ಲಾಕ್‌ಡೌನ್‌ ಮಧ್ಯೆ ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ..!

Published : May 07, 2020, 04:49 PM IST
ಲಾಕ್‌ಡೌನ್‌ ಮಧ್ಯೆ ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ..!

ಸಾರಾಂಶ

ಕೊರೋನಾ ವೈರಸ್ ಲಾಕ್‌ಡೌನ್‌ ಮಧ್ಯೆ ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.  ಈ ಬಗ್ಗೆ ಸರ್ಕಾರ ಈಗಾಗಲೇ ಸೂಚನೆಯನ್ನು ಹೊರಡಿಸಿದೆ.

ಬೆಂಗಳೂರು, (ಮೇ.07) : ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಖಾಲಿ ಇರುವಂತ 1121 ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಸೂಚಿಸಿದೆ.

 ರಾಜ್ಯದ ಎಲ್ಲಾ ನಾಡಕಛೇರಿಗಳಿಗೆ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಹಂತದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಟೆಂಡರ್ ಕರೆಯಲು ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರು ಸೂಚನೆ ಹೊರಡಿಸಿದ್ದಾರೆ. 

ಕರ್ನಾಟಕ ಪೊಲೀಸ್ ಇಲಾಖೆಯ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ; ಆಸಕ್ತರಿಗೆ ಸುವರ್ಣವಕಾಶ! 

ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಟ್ಟ ಸರ್ಕಾರ
ನೇಮಕಾತಿಯ ವಿಕೇಂದ್ರೀಕೃತ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ವಹಿಸಿ, ಇದಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಮಟ್ಟದಲ್ಲಿ ಟೆಂಡರ್ ಅನ್ನು ಕರೆಯುವ ಪ್ರಾಧಿಕಾರಿಯನ್ನಾಗಿ ಹಾಗೂ ಇ-ಟೆಂಡರ್ ಅಂತಿಮಗೊಳಿಸುವ ಹಾಗೂ ಇನ್ನಿತರೆ ಅನುಮೋದಿನೆಯನ್ನು ನೀಡಲು, ಜಿಲ್ಲಾಧಿಕಾರಿಗಳಿಗೆ ಅಧಿಕಾರ ಪ್ರತ್ಯಾ ಯೋಜನೆ ನೀಡಿ ಸರ್ಕಾದ ಆದೇಶ ಹೊರಡಿಸಿದೆ.

ಡೇಟಾ ಎಂಟ್ರಿ ಆಪರೇಟರ್ ಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ಇ-ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ಹಾಗೂ ಮುಂದಿನ ದಿನಗಳಲ್ಲಿ ಇ-ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರದ ಆದೇಶದಂತೆ ಸಮಿತಿಯನ್ನು ರಚನೆ ಮಾಡಿಕೊಂಡು ಕ್ರಮವಹಿಸುವಂತೆ ನಿರ್ದೇಶನವನ್ನು ನೀಡಿದೆ.

ಹೀಗಾಗಿ ಸದ್ಯದಲ್ಲಿಯೇ ಖಾಲಿ ಇರುವ 1121 ಡೇಟಾ ಎಂಟ್ರಿ ಆಪರೇಟರ್ ಗಳ ನೇಮಕವನ್ನು ಹೊರ ಗುತ್ತಿಗೆಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ.

PREV
click me!

Recommended Stories

ಬೆಂಗಳೂರಿನ ಅಮರ್‌ ಸುಬ್ರಹ್ಮಣ್ಯ ಆಪಲ್‌ ಎಐ ಟೀಮ್‌ಗೆ ಉಪಾಧ್ಯಕ್ಷ!
ಸರಾಸರಿ ಮಾಸಿಕ ವೇತನ: ದೇಶದಲ್ಲಿಯೇ 2ನೇ ಸ್ಥಾನದಲ್ಲಿ ಕರ್ನಾಟಕ, ಸಿಗೋ ಸ್ಯಾಲರಿ ಎಷ್ಟು?