ಕರ್ನಾಟಕದಲ್ಲಿ 5000+ ನೌಕರಿ ಸೃಷ್ಟಿಗೆ 9 ಯೋಜನೆಗೆ ಸಿಎಂ ಓಕೆ

Published : Dec 24, 2024, 07:17 AM IST
ಕರ್ನಾಟಕದಲ್ಲಿ 5000+ ನೌಕರಿ ಸೃಷ್ಟಿಗೆ 9 ಯೋಜನೆಗೆ ಸಿಎಂ ಓಕೆ

ಸಾರಾಂಶ

ಮುಖ್ಯಮಂತ್ರಿಗಳು, ಇಂದಿನ ಸಭೆಯಲ್ಲಿ ಮೂರು ಹೊಸ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಆರು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದ ಸುಮಾರು 5,605 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು(ಡಿ.24):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64ನೇ ಸಭೆಯಲ್ಲಿ ಒಟ್ಟು 9823 ಕೋಟಿ ರು. ಮೊತ್ತದ ಬಂಡವಾಳ ಹೂಡಿಕೆಗೆ ಸಂಬಂಧಿಸಿದ 9 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಇಂದಿನ ಸಭೆಯಲ್ಲಿ ಮೂರು ಹೊಸ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಆರು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದ ಸುಮಾರು 5,605 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ವಿವರಿಸಿದ್ದಾರೆ.

ITI, BSc, Diploma ಆದವರಿಗೆ 70 ಸಾವಿರ ಸಂಬಳದ ಉದ್ಯೋಗ; ಲಾಸ್ಟ್ ಡೇಟ್ ಯಾವಾಗ?

ಅನುಮೋದನೆ ನೀಡಿರುವ ಯೋಜನೆಗಳ ಪೈಕಿ, ಮೆ.ಡಿ.ಎನ್ ಸಲ್ಯೂಷನ್ಸ್ ಇಂಡಿಯಾ ಪ್ರೈ.ಲಿ ಸಂಸ್ಥೆಯ 998 ಕೋಟಿ ರು. ಹೊಸ ಬಂಡವಾಳ ಹೂಡಿಕೆ ಯೋಜನೆಯಿಂದ 467 ಉದ್ಯೋಗ, ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್‌ ಮ್ಯಾನುಫ್ಯಾಕ್ಚರಿಂಗ್‌ ಕ್ಲಸ್ಟರ್‌ನಲ್ಲಿ ಮೆ. ಸೈಲೆಕ್ಟ್ರಿಕ್ ಸೆಮಿ ಕಂಡಕ್ಟರ್‌ ಮ್ಯಾನುಫ್ಯಾಕ್ಷರಿಂಗ್‌ ಪ್ರೈ.ಲಿ ಸಂಸ್ಥೆಯು 3425.60 ಕೋಟಿ ರು. ಬಂಡವಾಳ ಹೂಡಿಕೆಯಿಂದ 460 ಉದ್ಯೋಗ ಹಾಗೂ ಮೆ. ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯ 2150 ಕೋಟಿ ರು. ಹೂಡಿಕೆಯಿಂದ 3500 ಉದ್ಯೋಗ ಸೃಷ್ಟಿಯಾಗಲಿವೆ ಎಂದು ತಿಳಿಸಿದರು.

ಜೊತೆಗೆ ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಲಾಭಾಂಶದಲ್ಲಿ ಪಾಲು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಈ ಕುರಿತು ಅನುಸರಿಸುತ್ತಿರುವ ನಿಯಮಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಇದೇ ವೇಳೆ ಸೂಚನೆ ನೀಡಿದರು.

BRO Recruitment 2024: ರಕ್ಷಣಾ ಸಚಿವಾಲಯದ ಬಿಆರ್‌ಓ ನಲ್ಲಿ 466 ಹುದ್ದೆಗಳಿಗೆ

ಕೆಐಎಡಿಬಿಯಿಂದ ಜಮೀನು ಪಡೆದ ಕಂಪನಿಗಳು ನಿಗದಿತ ಅವಧಿಯಲ್ಲಿ ಕೈಗಾರಿಕೆ ಆರಂಭಿಸದಿದ್ದರೆ, ಆರಂಭಗೊಂಡ ಕೈಗಾರಿಕೆಗಳು ನಿಯಮಾವಳಿಗೆ ಅನುಸಾರವಾಗಿ ಕಾರ್ಯನಿರ್ವಹಿಸದೇ ಇದ್ದಲ್ಲಿ ದಂಡ ವಿಧಿಸುವುದು ಸೇರಿ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೃಷಿ ಸಚಿವ ಚೆಲುವರಾಯಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ವಾಣಿಜ್ಯ ಮತ್ರು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.

PREV
Read more Articles on
click me!

Recommended Stories

ಬೆಂಗಳೂರಿನ ಅಮರ್‌ ಸುಬ್ರಹ್ಮಣ್ಯ ಆಪಲ್‌ ಎಐ ಟೀಮ್‌ಗೆ ಉಪಾಧ್ಯಕ್ಷ!
ಸರಾಸರಿ ಮಾಸಿಕ ವೇತನ: ದೇಶದಲ್ಲಿಯೇ 2ನೇ ಸ್ಥಾನದಲ್ಲಿ ಕರ್ನಾಟಕ, ಸಿಗೋ ಸ್ಯಾಲರಿ ಎಷ್ಟು?