ಯುವನಿಧಿ ಯೋಜನೆ ಯಾವಾಗ ಜಾರಿಯಾಗುತ್ತೆ ಗೊತ್ತಾ?: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Published : Aug 31, 2023, 04:45 AM IST
ಯುವನಿಧಿ ಯೋಜನೆ ಯಾವಾಗ ಜಾರಿಯಾಗುತ್ತೆ ಗೊತ್ತಾ?: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಸಾರಾಂಶ

ನಮ್ಮ ಕಾಂಗ್ರೆಸ್‌ ಪಕ್ಷ ಕೊಟ್ಟಭರವಸೆಯಂತೆ 4ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ್ದು, ಜನವರಿ ವೇಳೆಗೆ ‘ಯುವನಿಧಿ’ ಯೋಜನೆಯನ್ನೂ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಮೈಸೂರು (ಆ.31): ನಮ್ಮ ಕಾಂಗ್ರೆಸ್‌ ಪಕ್ಷ ಕೊಟ್ಟ ಭರವಸೆಯಂತೆ 4ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ್ದು, ಜನವರಿ ವೇಳೆಗೆ ‘ಯುವನಿಧಿ’ ಯೋಜನೆಯನ್ನೂ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವ ಣಾ ಪೂರ್ವದಲ್ಲಿ ನಾವು ನೀಡಿದ್ದ ಭರವಸೆಯಂತೆ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ನೀಡಿದ್ದ ಆಶ್ವಾಸನೆ ಈಡೇರಿಸಿದ್ದೇವೆ. ಈ ಮೂಲಕ ವಿಪಕ್ಷಗಳ ಆರೋಪ ಸುಳ್ಳು ಎಂಬುದ ನ್ನೂ ಸಾಬೀತುಪಡಿಸಿದ್ದೇವೆ ಎಂದರು.

ರಾಜ್ಯ ದಿವಾಳಿಯಾಗಲಿಲ್ಲ: ನಾವು ಬಡವರು ಮತ್ತು ಮಧ್ಯಮ ವರ್ಗದವರ ಪರ ಯೋಜನೆ ಘೋಷಿಸಿದಾಗ ಬಿಜೆಪಿ ನಾಯಕರು ಇನ್ನಿಲ್ಲದ ಆರೋಪ ಮಾಡಿದರು. ಸುಳ್ಳಿನ ಸುರಿಮಳೆಗರೆದರು. ಸ್ವತಃ ಪ್ರಧಾನಿ ಮೋದಿ ಅವರೇ ರಾಜ್ಯ ದಿವಾಳಿಯಾಗುತ್ತದೆ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದರು. ಆದರೆ ಈಗ ಗ್ಯಾರಂಟಿ ಯೋಜನೆ ಜಾರಿಯಾಗಿದೆ. ನಮ್ಮ ಕಾರ್ಯಕ್ರಮಗಳ ಜಾರಿಯಿಂದ ರಾಜ್ಯ ದಿವಾಳಿಯಾಗಲಿಲ್ಲ. ಇದರಿಂದ ಬಡವ-ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ. ಈಗ ಮೋದಿ ಅವರ ಮಾತು ಪರಮ ಸುಳ್ಳು ಎನ್ನುವುದು ಸಾಬೀತಾಗಿದೆ ಎಂದು ಸಿದ್ದರಾಮಯ್ಯ ಛೇಡಿಸಿದರು.

ರಾಜ್ಯದ 9ನೇ ಏರ್‌ಪೋರ್ಟ್‌ ಶಿವಮೊಗ್ಗದಲ್ಲಿಂದು ಶುರು: ವಿಮಾನ ನಿಲ್ದಾಣದ ವಿಶೇಷತೆಗಳು ಗೊತ್ತಾ?

ತಾಳೆ ಹಾಕಿ ನೋಡಿ: ನಾವೀಗ ರಾಜ್ಯ ಸರ್ಕಾರದ ನೂರು ದಿನಗಳ ಸಾಧನೆಯ ಕಿರು ಹೊತ್ತಿಗೆ ಹೊರ ತಂದಿದ್ದೇವೆ. ಬೇಕಿದ್ದರೆ ಈ ಪುಸ್ತಕ ಮತ್ತು ನಾವು ಚುನಾವಣಾ ಪ್ರಣಾಳಿಕೆ ಯಲ್ಲಿ ಕೊಟ್ಟಿದ್ದ ಭರವಸೆಗಳನ್ನು ಪಟ್ಟಿಮಾಡಿ ತಾಳೆ ಹಾಕಿ ನೋಡಿ. ಆಗ ನಿಮಗೂ ನುಡಿದಂತೆ ನಡೆದ ನಮ್ಮ ಸರ್ಕಾರದ ಮೇಲೆ ಹೆಮ್ಮೆ ಮೂಡುತ್ತದೆ ಎಂದು ಸವಾಲೆಸೆದ ಅವರು, ಭಾರತದ ರಾಜಕೀಯ ಇತಿಹಾಸದಲ್ಲೇ ಒಂದೇ ಯೋಜನೆಯಲ್ಲಿ ಇಷ್ಟುದೊಡ್ಡ ಪ್ರಮಾಣದ ಜನೋಪಯೋಗಿ ಕಾರ್ಯಕ್ರಮ ಜಾರಿಯಾಗಿಲ್ಲ ಎಂದರು.

ರಾಜಕಾರಣದಿಂದ ಹೊರಗೆ ಹೆಜ್ಜೆ ಇಟ್ಟಿಲ್ಲ, ಸಮಯ, ಸಂದರ್ಭ ಎಲ್ಲದಕ್ಕೂ ಉತ್ತರ ಕೊಡುತ್ತೆ: ನಿಖಿಲ್‌

ಇನ್ನು, ಕರ್ನಾಟಕದಲ್ಲಿ 1.24 ಕೋಟಿ ಮಂದಿ ಗೃಹಲಕ್ಷ್ಮಿ ಯೋಜನೆಗೆ ಅರ್ಹರಿದ್ದಾರೆ. ಇದರಲ್ಲಿ 1.11 ಕೋಟಿ ಮಂದಿ ನೋಂದಣಿ ಆಗಿದ್ದು, ಅವರ ಖಾತೆಗೆ ಇನ್ನು ಮಾಸಿಕ 2000 ಖಾತೆಗೆ ಜಮಾ ಆಗುತ್ತದೆ. ‘ಶಕ್ತಿ’ಯೋಜನೆಯಡಿ ಈವರೆಗೆ 48.5 ಕೋಟಿ ಮಹಿಳೆಯರು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ಇದೇ ವೇಳೆ ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!