BMRCL Recruitment 2022: ನಮ್ಮ ಮೆಟ್ರೋದಲ್ಲಿ ಕೆಲಸ ಖಾಲಿ ಇದೆ, ಇಂದೇ ಅರ್ಜಿ ಹಾಕಿ

By Suvarna News  |  First Published Dec 16, 2021, 9:37 PM IST
  • ಬಿಎಂಆರ್‌ಸಿಎಲ್ ನಲ್ಲಿ ಖಾಲಿ ಇರುವ 50 ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಜನವರಿ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನ
  • 5 ವರ್ಷಗಳ ಅವಧಿವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ

ಬೆಂಗಳೂರು(ಡಿ7): ಬೆಂಗಳೂರು (Bengaluru) ಮೆಟ್ರೋ ರೈಲು ನಿಗಮ ನಿಯಮಿತ (Bengaluru Metro Rail Corporation Limited-BMRCL)  ಗುತ್ತಿಗೆ ಆಧಾರದ ಮೇಲೆ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಸ್ಟೇಷನ್ ಕಂಟ್ರೋಲರ್/ ರೈಲು ನಿರ್ವಾಹಕರ 50 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 5 ವರ್ಷಗಳ ಅವಧಿವರೆಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಮಾಜಿ ಸೈನಿಕ ಸಿಬ್ಬಂದಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಸ್ಟೇಷನ್‌ ಕಂಟ್ರೋಲರ್ /ಟ್ರೈನ್ ಆಪರೇಟರ್ (ಎಸ್‌ಸಿ/ಟಿಒ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. 10ನೇ ತರಗತಿ, ಡಿಪ್ಲೋಮಾ ಪಾಸಾದ  ಅಭ್ಯರ್ಥಿಗಳು ಆನ್​​​ಲೈನ್​(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.in ಗೆ ಭೇಟಿ ನೀಡಲು ಕೋರಲಾಗಿದೆ. 

ವಿದ್ಯಾರ್ಹತೆ-ಅರ್ಜಿ ಶುಲ್ಕ: ಟ್ರೇನ್​ ಆಪರೇಟರ್​, ಸ್ಟೇಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್​​​​ನಿಂದ ಕಡ್ಡಾಯವಾಗಿ 10ನೇ ತರಗತಿ ಮತ್ತು ಡಿಪ್ಲೋಮಾ ಪಾಸಾಗಿರಬೇಕು. ಇದು ನಿವೃತ್ತ ಮಿಲಿಟರಿ ಸಿಬ್ಬಂದಿಗೆ ಆಯೋಜಿಸಲಾಗಿರುವ ವಿಶೇಷ ನೇಮಕಾತಿಯಾಗಿದ್ದು, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

Tap to resize

Latest Videos

undefined

ವಯೋಮಿತಿ ಮತ್ತು ಉದ್ಯೋಗ ಸ್ಥಳ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ. 

RDPR RECRUITMENT 2022: ಪಂಚಾಯತ್ ರಾಜ್ ಇಲಾಖೆಯಲ್ಲಿನ ಒಂಬುಡ್ಸ್ ಮನ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ವೇತನ ಮತ್ತು ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಶಾರ್ಟ್​​ಲಿಸ್ಟಿಂಗ್​ ಮತ್ತು ದಾಖಲಾತಿ ಪರಿಶೀಲನೆ ಹಾಗೂ
ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಮತ್ತು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ  33,040 ರೂ ರಿಂದ 63,490ರೂ ವೇತನ ನಿಗದಿಯಾಗಿದೆ.

ONGC Recruitment 2022: ONGCಯಲ್ಲಿನ HR ಮತ್ತು PRO ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

BE, B Tech ಆದವರಿಗೆ BHELನಲ್ಲಿ ಉದ್ಯೋಗ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Heavy Electronics Limited ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 15 ಪ್ರಾಜೆಕ್ಟ್​ ಎಂಜಿನಿಯರ್(Project Engineer) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಬಿಎಸ್ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಪೋಸ್ಟ್​​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್​ bhel.com ಗೆ ಭೇಟಿ ನೀಡಬಹುದಾಗಿದೆ.

ESIC IMO Recruitment 2022: MBBS ಆದವರಿಗೆ ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ

ಆಯ್ಕೆಯಾದ ಅಭ್ಯರ್ಥಿಗಳು ಹೈದರಾಬಾದ್ ನಲ್ಲಿ ಕೆಲಸ ಮಾಡಬೇಕಾಗುತ್ತದೆ. ತಿಂಗಳಿಗೆ  ₹ 35,000- 50,000 ಸಂಬಳ ನಿಗದಿಪಡಿಸಲಾಗಿದೆ. ಪ್ರಾಜೆಕ್ಟ್​ ಎಂಜಿನಿಯರ್(Electronics)-6, ಪ್ರಾಜೆಕ್ಟ್​ ಎಂಜಿನಿಯರ್ (Mechanical)-6, ಪ್ರಾಜೆಕ್ಟ್​ ಎಂಜಿನಿಯರ್ (computer science​​)-3 ಹೀಗೆ ಒಟ್ಟು 15 ಹುದ್ದೆಗಳು ಖಾಲಿ ಇದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲ್ಲಿ ಸಾಮಾನ್ಯ ವರ್ಗ- 28 ವರ್ಷ, ಒಬಿಸಿ- 31 ವರ್ಷ, SC/ST-33 ವರ್ಷ ವಯಸ್ಸು ಮೀರಿರಬಾರದು. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್​ ಮೂಲಕ ಕಳುಹಿಸಬೇಕು.
ಮ್ಯಾನೇಜರ್(HR)
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್
ರವೀಂದ್ರನಾಥ್ ಠಾಗೂರ್ ರಸ್ತೆ
ಮಚಲಿಪಟ್ನಂ-521001
ಆಂಧ್ರ ಪ್ರದೇಶ

click me!