
ಬೆಂಗಳೂರು, (ಡಿ.31): ಕಳೆದ ಒಂದೂವರೆ ವರ್ಷದ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹೊರತುಪಡಿಸಿ ಬೇರೆ ಯಾವುದೇ ಹೇಳಿಕೆಗಳ ಬಗ್ಗೆ ಗಮನಕೊಟ್ಟಿಲ್ಲ. ಆದ್ದರಿಂದ ನನ್ನ ಖುರ್ಚಿಗೆ ಯಾವುದೇ ಆತಂಕವಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಇಂದು (ಗುರುವಾರ) ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ, ನಮ್ಮ ರಾಜ್ಯದ ಉಸ್ತುವಾರಿ ಅರುಣ್‌ಸಿಂಗ್ ಮುಂದಿನ ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಪೂರ್ಣಾವಧಿಗೆ ನಾನು ಇದೇ ಕುರ್ಚಿಯಲ್ಲಿ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
ಸಂಚಲನ ಮೂಡಿಸಿದ ರಾಜಕೀಯ: ಕಾಂಗ್ರೆಸ್‌ನ ಇಬ್ಬರು ಹಾಲಿ, ಓರ್ವ ಮಾಜಿ ಶಾಸಕ ಬಿಜೆಪಿ ಸೇರ್ಪಡೆ
ಒಂದಿಬ್ಬರು ಅಸಮಾಧಾನ ಹೊರ ಹಾಕಿರಬಹುದು. ಅವರನ್ನು ಕರೆಸಿ ಮಾತನ್ನಾಡುತ್ತೇನೆ. ಅದಕ್ಕಾಗಿಯೇ ಜನವರಿ 4 ಮತ್ತು 5 ರಂದು ವಿಭಾಗವಾರು ಸಭೆ ಕರೆದಿದ್ದೇನೆ. ಅವರ ಸಮಸ್ಯೆಗಳನ್ನು ಕೇಳಿ ಬಗೆಹರಿಸುತ್ತೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.