ಸುಧಾಕರ್, ಗೋಪಾಲಯ್ಯ, ನಾರಾಯಣಗೌಡ, ಮಾಧುಸ್ವಾಮಿ ಸೇರಿದಂತೆ ಇನ್ನೂ ಕೆಲವರು ತಮ್ಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದು, ಸಿಎಂ ಮೇಲೆ ಮುನಿಸಿಕೊಂಡಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಖಾತೆ ಹಂಚಿಕೆ  ಸಮಯದಲ್ಲಿ ಇದೆಲ್ಲಾ ಸಹಜ. ಎಲ್ಲರನ್ನೂ ಕರೆದು ಮಾತಾಡಿದ್ದೇನೆ. ಸ್ವಲ್ಪ ದಿನದ ಬಳಿಕ ಖಾತೆಗಳ ಅದಲು ಬದಲು ಮಾಡೋಣ ಎಂದು ಸ್ಪಷ್ಟಪಡಿಸಿದರು.

ಮಾಧುಸ್ವಾಮಿ, ಗೋಪಾಲಯ್ಯ ಎಲ್ಲರೂ ಸಮಾಧಾನವಾಗಿದ್ದಾರೆ. ಯಾರಿಗೂ ಅಸಮಾಧಾನವಿಲ್ಲ. ಅವರೆಲ್ಲರನ್ನೂ ಕರೆದು ನಾನು ಮಾತನಾಡುತ್ತೇನೆ. ಅವರು ಈಗ ನೀಡಿದ ಖಾತೆಯಲ್ಲಿ ಸ್ವಲ್ಪ ದಿವಸ ಕೆಲಸ ಮಾಡಲಿ. ಸರಿ ಹೋಗಲಿಲ್ಲ ಅಂದರೆ ಆಮೇಲೆ ಉತ್ತಮ ಖಾತೆ ನೀಡೋಣ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!