ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಿಸಲು ಕೋರಿ ಸಲ್ಲಿಸಿದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.
ಬೆಂಗಳೂರು (ಜು.8) : ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಿಸಲು ಕೋರಿ ಸಲ್ಲಿಸಿದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.
ಧಾರವಾಡ(Dharwad) ಕ್ಷೇತ್ರದಿಂದ ಆಯ್ಕೆಯಾಗಿದ್ದು, ಜನರ ಸಮಸ್ಯೆಗಳನ್ನು ಆಲಿಸುವುದು ಮತ್ತು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಗಮನ ಹರಿಸಲು ಧಾರವಾಡ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಧಾರವಾಡ ಭೇಟಿಗೆ ನಿರ್ಬಂಧ ವಿಧಿಸಿರುವ ಷರತ್ತನ್ನು ಸಡಿಲಗೊಳಿಸುವಂತೆ ಕೋರಿ ಮನವಿ ಮಾಡಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿದೆ.
ಶಾಸಕರ ಪರ ವಾದ ಮಂಡಿಸಿದ ವಕೀಲರು, ತಮ್ಮ ಅರ್ಜಿದಾರರು ಶಾಸಕರಾಗಿ ಆಯ್ಕೆಯಾಗಿದ್ದು, ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸುವುದು ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ವಾದಿಸಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ವಿಶೇಷ ಅಭಿಯೋಜಕರು, ಪ್ರಭಾವಿ ವ್ಯಕ್ತಿ ಆಗಿರುವುದರಿಂದ ತಮ್ಮ ಪ್ರಭಾವ ಬೀರಿ ಸಾಕ್ಷಿಗಳ ನಾಶ ಮಾಡುವ ಸಾಧ್ಯತೆಯೂ ಇದೆ. ಹೀಗಾಗಿ ಅರ್ಜಿ ತಿರಿಸ್ಕರಿಸಬೇಕು ಎಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿದೆ.
ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್ ಕೊಟ್ಟ ಕೋರ್ಟ್!