ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ: ಫೆ. 8ರಂದು ಗಂಗಾವತಿಯಲ್ಲಿ ಉದ್ಯೋಗ ಮೇಳ

By Kannadaprabha News  |  First Published Feb 4, 2021, 9:32 AM IST

ಉದ್ಯೋಗ ಮೇಳದಲ್ಲಿ 20ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗಿ|  ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಎಲ್ಲ ಪದವೀಧರರು ಹಾಗೂ ಕಂಪ್ಯೂಟರ್‌ ತರಬೇತಿ ಪಡೆದ 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ| ಯಾವುದೇ ರೀತಿಯ ಪ್ರವೇಶ ಶುಲ್ಕ ಇಲ್ಲ| 


ಕೊಪ್ಪಳ(ಫೆ.04): ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ಸಂಯುಕ್ತಾಶ್ರಯದಲ್ಲಿ ಫೆ. 8ರಂದು ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿ(ಎನ್‌ಸಿಎಸ್‌) ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉದ್ಯೋಗ ಮೇಳವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆನೆಗುಂದಿ ರಸ್ತೆ, ಸಾಯಿ ದೇವಸ್ಥಾನದ ಹತ್ತಿರ, ಗಂಗಾವತಿಯಲ್ಲಿ ಫೆ. 8ರಂದು ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ನಡೆಯಲಿದೆ. ಈ ಮೇಳದಲ್ಲಿ 20ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ.

Latest Videos

undefined

ಖಾಲಿ ಹುದ್ದೆಗಳ ನೇಮಕಾತಿಗೆ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಎಲ್ಲ ಪದವೀಧರರು ಹಾಗೂ ಕಂಪ್ಯೂಟರ್‌ ತರಬೇತಿ ಪಡೆದ 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳ ನಕಲು ಪ್ರತಿಗಳು, ಬಯೋಡೆಟಾ, ಆಧಾರ್‌ ಸಂಖ್ಯೆ ಹಾಗೂ ಭಾವಚಿತ್ರಗಳೊಂದಿಗೆ ಹಾಜರಾಗಬೇಕು. ಯಾವುದೇ ರೀತಿಯ ಪ್ರವೇಶ ಶುಲ್ಕವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ದೂ.ಸಂ: 08539-220859, 8105848991 ಸಂಖ್ಯೆಗಳಿಗೆ ಸಂಪರ್ಕಿಸಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕೋವಿಡ್‌-19ರ ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

click me!