Aided Employees Association Karnataka: ಅನುದಾನಿತ ನೌಕರರ ಪ್ರತಿಭಟನೆ, ಮಾರ್ಚ್​ 4 ರಂದು ಶಾಲಾ-ಕಾಲೇಜು ಬಂದ್!

By Suvarna NewsFirst Published Feb 27, 2022, 3:50 PM IST
Highlights

ಮಾರ್ಚ್ 4ರಂದು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಬಂದ್ ಆಗಲಿದೆ.

ಬೆಂಗಳೂರು (ಫೆ.27): ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ (Karnataka State Aided School and Colleges Employees Association ) ಬೃಹತ್ ಪ್ರತಿಭಟನೆ (protest) ಹಮ್ಮಿಕೊಂಡಿದೆ. ಮಾರ್ಚ್ 4ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನು  ಬಂದ್ ಮಾಡಿ, ಫ್ರೀಡಂ ಪಾರ್ಕ್​ನಿಂದ  ವಿಧಾನಸೌಧದ ತನಕ ಬೃಹತ್ ರ್‍ಯಾಲಿ ನಡೆಯಲಿದ್ದು, ಅರ್ನಿದಿಷ್ಟ ಅಹೋರಾತ್ರಿ ಧರಣಿಗೂ ತಯಾರಾಗಿದ್ದೇವೆ ಎಂದು ರಾಜ್ಯಾಧ್ಯಕ್ಷ ಗೋಪಿನಾಥ್ ಮಾಹಿತಿ ನೀಡಿದ್ದಾರೆ.

ಮಾರ್ಚ್ 4 ರಂದು ಪ್ರಾಥಮಿಕ ಶಾಲೆಯಿಂದ ಹಿಡಿದು ಪದವಿ ಕಾಲೇಜನ್ನು ಬಂದ್‌ ಮಾಡಿ ಎಲ್ಲಾ ಶಿಕ್ಷಕರು, ಪ್ರಾಧ್ಯಾಪಕರು ತಮ್ಮ ಕುಟುಂಬ ಸಮೇತರಾಗಿ ಬೀದಿಗಿಳಿಯಲು ಸರಕಾರವೇ ಕಾರಣ ಎಂದು ಆರೋಪಿಸಿದ ಗೋಪಿನಾಥ್, ಮುಂಬರುವ ಬಜೆಟ್‌ ನಲ್ಲಿ ಅನುದಾನಿತ ನೌಕರರ ನ್ಯಾಯಯುತ ಬೇಡಿಕೆಯನ್ನು ಈಡೇರಿಸದೇ ಹೋದರೆ ನಮ್ಮ ಹೋರಾಟವನ್ನು ಮುಂದುವರೆಸುವ ಕೆಲಸವನ್ನು ಮಾಡುತ್ತೇವೆ.

Latest Videos

ರಾಜ್ಯದಲ್ಲಿ ಶಾಲೆಗಳನ್ನು ನಡೆಸುತ್ತಿರುವ ಸ್ವಾಮೀಜಿಗಳು ಕೂಡ ನಮಗೆ ಬೆಂಬಲ ನೀಡುತ್ತಿದ್ದಾರೆ. ಈಗಲಾದರೂ ನಮ್ಮ ನೋವನ್ನು ಅರ್ಥ ಮಾಡಿಕೊಂಡು ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಸರಕಾರಕ್ಕೆ ಮನವಿ ಮಾಡಿಕೊಳ್ಳತ್ತಿದ್ದೇನೆ ಎಂದು ಗೋಪಿನಾಥ್ ಹೇಳಿದ್ದಾರೆ.

Bengaluru College Turban Row: ಬೆಂಗಳೂರು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಟರ್ಬನ್ ತೆಗೆಯಲು ಸೂಚನೆ, ಸಿಖ್ ಸಮಿತಿ ವಿರೋಧ

ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಪಿಂಚಣಿ ಸೌಲಭ್ಯ ಒದಗಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ. 2006ರ ನಂತರ ನೇಮಕವಾದ ನೌಕರರಿಗೂ ಸರ್ಕಾರಿ ನೌಕರರಂತೆ ನೂತನ ಪಿಂಚಣಿ ಯೋಜನೆಯನ್ನು ಯಥಾವತ್ತಾಗಿ ನೀಡಬೇಕು. ಜೊತೆಗೆ ನೌಕರರ ಪಾಲಿನ ಶೇ.14 ರಷ್ಟು ಹಣವನ್ನು ಆಡಳಿತ ಮಂಡಳಿಗೆ ನೀಡಬೇಕು ಎಂದು ಇದೇ ವೇಳೆ ಒತ್ತಾಯಿಸಿದ್ದಾರೆ.

2014ರಿಂದಲೂ ಈ ಬಗ್ಗೆ  ಅನೇಕ ಮನವಿಯನ್ನು ಸಲ್ಲಿಸಿದ್ದರೂ, ಹೋರಾಟಗಳನ್ನು ಮಾಡಿದ್ದರೂ ಸರ್ಕಾರ ಮಾತ್ರ ತೀವ್ರ ನಿರ್ಲಕ್ಷ್ಯವಹಿಸುತ್ತಿದೆ ಎಂದು ಗೋಪಿನಾಥ್  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೂ ಕೂಡ ಆರೋಗ್ಯ ಸಿರಿ(ಜ್ಯೋತಿ ಸಂಜೀವಿನಿ) ಯೋಜನೆಯನ್ನು  ಅಳವಡಿಸಬೇಕು. ಖಾಲಿ ಹುದ್ದೆಗಳ ನೇಮಕಾತಿಗೆ  ವಿಧಿಸಿರುವ ನಿಯಮಗಳನ್ನು ಸಡಿಲಗೊಳಿಸಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯಗಳನ್ನು ಅನುದಾನಿತ ಶಾಲಾ ಮಕ್ಕಳಿಗೂ ನೀಡಬೇಕೆಂದು ವಿನಂತಿಸಿಕೊಂಡಿದ್ದಾರೆ.

ಕರ್ನಾಟಕದಲ್ಲಿ 18 ಕಂಪನಿಗಳಿಂದ ಮಳಿಗೆ ಸ್ಥಾಪನೆ, 15 ಸಾವಿರ ಉದ್ಯೋಗ ಸೃಷ್ಠಿ 

ಬದಲಾಯ್ತು ಶಾಲೆ ಬೇಸಿಗೆ ರಜೆ: ಕೆಲ ಮಹತ್ವದ ಬದಲಾವಣೆ ತಂದ ಶಿಕ್ಷಣ ಇಲಾಖೆ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳ (Primary and High School) ಬೇಸಿಗೆ ರಜೆಯನ್ನು ಶಿಕ್ಷಣ ಇಲಾಖೆ ಕೆಲ ಬದಲಾವಣೆ ಮಾಡಿದೆ. ಏಪ್ರಿಲ್ 9ಕ್ಕೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ  ಎಪ್ರಿಲ್ 10ರಿಂದ ಮೇ.15ರವರೆಗೆ ಬೇಸಿಗೆ ರಜೆ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಮುಂದಿನ ಅಂದ್ರೆ 2022-23 ಶೈಕ್ಷಣಿಕ ವರ್ಷ ಮೇ.16ರಿಂದ ಆರಂಭವಾಗಲಿದೆ.

ಈ ಹಿಂದೆ ಶಾಲಾ ಶೈಕ್ಷಣಿಕ ವರ್ಷವು ಮೇ.29ರಿಂದ ಆರಂಭವಾಗಿ ಎಪ್ರಿಲ್ 10ಕ್ಕೆ ಮುಕ್ತಾಯವಾಗುತ್ತಿತ್ತು. ಆದರೆ ಈ ಬಾರಿ ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಬೇಗವೇ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ಮೇ.16ರಿಂದ 2022-23ರ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

ಪ್ರಸಕ್ತ ವರ್ಷ ಏಪ್ರಿಲ್ 9ರಂದು ಶೈಕ್ಷಣಿಕ ವರ್ಷ ಕೊನೆಗೊಳ್ಳುವುದರಿಂದ ಪ್ರಾಥಮಿಕ ಶಾಲೆಗಳಲ್ಲಿ ಮಾರ್ಚ್ 24ರಿಂದ ಏಪ್ರಿಲ್ 4ರವರೆಗೆ ವಾರ್ಷಿಕ ಪರೀಕ್ಷೆ ನಡೆಸಿ, ಏಪ್ರಿಲ್ 9ರಂದು ಫಲಿತಾಂಶ ಪ್ರಕಟಿಸಬೇಕು. 8-9 ತರಗತಿಗಳಿರುವ ಪ್ರೌಢ ಶಾಲೆಗಳಲ್ಲಿ ಮಾರ್ಚ್ 21ರಿಂದ ಮಾರ್ಚ್ 26ವರೆಗೆ ವಿಷಯವಾರು ಪರೀಕ್ಷೆ, ಮಾ.29ರಂದು ದೈಹಿಕ ಶಿಕ್ಷಣ ಹಾಗೂ ಇತರೆ ಪರೀಕ್ಷೆ ನಡೆಸಿ, ಏಪ್ರಿಲ್ 7ರಂದು ಫಲಿತಾಂಶ ಪ್ರಕಟಿಸಬೇಕೆಂದು ಇಲಾಖೆ ಸೂಚಿಸಿದೆ.

click me!