ಬಿಜೆಪಿಯ ಮತ್ತೋರ್ವ ಶಾಸಕನಿಗೆ ಕೊರೋನಾ: ಒಂದೇ ಜಿಲ್ಲೆಯ ಮೂವರು ಶಾಸಕರಿಗೆ ಸೋಂಕು

Published : Aug 01, 2020, 08:34 PM ISTUpdated : Aug 01, 2020, 08:38 PM IST
ಬಿಜೆಪಿಯ ಮತ್ತೋರ್ವ ಶಾಸಕನಿಗೆ ಕೊರೋನಾ: ಒಂದೇ ಜಿಲ್ಲೆಯ ಮೂವರು ಶಾಸಕರಿಗೆ ಸೋಂಕು

ಸಾರಾಂಶ

ಕರ್ನಾಟಕದ ಮತ್ತೋರ್ವ ಬಿಜೆಪಿ ಶಾಸಕನಿಗೆ ಕೊರೋನಾ ವಕ್ಕರಿಸಿದೆ.  ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಒಂದೇ ಜಿಲ್ಲೆಯ ಮೂವರು ಶಾಸಕರಿಗೆ ಸೋಂಕು ತಗುಲಿದಂತಾಗಿದ್ದು, ಬೆಂಬಲಿಗರಿಗೂ ಭೀತಿ ಶುರುವಾಗಿದೆ.  

ಕೊಪ್ಪಳ, (ಆ.01): ಕರ್ನಾಟಕ ಬಿಜೆಪಿಯ ಮತ್ತೋರ್ವ ಶಾಸಕನಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಈ ಮೂಲಕ ಕೊಪ್ಪಳ ಜಿಲ್ಲೆಯ ಮೂವರು ಶಾಸಕರಿಗೆ ಸೋಂಕು ದೃಢವಾದಂತಾಗಿದೆ.

ಈಗಾಗಲೇ  ಜಿಲ್ಲೆಯ ಶಾಸಕರಾದ ರಾಘವೇಂದ್ರ ಹಿಟ್ನಾಳ್ (ಕೊಪ್ಪಳ ಕ್ಷೇತ್ರ) ಹಾಗೂ ಪರಣ್ಣ ಮುನವಳ್ಳಿ (ಗಂಗಾವತಿ)ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. 

ಸಚಿವ ಬಿ.ಸಿ. ಪಾಟೀಲ್‌ಗೆ ಕೊರೋನಾ ದೃಢ: ಆತಂಕದಲ್ಲಿ ಕೊಪ್ಪಳದ ಜನತೆ..! 

ಇದರ ಬೆನ್ನಲ್ಲೇ ಇಂದು (ಶನಿವಾರ) ಯಲಬುರ್ಗಾ ಬಿಜೆಪಿ ಶಾಸಕ ಹಾಲಪ್ಪ ಆಚಾರ್‌ಗೂ ಸೋಂಕು ತಗುಲಿದೆ. ಈ ಬಗ್ಗೆ ಅವರೇ ಸಾಮಾಜಿಕ ಜಾತಣಗಳಲ್ಲಿ ಹೇಳಿಕೊಂಡಿದ್ದಾರೆ. 

ಈ ಕುರಿತಂತೆ ತಮ್ಮ ಫೇಸ್ ಬುಕ್‌ನಲ್ಲಿ  ಮಾಹಿತಿ ಹಂಚಿಕೊಂಡಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್, ಸ್ವಯಂ ಕೋವಿಡ್ ತಪಾಸಣೆಯನ್ನು ಮಾಡಿಸಿಕೊಳ್ಳಲಾಗಿ, ವೈದ್ಯಕೀಯ ವರದಿಯ ಅನುಸಾರ ಕೊರೋನಾ ಸೋಂಕು ದೃಢವಾಗಿದ್ದು, ವೈದ್ಯರ ಸಲಹೆಯನ್ವಯ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ. ತಮ್ಮೆಲ್ಲರ ಹಾರೈಕೆಯಿಂದ ಆರೋಗ್ಯವಾಗಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿರುವವರಲ್ಲಿ ಯಾರಿಗಾದರೂ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ತಪಾಸಣೆಯನ್ನು ಮಾಡಿಸಿಕೊಳ್ಳುವಂತೆ ಅವರು ವಿನಂತಿ ಮಾಡಿದ್ದಾರೆ.

ಯಲಬುರ್ಗಾ: ಶಾಸಕ ಹಾಲಪ್ಪ ಆಚಾರ್‌ ಕಾರ್‌ ಚಾಲಕನ ಪತ್ನಿಗೆ ಕೊರೋನಾ ಪಾಸಿಟಿವ್‌

ಮೊನ್ನೇ ಅಷ್ಟೇ ಹಾಲಪ್ಪ ಆಚಾರ್ ಕಾರು ಚಾಲಕನ ಪತ್ನಿಗೆ ಕೊರೋನಾ ಸೋಂಕು ತಗುಲಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಜೆಪಿ ಬುರುಡೆ ಗ್ಯಾಂಗಿಂದ ಗ್ಯಾರಂಟಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌