ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯಲ್ಲಿ ವಿವಿಧ ಹುದ್ದೆ ನೇಮಕಾತಿ

Published : Jan 30, 2020, 06:45 PM IST
ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯಲ್ಲಿ ವಿವಿಧ ಹುದ್ದೆ ನೇಮಕಾತಿ

ಸಾರಾಂಶ

ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್‌ಸಿಟಿಯು ಕೇಂದ್ರ ಸರ್ಕಾರದ ಸ್ಮಾರ್ಟ್‌ಸಿಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿಶೇಷ ವಾಹಕ ಸಂಸ್ಥೆಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದೆ. ಇದಕ್ಕೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು, (ಜ.30): ಅವಳಿ ನಗರ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಪ್ರಾಜೆಕ್ಟ್ ಇಂಜಿನಿಯರ್, ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ 15/2/2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

SSLC ಪಾಸಾದವರಿಗೆ ಉದ್ಯೋಗವಕಾಶ: 2792 ಹುದ್ದೆಗೆ ಅರ್ಜಿ ಆಹ್ವಾನ

ಉದ್ದೇಶಿತ ಸಂಸ್ಥೆಯಲ್ಲಿ ಪ್ರಮುಖ ಹುದ್ದೆಗಳಿಗೆ ಗುತ್ತಿಗೆ ಅಡಿಯಲ್ಲಿ 1 ವರ್ಷದ ಅವಧಿಗೆ ಕಾರ್ಯ ನಿರ್ವಹಿಸಲು ಹಾಗೂ ಒಂದು ವರ್ಷದ ಅವಧಿ ಮೀರದಂತೆ ಮುಂದುವರೆಸಲು (ಕಾರ್ಯನಿರ್ವಹಣೆ ಮತ್ತು ಯೋಜನಗೆ ಅವಶ್ಯಕತೆಗೆ ಅನುಗುನವಾಗಿ) ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿಗಳು www.hubballidharwadsmartcity.com ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಶಿಕ್ಷಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್‌ನೊಂದಿಗೆ ಇ-ಮೇಲ್ (smartcityhubballidharwad@gmail.com) ಮಾಡಬಹುದು. 

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ 0836-2355322 ಅಥವಾ 2355331ಗೆ ಕರೆ ಮಾಡಬಹುದು.

PREV
click me!

Recommended Stories

ಬೆಂಗಳೂರಿನ ಅಮರ್‌ ಸುಬ್ರಹ್ಮಣ್ಯ ಆಪಲ್‌ ಎಐ ಟೀಮ್‌ಗೆ ಉಪಾಧ್ಯಕ್ಷ!
ಸರಾಸರಿ ಮಾಸಿಕ ವೇತನ: ದೇಶದಲ್ಲಿಯೇ 2ನೇ ಸ್ಥಾನದಲ್ಲಿ ಕರ್ನಾಟಕ, ಸಿಗೋ ಸ್ಯಾಲರಿ ಎಷ್ಟು?