* ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಉದ್ಯೋಗ ಮೇಳ
* 115 ಮಂದಿಗೆ ಉದ್ಯೋಗ, 535 ಮಂದಿ ಎರಡನೇ ಹಂತಕ್ಕೆ ಆಯ್ಕೆ
* ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಶನಿವಾರ ನಡೆದ ಉದ್ಯೋಗ ಮೇಳ
ಬೆಂಗಳೂರು, (ಫೆ.26): ನಗರದ ಮಲ್ಲೇಶ್ವರಂನಲ್ಲಿ ನಡೆದ ಉದ್ಯೋಗ ಮೇಳದಲ್ಲಿ(ಝob Fair) 115 ಮಂದಿಗೆ ಉದ್ಯೋಗ ಸಿಕ್ಕಿದ್ದು, 535 ಮಂದಿ ಎರಡನೇ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹಾಕವಿ ಕುವೆಂಪು ರಸ್ತೆಯಲ್ಲಿರುವ ಮರಿಯಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಶನಿವಾರ ಉದ್ಯೋಗ ಮೇಳ ನಡೆಯಿತು. ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರೂ ಆಗಿರುವ ಕ್ಷೇತ್ರದ ಶಾಸಕ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಏರ್ಪಡಿಸಿದ್ದರು.
ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಈ ಮೇಳದಲ್ಲಿ 44 ಕಂಪನಿಗಳು ಭಾಗವಹಿಸಿದ್ದು, ಒಟ್ಟು 1,085 ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರು ನೋಂದಾಯಿಸಿಕೊಂಡು ಸಂದರ್ಶನದಲ್ಲಿ ಪಾಲ್ಗೊಂಡಿದ್ದರು. ಇವರ ಪೈಕಿ 115 ಮಂದಿಗೆ ಸಂಜೆಯ ಹೊತ್ತಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದರ ಜತೆಗೆ, 535 ಅಭ್ಯರ್ಥಿಗಳು ಎರಡನೇ ಸುತ್ತಿನ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಅಗತ್ಯವಿರುವ ಕೌಶಲ್ಯಗಳನ್ನು ಇಲಾಖೆಯ ವತಿಯಿಂದ ಉಚಿತವಾಗಿ ನೀಡಲಾಗುವುದು. ಇದರಲ್ಲಿ ಕಾರ್ಪೊರೇಟ್ ಜಗತ್ತಿನಲ್ಲಿ ಅಗತ್ಯವಿರುವ ಇಂಗ್ಲಿಷ್ ಭಾಷಾ ಸಂವಹನವನ್ನೂ ಕಲಿಸಲಾಗುವುದು. ಅಲ್ಲದೆ, ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಕಾಲೇಜುಗಳಲ್ಲಿ ಹಂತಹಂತವಾಗಿ ಮತ್ತು ವ್ಯವಸ್ಥಿತವಾಗಿ ಉದ್ಯೋಗ ಮೇಳಗಳನ್ನು ಏರ್ಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮೇಳದಲ್ಲಿ ಬೆಂಗಳೂರು ನಗರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಿ.ಎಲ್.ಕೃಷ್ಣಮೂರ್ತಿ, ಮರಿಯಪ್ಪ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಕೆ.ಬಿ.ಲೋಕೇಶ್ ಮತ್ತು ಸಂಸ್ಥೆಯ ಪ್ರಾಚಾರ್ಯರು, ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.
ಮಂಗಳೂರಿನಲ್ಲೂ ಉದ್ಯೋಗ ಮೇಳ
ನಮ್ಮ ಕುಡ್ಲದ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಮಾರ್ಚ್ 3 ರಂದು 'ಬೃಹತ್ ಉದ್ಯೋಗ ಮೇಳ' ಹಮ್ಮಿಕೊಳ್ಳಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು https://skillconnect.kaushalkar.com/app/student-jobfair ಲಿಂಕ್ ಬಳಸಿ ನೋಂದಾಯಿಸಿಕೊಳ್ಳಬಹುದು
ನಮ್ಮ ಕುಡ್ಲದ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವತಿಯಿಂದ ಮಾರ್ಚ್ 3 ರಂದು 'ಬೃಹತ್ ಉದ್ಯೋಗ ಮೇಳ' ಹಮ್ಮಿಕೊಳ್ಳಲಾಗಿದೆ.
ಆಸಕ್ತ, ಅರ್ಹ ಅಭ್ಯರ್ಥಿಗಳು ಕೆಳಗಿನ ಲಿಂಕ್ ಬಳಸಿ ನೋಂದಾಯಿಸಿಕೊಳ್ಳಬಹುದು.https://t.co/H1ooXXDpEA pic.twitter.com/uPKQD7DmoA
ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೃಹತ್ ಉದ್ಯೋಗ ಮೇಳ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮಾರ್ಚ್ ಮೂರನೇ ತಾರೀಖಿನಂದು ಮಂಗಳೂರಿನ ಎಜೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಉದ್ಯೋಗ ಮೇಳ ನಡೆಯಲಿದ್ದು, ನೂರಕ್ಕೂ ಅಧಿಕ ಕಂಪೆನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ. ಪದವೀಧರರು, ಇಂಜಿನಿಯರಿಂಗ್,ಡಿಪ್ಲೋಮಾ ಪದವೀಧರರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಸುಮಾರು 100ಕ್ಕೂ ಅಧಿಕ ಕಂಪೆನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು ,ಜಿಲ್ಲೆಯ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲೆಯ ಯುವ ಜನರಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
ಮಾರ್ಚ್ 3ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಮಂಗಳೂರು ನಗರದಲ್ಲಿರುವ ಎಜೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೂರಕ್ಕೂ ಅಧಿಕ ಕಂಪೆನಿಗಳು ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲಿದೆ. ಬಿ.ಎ, ಬಿ.ಕಾಂ, ಬಿ.ಎಸ್ಸಿ ಸೇರಿದಂತೆ ಪದವೀಧರರು, ಬಿ.ಇ, ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದಿದ್ದಾರೆ.