ದೇವೇಗೌಡರ ಮಾನಸಪುತ್ರ ದತ್ತ ಕಾಂಗ್ರೆಸ್ ನತ್ತ, ಸೇರ್ಪಡೆ ಅನಿವಾರ್ಯ: ವೈಎಸ್‌ವಿ

By Gowthami K  |  First Published Jan 5, 2023, 10:28 PM IST

ಮಾಜಿ ಪ್ರಧಾನಿ ದೇವೇಗೌಡರ ಮಾನಸಪುತ್ರ ವೈ ಎಸ್ ವಿ ದತ್ತ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿಯಾಗಿದ್ದು, ಜನವರಿ 15ರ ಬಳಿಕ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದ್ದಾರೆ. ದೇವೇಗೌಡರು ನನ್ನದ್ದು ತಂದೆ ಮಕ್ಕಳ ಸಂಬಂಧ. ಅನಿವಾರ್ಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದು, ಇದನ್ನು ಹೇಳಲು ಮುಜುಗರ ನನ್ನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ.


ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿಕ್ಕಮಗಳೂರು(ಜ.5): ಮುಂದಿನ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ರಾಜ್ಯದಲ್ಲಿ ಇನ್ನೇನು ಕೆಲ ತಿಂಗಳಷ್ಟೇ ಬಾಕಿ ಉಳಿದಿದೆ.ಈಗಾಗಲೇ ರಾಜಕೀಯ ಪಕ್ಷಗಳಲ್ಲಿ ಚುನಾವಣೆಯ ಕಾವು ಏರತೊಡಗಿದ್ದು ಪಕ್ಷ ಸಂಘಟನೆಯ ತಯಾರಿಯಲ್ಲಿ ತೊಡಗಿವೆ. ಇದರ ನಡುವೆ ಒಂದು ಪಕ್ಷದಿಂದ ಮತ್ತೋಂದು ಪಕ್ಷಕ್ಕೆ ಪಕ್ಷಾಂತರ ಪರ್ವವೂ ಆರಂಭಗೊಂಡಿದ್ದು ಮಾಜಿ ಪ್ರಧಾನಿ ದೇವೇಗೌಡರ ಮಾನಸಪುತ್ರ ಮಾಜಿ ಶಾಸಕ ವೈ ಎಸ್ ವಿ ದತ್ತ ಜೆಡಿಎಸ್ ತೊರೆದು ಕಾಂಗ್ರೇಸ್ ನತ್ತ ಮುಖಮಾಡಿದ್ದಾರೆ. ಸಂಕ್ರಾಂತಿ ಕಳೆದ ನಂತರ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿರುವ ಬಗ್ಗೆ  ಘೋಷಣೆ ಮಾಡಿದ್ದಾರೆ. ಚಿಕ್ಕಮಗಳೂರಿನ ಕಡೂರು ತಾಲೂಕಿನ  ವೈ ಎಸ್ ವಿ  ದತ್ತ ಅವರ ಸ್ವಗ್ರಾಮ ಯಗಟಿಯಲ್ಲಿ ಹಿರಿಯರು ಅಭಿಮಾನಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿರುವ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Tap to resize

Latest Videos

ಪ್ರಧಾನಿ ದೇವೇಗೌಡರು-ನನ್ನದ್ದು ತಂದೆ ಮಕ್ಕಳ ಸಂಬಂಧ
ಕಳೆದ ಐವತ್ತು ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದ್ದು ತಂದೆ ಮಕ್ಕಳ ಸಂಬಂಧ. ನಾನೆಲ್ಲೆ ಇದ್ದರೂ ಅವರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತೆ. ನಾನು ಜನವರಿ 15ರ ಬಳಿಕ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತ ಹೇಳಿದ್ದರು. ನನ್ನನ್ನ ವಿಧಾನ ಪರಿಷತ್ ಸದಸ್ಯನನ್ನಾಗಿ ಮಾಡಿದ್ದೇ ದೇವೇಗೌಡರು. ಅದು ನನ್ನ ರಾಜಕೀಯ ಜೀವನಕ್ಕೆ ಸಿಕ್ಕ ತಿರುವು. ಇದೀಗ ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ. ಇದನ್ನ ಅವರಿಗೆ ಹೇಳಲು ಒಂದು ರೀತಿ ಮುಜುಗರವಾಗುತ್ತದೆ. ಆದರೆ, ದೇವೇಗೌಡರು ನನ್ನ ಪರಿಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ಭಾವನೆ ಎಂದು ಭಾವುಕರಾದರು. 

ಜೆಡಿಎಸ್‌ಗೆ ಮರಳಲು ದತ್ತಗೆ ಗಡುವು ; ಪ್ರಜ್ವಲ್ ರೇವಣ್ಣ

ಕಾಂಗ್ರೆಸ್ ಸೇರಬೇಕೆಂಬ ಸಾರ್ವತ್ರಿಕ ಅಭಿಪ್ರಾಯ
ಚುನಾವಣೆಯಲ್ಲಿ ಸೋತರು, ಕಡೂರಿನಲ್ಲಿ ಜನರ ನಿರಂತರ ಸಂಪರ್ಕದಲ್ಲಿದ್ದೇನೆ. ಕಳೆದ ಒಂದೂವರೆ ವರ್ಷದಿಂದಲೂ ತಾಲ್ಲೂಕಿನಲ್ಲಿ ಎಲ್ಲೇ ಹೋದರೂ ಕಾಂಗ್ರೆಸ್ ಸೇರಬೇಕೆಂಬ ಸಾರ್ವತ್ರಿಕ ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಹಾಗಾಗಿ, ಜನಾಭಿಪ್ರಾಯ, ಅಭಿಮಾನಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯದಂತೆ ನನ್ನ ಸಮಾನ ಮನಸ್ಕ ಸ್ನೇಹಿತರಿರುವ ಕಾಂಗ್ರೆಸ್ ಪಕ್ಷ ಸೇರುವ ನಿರ್ಧಾರ ಮಾಡಿದ್ದೇನೆ ಎಂದರು. ಕಾಂಗ್ರೆಸ್ ಪಕ್ಷದಿಂದ ಕರೆ ಬಂದಿದ್ದು, ಜನವರಿ 15ರಂದು ಪಕ್ಷಕ್ಕೆ ಸೇರಲು ಸೂಚಿಸಿದ್ದಾರೆ. ಅಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರುತ್ತೇನೆ ಎಂದರು.

Karnataka Politics: ದತ್ತಾ ಕಾಂಗ್ರೆಸ್ ಸೇರುವುದು ಅವರಿಗೆ ಬಿಟ್ಟಿದ್ದು: ಸಿದ್ದರಾಮಯ್ಯ

click me!