ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿ: ತ್ವರೆ ಮಾಡಿ

By Suvarna NewsFirst Published Jul 21, 2020, 5:30 PM IST
Highlights

ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲಿ? ಏನು? ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ರಾಯಚೂರು,(ಜು.21): ಕೋವಿಡ್-19 ಸಾಂಕ್ರಾಮಿಕ ರೋಗದ ನಿರ್ವಹಣೆಗಾಗಿ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

50 ಶುಶ್ರೂಷಕರು, 29 ಪ್ರಯೋಗಶಾಲಾ ತಂತ್ರಜ್ಞರು, 15 ಫಾರ್ಮಾಸಿಸ್ಟ್ ಮತ್ತು 50 ಡಿ-ಗ್ರೂಪ್ ಹುದ್ದೆಗಳು ಸೇರಿದಂತೆ ಒಟ್ಟು 143 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಹುದ್ದೆಗಳು ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ ಇವುಗಳಲ್ಲಿ ಯಾವುದೇ ಮೊದಲೊ ಅಲ್ಲಿಯವರೆಗೆ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತಿದೆ.

ಅರ್ಹ ಅಭ್ಯರ್ಥಿಗಳು 2020ರ ಜುಲೈ 24ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯಲ್ಲಿ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಹಾಜರಾಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!