Koppal: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳ: ಶಾಸಕ ಹಿಟ್ನಾಳ

By Girish Goudar  |  First Published Mar 22, 2022, 4:12 AM IST

*   ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 30 ಸಾವಿರ ಹುದ್ದೆ ಖಾಲಿ
*  ಮಾತನಾಡಲು ಅವಕಾಶ ನೀಡದಿದ್ದಕ್ಕೆ ಗರಂ
*  371 ಜೆ ನಿಂದಲೂ ನಮ್ಮ ಭಾಗದ ಅಭ್ಯರ್ಥಿಗಳಿಗೆ ಅನುಕೂಲ 


ಕೊಪ್ಪಳ(ಮಾ.22): ನಮ್ಮ ಭಾಗದಲ್ಲಿ ಹೆಚ್ಚಿನ ನಿರುದ್ಯೋಗ ಕಂಡುಬರುತ್ತದೆ. ಈ ಭಾಗದಲ್ಲಿ ಶಿಕ್ಷಣದ ಪ್ರಮಾಣವು ಕಡಿಮೆ ಇರುವುದರಿಂದ ಇಂತಹ ಉದ್ಯೋಗ ಮೇಳ ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಈ ಭಾಗದ ಅಭ್ಯರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ(Raghavendra Hitnal) ಹೇಳಿದರು.

ಸೋಮವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಶಿವಶಾಂತವೀರ ಮಂಗಲ ಭವನದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳ-2022(Job Fair-2022) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Tap to resize

Latest Videos

Work From Home ಭಾರತಕ್ಕೆ ಸೂಕ್ತವಲ್ಲ ಎಂದ ಇನ್ಫಿ ನಾರಾಯಣಮೂರ್ತಿ

371 ಜೆ ನಿಂದಲೂ ನಮ್ಮ ಭಾಗದ ಅಭ್ಯರ್ಥಿಗಳಿಗೆ ಅನುಕೂಲವಾಗಿದೆ. ಇದರಿಂದ ಇನ್ನೂ ಹೆಚ್ಚಿನ ಅನುಕೂಲವಾಗಲು ಈ ಭಾಗದ ಜನಪ್ರತಿನಿಧಿಗಳಾದ ನಾವು ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡಿದ್ದೇವೆ. ಕಲ್ಯಾಣ ಕರ್ನಾಟಕ(Kalyana Karnataka) ಭಾಗದಲ್ಲಿ 30 ಸಾವಿರಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ ಇದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಮ್ಮ ಭಾಗದ ಹೆಚ್ಚು ವಿದ್ಯಾರ್ಥಿಗಳು(Students) ಭಾಗವಹಿಸುವ ಮೂಲಕ ಮುಂದೆ ಬರಬೇಕು ಎಂದರು.
ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಮಾತನಾಡಿ, ನಮ್ಮ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉದ್ದಿಮೆಗಳು ಇದ್ದು, ಅವುಗಳಲ್ಲಿ ಈಗಾಗಲೇ ಶೇ. 95ರಷ್ಟು ಭರ್ತಿಯಾಗಿವೆ. ಮುಂದಿನ ದಿನಮಾನಗಳಲ್ಲಿ ಅಲ್ಲಿ ಖಾಲಿಯಾಗುವ ಹುದ್ದೆಗಳಿಗೆ ಈ ಭಾಗದ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಬೇಕು. ಇಂದಿನ ದಿನಮಾನಗಳಲ್ಲಿ ಕೆಲಸ ಮಾಡಬೇಕಾದರೆ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶದಲ್ಲಿ ಕೆಲಸ ಮಾಡಲು, ಯಾವ ಭಾಗಕ್ಕಾದರೂ ಹೋಗಲು ಸಿದ್ಧರಿರಬೇಕು. ಮಾತೃಭಾಷೆಯ ಜತೆಗೆ ಎರಡು ಭಾಷೆ ಬರಬೇಕು. ಒಂದು ಹಿಂದಿ ಇನ್ನೊಂದು ಇಂಗ್ಲಿಷ್‌ ಎಂದು ಹೇಳಿದ ಅವರು, ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದು ಶುಭಾಶಯಗಳನ್ನು ತಿಳಿಸಿದರು.

ಭಾರತೀಯ ಸೇನೆಯ, ಬೆಳಗಾವಿಯ ಮೇಜರ್‌ ವಿಶ್ವನಾಥ ಮಾತನಾಡಿ, ಈ ಭಾಗದ ಅಭ್ಯರ್ಥಿಗಳು ಸೇನೆಯಲ್ಲಿ ಬಹಳ ಕಡಿಮೆ ಇದ್ದು, ಭಾರತೀಯ ಸೇನೆಯಲ್ಲಿ ಯುವಕರಿಗೆ ವಿಫುಲ ಅವಕಾಶಗಳಿದ್ದು, ಅದರ ಸದುಪಯೋಗವನ್ನು ಪಡೆದು ಮುಂದೆ ಬರಬೇಕು. ಅಭ್ಯರ್ಥಿಗಳು ಒಳ್ಳೆಯ ಕೌಶಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಿಲ್ಲಾಡಳಿತ ಉದ್ಯೋಗ ಮೇಳ ಹಮ್ಮಿಕೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಇದರಿಂದ ಈ ಭಾಗದ ಯುವಕರಿಗೆ ಹೆಚ್ಚಿನ ಉದ್ಯೋಗಗಳು ದೊರೆಯುವಂತಾಗುತ್ತವೆ ಎಂದರು.

ಇದೇ ಸಂದರ್ಭ ಸಾಂಕೇತಿಕವಾಗಿ ವಿವಿಧ ಕಂಪನಿಗಳಲ್ಲಿ ಉದ್ಯೋಗ(Jobs) ಅವಕಾಶ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣಪತ್ರಗಳನ್ನು ಗಣ್ಯರು ವಿತರಿಸಿದರು. ಉದ್ಯೋಗ ಮೇಳದಲ್ಲಿ 56 ವಿವಿಧ ಕಂಪನಿಗಳು ಭಾಗವಹಿಸಿದ್ದವು. ಒಟ್ಟು 2583 ಅಭ್ಯರ್ಥಿಗಳು ಮೇಳದಲ್ಲಿ ನೋಂದಣಿ ಮಾಡಿಕೊಂಡಿದ್ದರು. ಅವರಲ್ಲಿ 696 ಅಭ್ಯರ್ಥಿಗಳು ವಿವಿಧ ಕಂಪನಿಗಳ ವಿವಿಧ ಹುದ್ದೆಗಳಿಗೆ ಆಯ್ಕೆಯಾಗಿದ್ದು, 56 ಅಭ್ಯರ್ಥಿಗಳನ್ನು ಕಾಯ್ದಿರಿಸಲಾಗಿದೆ.

Government Jobs: ಕರ್ನಾಟಕದಲ್ಲಿ 2,52,902 ಸರ್ಕಾರಿ ಹುದ್ದೆ ಖಾಲಿ: ಬೊಮ್ಮಾಯಿ

ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷರಾದ ತಿಪ್ಪೇರುದ್ರಸ್ವಾಮಿ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಲತಾ ಗವಿಸಿದ್ದಪ್ಪ ಚಿನ್ನೂರ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್‌. ಪಾಟೀಲ್‌, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ ಸೇರಿದಂತೆ ಇತರರು ಇದ್ದರು.

ಮಾತನಾಡಲು ಅವಕಾಶ ನೀಡದಿದ್ದಕ್ಕೆ ಗರಂ

ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಅವರು ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ತಮಗೆ ಮಾತನಾಡಲು ಅವಕಾಶ ನೀಡದಿರುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಕ್ಕೆ ಮಾಡುತ್ತಿರುವ ಅವಮಾನ ಎಂದು ಕಿಡಿಕಾರಿದರು. ಉದ್ಯೋಗ ಮೇಳ ಆಯೋಜಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
 

click me!