
ಬೆಂಗಳೂರು (ಜೂ.07): ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಯನ್ನು ಅವರು ರಾಜೀನಾಮೆ ನೀಡುತ್ತಾರೆ ಅಥವಾ ಸ್ಥಾನ ತ್ಯಜಿಸುತ್ತಾರೆ ಎಂದು ಅರ್ಥೈಸುವುದು ಬೇಡ. ನಮ್ಮದು ಶಿಸ್ತಿನ ಪಕ್ಷ ಎಂಬ ಸಂದೇಶವನ್ನಷ್ಟೇ ಅವರು ಪ್ರತಿಪಕ್ಷಗಳಿಗೆ ರವಾನಿಸಿದ್ದಾರೆಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಲಗ್ಗೆರೆಯಲ್ಲಿ ಭಾನುವಾರ ಶಾಸಕ ಮುನಿರತ್ನ ಅವರು ಆಯೋಜಿಸಿದ್ದ ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಒಂದು ಲಕ್ಷ ಆಹಾರ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಿಎಂ ರಾಜೀನಾಮೆ ವಿಚಾರದ ಬಗ್ಗೆ ತಿಳಿಸಿದರು.
ವಿರೋಧಿಗಳಿಗೆ ಟಕ್ಕರ್, ಹೈಕಮಾಂಡ್‌ಗೆ ಸಂದೇಶ, ಬಿಎಸ್‌ವೈ ರಾಜೀನಾಮೆ ಹೇಳಿಕೆ ಹಿಂದಿನ ಲೆಕ್ಕಾಚಾರವಿದು ..
ಮುಖ್ಯಮಂತ್ರಿ ಯಾವ ದೃಷ್ಟಿಯಲ್ಲಿ ಈ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಅವರು ನಮ್ಮ ಅಗ್ರಮಾನ್ಯ ನಾಯಕರು. ನಾನು ಯಾವುದೇ ಕುರ್ಚಿಗೆ ಅಂಟಿಕೊಳ್ಳಲ್ಲ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ನಿರ್ಣಯಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಅವರು ಹೇಳಿದ್ದಾರೆ. ಹಾಗೆ ಹೇಳಿದ ತಕ್ಷಣ ಅವರು ಮುಖ್ಯಮಂತ್ರಿ ಹುದ್ದೆ ತ್ಯಜಿಸುತ್ತಾರೆಂದು ಅರ್ಥವಲ್ಲ. ಪಕ್ಷಕ್ಕೆ ಬದ್ಧರಾಗಿರುವ ಸಂದೇಶವನ್ನಷ್ಟೇ ಅವರು ಪ್ರತಿಪಕ್ಷಕ್ಕೆ ನೀಡಿದ್ದಾರೆ ಎಂದರು.
ಅವರು ಈಗ ನಮ್ಮ ಮುಖ್ಯಮಂತ್ರಿಗಳಾಗಿದ್ದಾರೆ. ಮುಖ್ಯಮಂತ್ರಿಗಳಾಗಿಯೇ ಮುಂದುವರಿಯುತ್ತಾರೆ. ಈ ಬಗ್ಗೆ ಯಾವ ಗೊಂದಲ ಅಥವಾ ಅನುಮಾನ ಬೇಡ. ಬಿಜೆಪಿ ಕೇಡರ್ ಆಧಾರಿತ ಪಕ್ಷ. ಹೀಗಾಗಿ ಇಂಥ ವಿಷಯಗಳಿಗೆ ಹೆಚ್ಚು ಮಹತ್ವ ಕೊಡುವ ಪದ್ಧತಿ ನಮ್ಮಲ್ಲಿಲ್ಲ ಎಂದು ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.