
ಬೆಂಗಳೂರು(ಜೂ.23): ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಕಾಂಗ್ರೆಸ್ ನಾಯಕರ ಮೇಲೆ ಇಡಿ ಅಸ್ತ್ರ ಪ್ರಯೋಗಿಸುತ್ತಿದೆ. ಬಿಜೆಪಿಯಲ್ಲಿ ತಪ್ಪು ಮಾಡಿದವರೇ ಇಲ್ಲವೇ? ಅವರ ಮೇಲೆ ಯಾಕೆ ಇಡಿ ದಾಳಿ ಮಾಡಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಪ್ರಶ್ನಿಸಿದ್ದಾರೆ.
ಚಾಮರಾಜಪೇಟೆಯ ಸಿರ್ಸಿ ವೃತ್ತದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜಕೀಯವಾಗಿ ಕಿರುಕುಳ ನೀಡಲು ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಮೂಲಕ ಪಿತೂರಿ ನಡೆಸಲಾಗಿದೆ. ರಾಜ್ಯದಲ್ಲೂ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್ ಹಾಗೂ ನನ್ನ ಮೇಲೆ ಇಡಿ ದಾಳಿ ನಡೆಸಲಾಗಿದೆ. ನರೇಂದ್ರ ಮೋದಿ ಅವರು ಆಡಳಿತಕ್ಕೆ ಬಂದ ಬಳಿಕ ಬಿಜೆಪಿಯವರು ಯಾರೂ ತಪ್ಪೇ ಮಾಡಿಲ್ಲವೇ? ಅವರ ಮೇಲೆ ಯಾಕೆ ಒಂದೂ ದಾಳಿ ನಡೆಸಿಲ್ಲ ಎಂದು ಕಿಡಿ ಕಾರಿದರು.
JDS ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್; ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?
ಬಿಜೆಪಿಯ ಅಕ್ರಮಗಳ ವಿರುದ್ಧ ಧ್ವನಿ ಎತ್ತುವುದೇ ಎಪ್ಪು ಎಂಬಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಡೆದುಕೊಳ್ಳುತ್ತಿವೆ. ಕೇಂದ್ರ ಮಟ್ಟದಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರನ್ನು ಹೆದರಿಸಲು ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹೆಸರಿನಲ್ಲಿ ಸತತವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ರಾಜ್ಯದಲ್ಲೂ ಐಟಿ-ಇಡಿ ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ. ನಾನು ಹೊಸ ಮನೆ ಕಟ್ಟಿದ್ದೇನೆ ಎಂಬ ಕಾರಣಕ್ಕೆ ನನ್ನ ಮೇಲೆ ದಾಳಿ ನಡೆಸಿದ್ದಾರೆ. ನಾನು ದೊಡ್ಡ ಮನೆ ಕಟ್ಟಿದ್ದೇ ತಪ್ಪಾ? ನಾನು ಮನೆ ಕಟ್ಟಿಕೊಳ್ಳುವುದನ್ನೂ ಬಿಜೆಪಿಯವರು ಸಹಿಸುವುದಿಲ್ಲವೇ ಎಂದು ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.